ಕಾಂಗ್ರೆಸ್ ಟಿಕೆಟ್ 'ಕೈ' ತಪ್ಪಿದ ನಟ ಶಶಿಕುಮಾರ್ ಜೆಡಿಎಸ್‌ ಸೇರ್ಪಡೆ

Recommended Video

      Karnataka Elections 2018 : ನಟ ಶಶಿಕುಮಾರ್ ಇಂದು ಜೆಡಿಎಸ್ ಗೆ ಸೇರ್ಪಡೆ| Oneindia Kannada

      ಬೆಂಗಳೂರು, ಏಪ್ರಿಲ್ 19 : ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ನಟ ಶಶಿಕುಮಾರ್ ಜೆಡಿಎಸ್‌ ಪಕ್ಷ ಸೇರಿದ್ದಾರೆ. ಹೊಸದುರ್ಗ ಕ್ಷೇತ್ರದಿಂದ ಅವರು ಈ ಬಾರಿಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

      ಗುರುವಾರ ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ನಟ ಶಶಿಕುಮಾರ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಶಶಿಕುಮಾರ್ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

      Karnataka elections : Shashi Kumar joins JDS

      ಕಾಂಗ್ರೆಸ್ ಪಕ್ಷ ಡಾ.ಬಿ.ಯೋಗೇಶ್ ಬಾಬು ಅವರನ್ನು ಮೊಳಕಾಲ್ಮೂರು ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಶಶಿಕುಮಾರ್ ಅವರನ್ನು ಸ್ಟಾರ್ ಪ್ರಚಾರಕರಾಗಿ ಬಳಸಿಕೊಳ್ಳಲು ಮುಂದಾಗಿತ್ತು.

      ಶಶಿಕುಮಾರ್ ಅವರು ಕಾಂಗ್ರೆಸ್ ಟಿಕೆಟ್‌ಗಾಗಿ ಭಾರೀ ಪ್ರಯತ್ನ ನಡೆಸಿದ್ದರು. ಆದರೆ, ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿತ್ತು. ಆದ್ದರಿಂದ, ಜೆಡಿಎಸ್ ಸೇರಿದ್ದು, ಹೊಸದುರ್ಗ ಕ್ಷೇತ್ರದಿಂದ ಈ ಬಾರಿಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

      ಶಶಿಕುಮಾರ್ ಅವರು 2008ರ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಳ್ಳಕೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 42,302 ಮತಗಳನ್ನು ಪಡೆದು ಬಿಜೆಪಿಯ ತಿಪ್ಪೇಸ್ವಾಮಿ ಅವರ ವಿರುದ್ಧ ಸೋಲು ಕಂಡಿದ್ದರು.

      ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಜೆಡಿಯು ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಶಶಿಕುಮಾರ್ 13ನೇ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಆದ್ದರಿಂದ, ಕಾಂಗ್ರೆಸ್ ಸೇರಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+