ಕರ್ನಾಟಕ ಚುನಾವಣೆ ಫಲಿತಾಂಶ : ಸಿದ್ದರಾಮಯ್ಯ ಬೆಂಗಳೂರಿನಲ್ಲಿದ್ದಾರೆ!

ಬೆಂಗಳೂರು, ಮೇ 15 : ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿದ್ದು, ಫಲಿತಾಂಶವನ್ನು ವೀಕ್ಷಿಸುತ್ತಿದ್ದಾರೆ.

ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ, ತವರು ಜಿಲ್ಲೆ ಮೈಸೂರಿಗೆ ಹೋಗದೆ ಬೆಂಗಳೂರಿನಲ್ಲಿಯೇ ಇದ್ದಾರೆ.

Karnataka elections results 2018 : Siddaramaiah in Bengaluru

ಸಿದ್ದರಾಮಯ್ಯ ಅವರು ಮೈಸೂರಿಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ, ಅದನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿಯೇ ಫಲಿತಾಂಶವನ್ನು ವೀಕ್ಷಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಯ ನಂತರ ಅವರು ಮೈಸೂರಿಗೆ ಹೋಗುವ ಕುರಿತು ತೀರ್ಮಾನವನ್ನು ತೆಗೆದುಕೊಳ್ಳಲಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಪಕ್ಷವನ್ನು ಗೆಲ್ಲಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಉಡುಗೊರೆ ನೀಡುವ ಜೊತೆಗೆ, ಎರಡೂ ಕ್ಷೇತ್ರದಲ್ಲಿ ಅವರು ಗೆಲ್ಲುವುದು ಸವಾಲಾಗಿದೆ.

ಜನರು ಈಗಾಗಲೇ ತಮ್ಮ ತೀರ್ಪನ್ನು ನೀಡಿದ್ದು, 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ.

'ಕಾಂಗ್ರೆಸ್ 120ಕ್ಕಿಂತ ಅಧಿಕ ಸ್ಥಾನಗಳಲ್ಲಿ ಜಯಗಳಿಸಿ ಅಧಿಕಾರಕ್ಕೆ ಬರಲಿದೆ' ಎಂದು ಸಿದ್ದರಾಮಯ್ಯ ಅವರು ಈಗಾಗಲೇ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+