ಯಡಿಯೂರಪ್ಪ ಪ್ರಮಾಣ ವಚನ, ಜೆಡಿಎಸ್‌ನಿಂದ ಪ್ರತಿಭಟನೆ
ಬೆಂಗಳೂರು, ಮೇ 17 : ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 9 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಜೆಡಿಎಸ್ ರಾಜ್ಯಪಾಲರ ನಿರ್ಧಾರ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಲು ಮುಂದಾಗಿದ್ದವು. ರಾಜ್ಯಪಾಲರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡುವಂತೆ ಮನವಿ ಸಲ್ಲಿಸಿದ್ದವು. ಆದರೆ, ಬಿಜೆಪಿಗೆ ಅವಕಾಶ ನೀಡಲಾಗಿದೆ.
ಬಿ.ಎಸ್.ಯಡಿಯೂರಪ್ಪ ಅವರು ರಾಜಭವನದಲ್ಲಿ ಇಂದು ಬೆಳಗ್ಗೆ 9ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಜೆಡಿಎಸ್ ರಾಜ್ಯಪಾಲರ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.

ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ : ರಾಜ್ಯಾದ್ಯಂತ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷ ಜಯಗಳಿಸಿದೆ. ಆದ್ದರಿಂದ, ಸಾವಿರಾರು ಜನರು ರಾಜ್ಯಪಾಲರ ವಿರುದ್ಧ, ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.
ರಾಜಭವನಕ್ಕೆ ಭದ್ರತೆ : ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜಭವನದ ಮುಂದೆ ಪ್ರತಿಭಟನೆ ಮಾಡಲು ಸಜ್ಜಾಗುತ್ತಿದ್ದಾರೆ. ಆದ್ದರಿಂದ, ರಾಜಭವನ ಮತ್ತು ಸುತ್ತಮುತ್ತಲು 16 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.












Click it and Unblock the Notifications