ಅಥಣಿಯಲ್ಲಿ ಸವದಿ ಹಣೆಯಲು ಸಾಹುಕಾರ್ ಹೊಸ ಆಟ- ಮೂವರನ್ನು ಪಕ್ಷಕ್ಕೆ ಕರೆ ತರಲು ಯಶಸ್ವಿಯಾದ ರಮೇಶ್ ಜಾರಕಿಹೊಳಿ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮತದಾನ ಪ್ರಕ್ರಿಯೆ ನಡೆಯಬೇಕಿದೆ. ಅದಾಗಲೇ ಬಿಜೆಪಿ ಆಪರೇಷನ್ ಶುರು ಮಾಡಿದೆ. ಮುಖ್ಯವಾಗಿ ಅಥಣಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯನ್ನು ಹಣೆಯಲು ಸಾಹುಕಾರ್ ಹೊಸ ಆಟ ಶುರು ಮಾಡಿದ್ದಾರೆ.
ಕಳೆದ ಒಂದು ವಾರದಿಂದ ಆಪರೇಷನ್ ಕಮಲ ನಡೆಸಿದ ಮಾಜಿ ಸಚಿವ ರಮೇಶ್ ರಮೇಶ್ ಜಾರಕಿಹೊಳಿ ಸವದಿ ಆಪ್ತರ ಭೇಟಿ ಮಾಡಿ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ರಾತ್ರೋರಾತ್ರಿ ಆಪರೇಷನ್ ನಡೆಸಿದ ರಮೇಶ್ ಜಾರಕಿಹೊಳಿ, ಧರೆಪ್ಪ ಠಕ್ಕಣ್ಣವರ್, ನಾನಾಸಾಬ ಅವತಾಡೆ, ತಮ್ಮಣ್ಣ ಪೂಜಾರಿ ಮೂವರನ್ನು ಪಕ್ಷಕ್ಕೆ ಕರೆ ತಂದಿದ್ದಾರೆ ಸಾಹುಕಾರ್ ರಮೇಶ್ ಜಾರಕಿಹೊಳಿ.

ಈ ಬೆಳವಣಿಗೆಯನ್ನು ನೋಡುತ್ತಿದ್ದರೆ ಇನ್ನೂ ಎರಡು ಮೂರು ದಿನಗಳಲ್ಲಿ ರಾಜಕೀಯ ಚಿತ್ರ ಬದಲಾಗುವಂತೆ ಕಾಣಿಸುತ್ತಿದೆ. ಕಳೆದ ವರ್ಷ ಆಪರೇಷನ್ ಮೂಲಕವೇ ಬಿಜೆಪಿ ಸರ್ಕಾರವನ್ನು ರಚನೆ ಮಾಡಿತ್ತು. ಆದರೀಗ ಇನ್ನೂ ಚುನಾವಣೆ ಕೂಡ ಮುಗಿದಿಲ್ಲ ಅದಾಕಗಲೇ ಆಪರೇಷನ್ ಶುರುಮಾಡಿದೆ. ಲಕ್ಷ್ಮಣ ಸವದಿಯನ್ನು ಸೋಲಿಸಲು ಪಣತೊಟ್ಟಿರುವ ಜಾರಕಿಹೊಳಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.
ಹೀಗಾಗಿ ಸದ್ಯ ಅಥಣಿ ವಿಧಾನಸಭಾ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಇಲ್ಲಿ ಅಭ್ಯರ್ಥಿಗಳ ನಡುವಿನ ಫೈಟ್‌ಗಿಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನಡುವಿನ ಹಣಾಹಣಿ ರಾಜ್ಯದ ಗಮನ ಸೆಳೆದಿದೆ. ಅಥಣಿಯಿಂದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಲಕ್ಷ್ಮಣ್ ಸವದಿ ಸ್ವಾಭಿಮಾನದ ಪ್ರಶ್ನೆ ಮುಂದಿಟ್ಟು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಕಣಕ್ಕಿಳಿದಿರುವ ಮಹೇಶ್ ಕುಮಟಳ್ಳಿಗೆ ರಮೇಶ್ ಜಾರಕಿಹೊಳಿ ಶ್ರೀರಕ್ಷೆ ಇದ್ದು, ಇಲ್ಲಿ ಸವದಿ ವರ್ಸಸ್ ರಮೇಶ್ ಸಮರ ನಡೆಯವುದು ಶತಸಿದ್ಧವಾಗಿದೆ.

ಕಳೆದ ಉಪ ಚುನಾವಣೆಯಲ್ಲಿ ಮಹೇಶ್ ಕುಮಟಳ್ಳಿ ಅವರಿಗೆ ಕ್ಷೇತ್ರ ತ್ಯಾಗ ಮಾಡಿದ್ದ ಲಕ್ಷ್ಮಣ್ ಸವದಿ ಈ ಸಲ ಅಥಣಿಯಿಂದ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಮಾತ್ರ ಪಟ್ಟು ಹಿಡಿದು ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡದಿದ್ದರೆ, ನನಗೆ ಗೋಕಾಕ ಟಿಕೆಟ್ ಬೇಡ ಎಂಬುವಷ್ಟರ ಮಟ್ಟಿಗೆ ರಮೇಶ್ ಜಾರಕಿಹೊಳಿ ಒತ್ತಡ ಹಾಕಿದ್ದರು.
ಇದೇ ಕಾರಣಕ್ಕೆ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಿ ಲಕ್ಷ್ಮಣ್ ಸವದಿ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಇದೇ ಬೇಸರದಿಂದಾಗಿ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಜೊತೆಗೆ ಅಥಣಿಯಲ್ಲಿ ಕಾಂಗ್ರೆಸ್ ನಿಂದಲೇ ಸರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಇದನ್ನು ಮಹೇಶ್ ಕುಮಟಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಫೈಟ್‌ಗಿಂತ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಫೈಟ್ ಎನ್ನಬಹುದು.
ಹೀಗಾಗಿ ಅಥಣಿಯಲ್ಲಿ ಸವದಿ ಹಾಗೂ ರಮೇಶ್ ಗೆಲುವಿನ ಜಿದ್ದಾಜಿದ್ದಿ ಜೋರಾಗಿದೆ. ಸವದಿಯನ್ನು ಹಣೆಯಲು ಸಾಹುಕಾರ್ ಶಾಸಕರನ್ನು ಪಕ್ಷಕ್ಕೆ ಕರೆತಂದಿದ್ದಾರೆ.
ಒಂದು ಕಾಲದಲ್ಲಿ ಬಿಜೆಪಿಯ ಭದ್ರಕೋಟೆಯಾಗಿದ್ದ ಮಾಜಿ ಸಿಎಂ ಜಗದೀಶ ಶೆಟ್ಟರ್ ಕಾಂಗ್ರೆಸ್‌ನತ್ತ ಮುಖ ಮಾಡುವುದರೊಂದಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿನ ಹೋರಾಟ ಕುತೂಹಲ ಮೂಡಿಸಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರು ಭಾರೀ ದಂಗೆಯನ್ನು ಸೋಲಿಸುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಕೆತ್ತಲು ಶೆಟ್ಟರ್ ಬಿಗ್ ಪ್ಲ್ಯಾನ್ ಮಾಡಿದ್ದಾರೆ. ಇಲ್ಲೂ ಲಿಂಗಾಯತ ಸಮುದಾಯವನ್ನು ಸೆಳೆಯಲು ಬಿಜೆಪಿ ಬಿಗ್ ಪ್ಲ್ಯಾನ್ ಮಾಡುತ್ತಿದೆ.
ಮುಂದೆ ಇದು ಕಾಂಗ್ರೆಸ್ ಹಾಗೂ ಬಿಜೆಪಿ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂದು ಕಾದು ನೋಡಬೇಕಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications