ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಂತ್ರ ಫಲಿತಾಂಶ : ದೇವೇಗೌಡ ಭೇಟಿ ಮಾಡಿದ ಕುಮಾರಸ್ವಾಮಿ!

|
Google Oneindia Kannada News

ಬೆಂಗಳೂರು, ಮೇ 15 : ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗಿದ್ದು, ಅತಂತ್ರ ಫಲಿತಾಂಶ ಬಂದಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

77 ಸ್ಥಾನಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆಯೂ ಜೆಡಿಎಸ್‌ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕಾಂಗ್ರೆಸ್ ನಾಯಕರು ಘೋಷಣೆ ಮಾಡಿದ್ದಾರೆ.

ಆಜಾದ್ ತಂತ್ರ : ಕುಮಾರಸ್ವಾಮಿ ಸಿಎಂ, ಕೈ -ತೆನೆ ಮೈತ್ರಿಆಜಾದ್ ತಂತ್ರ : ಕುಮಾರಸ್ವಾಮಿ ಸಿಎಂ, ಕೈ -ತೆನೆ ಮೈತ್ರಿ

Karnataka elections results 2018 : Kumaraswamy meets HD Deve Gowda

ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಎಚ್.ಡಿ.ದೇವೇಗೌಡರಿಗೆ ಕರೆ ಮಾಡಿ ಮೈತ್ರಿ ಸರ್ಕಾರದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇತ್ತ ಸಿದ್ದರಾಮಯ್ಯ, ಪರಮೇಶ್ವರ ಅವರು ಜೆಡಿಎಸ್‌ಗೆ ಬೆಂಬಲ ಘೋಷಣೆ ಮಾಡಿದ್ದಾರೆ.

ಅತಂತ್ರ ಸ್ಥಿತಿಯತ್ತ ಕರ್ನಾಟಕ ವಿಧಾನಸಭೆ! ಸಾಧ್ಯತೆಗಳೇನು?ಅತಂತ್ರ ಸ್ಥಿತಿಯತ್ತ ಕರ್ನಾಟಕ ವಿಧಾನಸಭೆ! ಸಾಧ್ಯತೆಗಳೇನು?

ಪದ್ಮನಾಭನಗರದ ನಿವಾಸಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಕುಮಾರಸ್ವಾಮಿ ಅವರು ದೇವೇಗೌಡರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಬಿಜೆಪಿ ಮೌನ : ಬಿಜೆಪಿ ನಾಯಕರು ಇನ್ನೂ ಸರ್ಕಾರ ರಚನೆ ವಿಚಾರದಲ್ಲಿ ಮೌನ ವಹಿಸಿದ್ದಾರೆ. ಸಂಜೆಯೊಳಗೆ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಬಿಜೆಪಿ ನಾಯಕರು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೊತೆ ಮಾತುಕತೆ ನಡೆಸಿದ್ದಾರೆ.

ಎಚ್.ಡಿ.ದೇವೇಗೌಡ ಅವರು ಇಂದು ಸಂಜೆ ಪಕ್ಷದ ಎಲ್ಲಾ ಶಾಸಕರ ಸಭೆ ಕರೆದಿದ್ದಾರೆ. ಸಭೆಯಲ್ಲಿಯೂ ಸಹ ಮೈತ್ರಿ ಬಗ್ಗೆ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ. ಚುನಾವಣೆ ಫಲಿತಾಂಶದ ಬಳಿಕ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿದೆ.

English summary
Karnataka Election Results 2018 Live Updates. JD(S) state president H.D.Kumaraswamy visits H.D.Deve Gowda house at Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X