ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಪ್ರಮಾಣ ವಚನ, ಜೆಡಿಎಸ್‌ನಿಂದ ಪ್ರತಿಭಟನೆ

By Gururaj
|
Google Oneindia Kannada News

ಬೆಂಗಳೂರು, ಮೇ 17 : ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 9 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಜೆಡಿಎಸ್ ರಾಜ್ಯಪಾಲರ ನಿರ್ಧಾರ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಲು ಮುಂದಾಗಿದ್ದವು. ರಾಜ್ಯಪಾಲರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡುವಂತೆ ಮನವಿ ಸಲ್ಲಿಸಿದ್ದವು. ಆದರೆ, ಬಿಜೆಪಿಗೆ ಅವಕಾಶ ನೀಡಲಾಗಿದೆ.

ಯಡಿಯೂರಪ್ಪ ಪ್ರಮಾಣವಚನಕ್ಕೆ ಶುಭಾಶಯಗಳ ಸುರಿಮಳೆಯಡಿಯೂರಪ್ಪ ಪ್ರಮಾಣವಚನಕ್ಕೆ ಶುಭಾಶಯಗಳ ಸುರಿಮಳೆ

ಬಿ.ಎಸ್.ಯಡಿಯೂರಪ್ಪ ಅವರು ರಾಜಭವನದಲ್ಲಿ ಇಂದು ಬೆಳಗ್ಗೆ 9ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಜೆಡಿಎಸ್ ರಾಜ್ಯಪಾಲರ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.

jds

ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ : ರಾಜ್ಯಾದ್ಯಂತ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷ ಜಯಗಳಿಸಿದೆ. ಆದ್ದರಿಂದ, ಸಾವಿರಾರು ಜನರು ರಾಜ್ಯಪಾಲರ ವಿರುದ್ಧ, ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

ರಾಜಭವನಕ್ಕೆ ಭದ್ರತೆ : ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜಭವನದ ಮುಂದೆ ಪ್ರತಿಭಟನೆ ಮಾಡಲು ಸಜ್ಜಾಗುತ್ತಿದ್ದಾರೆ. ಆದ್ದರಿಂದ, ರಾಜಭವನ ಮತ್ತು ಸುತ್ತಮುತ್ತಲು 16 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

English summary
Karnataka Election Results 2018 Updates. B.S.Yeddyurappa to take oath as the Chief Minister of Karnataka on May 17, 2018. JD(S) plan for a protest in all districts of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X