Karnataka Elections: ಪತ್ನಿಯನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇನೆಂದು ರೇವಣ್ಣ ಬೆದರಿಕೆ- ಇನ್‌ಸೈಡ್ ಸ್ಟೋರಿ
ಬೆಂಗಳೂರು, ಮಾರ್ಚ್ 31: ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ( Karnataka Assembly Elections 2023 ) ನಡೆಯಲಿದೆ. ಇದೇ ವೇಳೆ, ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಜೆಡಿಎಸ್ ( JDS ) ನಾಯಕ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪುತ್ರರಾದ ಹೆಚ್ ಡಿ ಕುಮಾರಸ್ವಾಮಿ ಹಾಗೂ ಹೆಚ್ ಡಿ ರೇವಣ್ಣ ನಡುವಿನ ಭಿನ್ನಾಭಿಪ್ರಾಯ ದಟ್ಟವಾಗುತ್ತಲೇ ಸಾಗಿದೆ.
ಜೆಡಿಎಸ್ ಟಿಕೆಟ್ ನಿರಾಕರಿಸಿದರೆ ಪತ್ನಿ ಭವಾನಿ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದಾಗಿ ರೇವಣ್ಣ ಬೆದರಿಕೆ ಹಾಕಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಭವಾನಿ ಅವರನ್ನು ಕಣಕ್ಕಿಳಿಸಲು ಕುಮಾರಸ್ವಾಮಿ ಒಲವು ಹೊಂದಿಲ್ಲವೆಂಬುದು ಈ ಬೆಳವಣಿಗೆಗೆ ಕಾರಣವಾಗಿದೆ.

ಜೆಡಿಎಸ್‌ಗೆ ಹಾಸನ ಭದ್ರಕೋಟೆಯಾಗಿದೆ. ರೇವಣ್ಣ ಅವರು ಬಿಜೆಪಿಯ ಪ್ರೀತಂ ಜೆ ಗೌಡ ಅವರಿಂದ ಕ್ಷೇತ್ರವನ್ನು ಕಸಿದುಕೊಳ್ಳಲು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ.
ಒಂದು ವೇಳೆ, ಭವಾನಿ ಅವರಿಗೆ ಟಿಕೆಟ್ ನಿರಾಕರಿಸಿದರೆ ಸ್ವತಂತ್ರವಾಗಿ ಕಣಕ್ಕಿಳಿಸುತ್ತೇವೆಂದು ರೇವಣ್ಣ ಅವರ ಕುಟುಂಬ ಕುಮಾರಸ್ವಾಮಿ ಅವರನ್ನು 'ಬ್ಲಾಕ್‌ಮೇಲ್' ಮಾಡುತ್ತಿದೆ ಎಂದು ತಿಳಿದುಬಂದಿದೆ.
ಹಾಸನ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ರೇವಣ್ಣ ಮತ್ತು ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದರೂ, ಈ ವಿಷಯ ಇತ್ಯರ್ಥವಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಆದರೆ, ಪಕ್ಷದ ಕಾರ್ಯಕರ್ತನಿಗೆ ಟಿಕೆಟ್ ಸಿಗಬೇಕು ಎಂಬ ನಿಲುವಿನ ಬಗ್ಗೆ ಸ್ಪಷ್ಟತೆ ಇದೆ ಎಂದಿರುವ ಕುಮಾರಸ್ವಾಮಿ, ಮಾಜಿ ಶಾಸಕ ಎಚ್ ಎಸ್ ಪ್ರಕಾಶ್ ಪುತ್ರ ಎಚ್ ಪಿ ಸ್ವರೂಪ್ ಅವರ ಬಗ್ಗೆ ಒಲವು ತೋರಿದ್ದಾರೆ.
'ಹಾಸನದಿಂದ ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸುವ ನನ್ನ ನಿರ್ಧಾರಕ್ಕೆ ನಾನು ಬದ್ಧವಾಗಿದ್ದೇನೆ. ನಾವು ಒಂದೆರಡು ದಿನಗಳಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಅದರಲ್ಲಿ ಹಾಸನವೂ ಇರಲಿದೆ' ಎಂದು ಕುಮಾರಸ್ವಾಮಿ ಹೇಳಿದರು.
ಈ ಬೆಳವಣಿಗೆಗಳ ಕುರಿತು 'ಡೆಕ್ಕನ್ ಹೆರಾಲ್ಡ್' ಜೊತೆ ಮಾತನಾಡಿರುವ ಕುಮಾರಸ್ವಾಮಿ ಆಪ್ತ ಮುಖಂಡರೊಬ್ಬರು, 'ಹಾಸನದಿಂದ ಭವಾನಿ ಸ್ವತಂತ್ರವಾಗಿ ಸ್ಪರ್ಧಿಸುತ್ತಾರೆ ಎಂದು ರೇವಣ್ಣ ಮತ್ತು ಅವರ ಕುಟುಂಬದವರು ಕುಮಾರಸ್ವಾಮಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಇದು ಕೇವಲ ಭವಾನಿ ಅವರ ರಾಜಕೀಯ ಜೀವನದ ಬಗ್ಗೆ ಮಾತ್ರವಿಲ್ಲ. ಹಾಸನ ಜಿಲ್ಲೆಯಲ್ಲಿ ರೇವಣ್ಣ ಅವರ ಪುತ್ರರ ರಾಜಕೀಯ ಬೆಳವಣಿಗೆಗೆ ಅಡ್ಡಿಯಾಗಿರುವ ಸ್ವರೂಪ್ ಅವರನ್ನು ಕಣಕ್ಕಿಳಿಸುವ ಕುಮಾರಸ್ವಾಮಿ ನಿರ್ಧಾರಕ್ಕೆ ವಿರುದ್ಧವಾಗಿದೆ' ಎಂದು ತಿಳಿಸಿದ್ದಾರೆ.

ರೇವಣ್ಣ ಅವರ ಬಂಡಾಯ ಪಕ್ಷಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಏಕೆಂದರೆ ಕುಮಾರಸ್ವಾಮಿ ಅವರು ಕೇವಲ ಕುಟುಂಬದ ಸದಸ್ಯರಿಗೆ ಒಲವು ತೋರದೆ ಪಕ್ಷದ ಕಾರ್ಯಕರ್ತರನ್ನು ಬೆಂಬಲಿಸುತ್ತಾರೆ ಎಂಬ ಸಂದೇಶ ರವಾನೆಯಾಗುತ್ತದೆಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಯಾರ ಹೆಸರನ್ನೂ ತೆಗೆದುಕೊಳ್ಳದೆ, ಬ್ಲಾಕ್‌ಮೇಲ್ ತಂತ್ರಗಳಿಗೆ ನಾನು ಹೆದರುವುದಿಲ್ಲ. ಸ್ವರೂಪ್ ಅವರನ್ನು ಭೇಟಿ ಮಾಡಿದ ನಂತರ ಅವರು ಈ ವಿಚಾರವಾಗಿ ತಿಳಿಸಿದ್ದಾರೆ.
ಕುಟುಂಬ ರಾಜಕಾರಣದ ಬಗ್ಗೆ ರೇವಣ್ಣ ಹೇಳಿಕೆ
ಕುಟುಂಬ ರಾಜಕಾರಣವನ್ನು ಎರಡೂ ರಾಷ್ಟ್ರೀಯ ಪಕ್ಷಗಳು ಅಳವಡಿಸಿಕೊಂಡಿವೆ. ನಮ್ಮದು ಸೀಮಿತ ಸಂಪನ್ಮೂಲಗಳನ್ನು ಹೊಂದಿರುವ ಸಣ್ಣ ಪ್ರಾದೇಶಿಕ ಪಕ್ಷವಾಗಿದೆ. ಜನರ ಸೇವೆಗಾಗಿ ಪಕ್ಷವನ್ನು ಬೆಳೆಸಲು ನಾವು ನಮ್ಮ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಎರಡೂ ರಾಷ್ಟ್ರೀಯ ಪಕ್ಷಗಳು ಮತ್ತು ಅವುಗಳ ನಾಯಕರು ವಂಶಪಾರಂಪರ್ಯ ರಾಜಕಾರಣವನ್ನು ಬಿಡುತ್ತೇವೆ ಎಂದು ಮೊದಲು ಘೋಷಿಸಲಿ ಎಂಬುದಾಗಿ ರೇವಣ್ಣ ತಿಳಿಸಿದ್ದಾರೆ.
ನಮ್ಮ ಕುಟುಂಬದಲ್ಲಿ ಯಾರೂ ನಾಮನಿರ್ದೇಶಿತ ಸದಸ್ಯರಲ್ಲ. ನಾವು ಹಿಂಬಾಗಿಲಿನಿಂದ ರಾಜಕೀಯಕ್ಕೆ ಬಂದಿಲ್ಲ. ನಾವೆಲ್ಲ ಚುನಾವಣೆ ಎದುರಿಸಿದ್ದೇವೆ. ನಾವು ರಾಜಕೀಯಕ್ಕೆ ಬಂದಿರುವುದು ನಮ್ಮ ಸ್ವಂತ ಅರ್ಹತೆಯಿಂದಲೇ. ಮುಂದೆ, ಕುಟುಂಬ ಅಥವಾ ವಂಶಪಾರಂಪರ್ಯ ರಾಜಕಾರಣವನ್ನು ನಿಷೇಧಿಸುವ ಕಾನೂನು ಇರಲಿ ಮತ್ತು ನಾವು ಅದನ್ನು ಪಾಲಿಸುತ್ತೇವೆ ಎಂಬುದಾಗಿಯೂ ಅವರು ಹೇಳಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್''











Click it and Unblock the Notifications