Exit Poll ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ : ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು, ಮೇ 13 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ಮೇ 15ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಹಲವು ಚುನಾವಣೋತ್ತರ ಸಮೀಕ್ಷೆಗಳು ಶನಿವಾರ ಪ್ರಕಟವಾಗಿದೆ. ಯಾರು, ಎಷ್ಟು ಸ್ಥಾನಗಳಿಸಲಿದ್ದಾರೆ? ಎಂಬ ಲೆಕ್ಕಾಚಾರ ಆರಂಭವಾಗಿದೆ.
ಚುನಾವಣೆ ಮುಗಿದ ಬಳಿಕ ರಿಲಾಕ್ಸ್ ಮೂಡ್‌ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. 'ನೀವು ನನ್ನಂತೆಯೇ ದಣಿದಿದ್ದೀರಿ ಎಂದು ಗೊತ್ತು. Exit Poll ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಆರಾಮವಾಗಿರಿ, ಕುಟುಂಬದ ಜತೆ ಕಾಲ ಕಳೆಯಿರಿ' ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.
ರಾಜ್ಯದ 224 ಕ್ಷೇತ್ರಗಳ ಪೈಕಿ ಬೆಂಗಳೂರಿನ ಜಯನಗರ ಮತ್ತು ರಾಜರಾಜೇಶ್ವರಿ ನಗರ ಹೊರತುಪಡಿಸಿ 222 ಕ್ಷೇತ್ರಗಳಿಗೆ ಶನಿವಾರ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಮೇ 15ರ ಮಂಗಳವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
'ರಾಜ್ಯದ ಜನತೆ ಮತ್ತೊಮ್ಮೆ ತಮ್ಮ ಸೇವೆ ಮಾಡುವ ಭಾಗ್ಯ ನೀಡಲಿದ್ದಾರೆ ಎಂಬ ಭರವಸೆಯಿದೆ' ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಎಕ್ಸಿಟ್ ಪೋಲ್ ಸಮೀಕ್ಷೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಕರೆ ನೀಡಿದ್ದಾರೆ.
|
ಜನರು ಸೇವೆ ಮಾಡುವ ಭಾಗ್ಯ ನೀಡಲಿದ್ದಾರೆ
'ಜನತೆ ಮತ್ತೊಮ್ಮೆ ತಮ್ಮ ಸೇವೆ ಮಾಡುವ ಭಾಗ್ಯ ನೀಡಲಿದ್ದಾರೆ ಎಂಬ ಭರವಸೆಯಿದೆ' ಸಿದ್ದರಾಮಯ್ಯ ಹೇಳಿದ್ದಾರೆ.
|
ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರಿಗೂ ನಾನು ಚಿರಋಣಿ
ಸತತ ಪರಿಶ್ರಮದೊಂದಿಗೆ ನಮ್ಮೊಂದಿಗೆ ದುಡಿದ ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರಿಗೂ ನಾನು ಚಿರಋಣಿ.
|
Exit Poll ಮನೋರಂಜನೆ
Exit Poll ಸಮೀಕ್ಷೆಗಳ ವರದಿಗಳು ಎರಡು ದಿನಗಳ ಕಾಲ ಮನೋರಂಜನೆ ನೀಡಲಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
|
ಕುಟುಂಬದ ಜತೆ ಕಾಲ ಕಳೆಯಿರಿ
'ಮೇ ೧5ರಂದು ಸಿಗೋಣ. ಹಿರಿಯರ ಆಶೀರ್ವಾದ ಮತ್ತು ಕಿರಿಯರ ಹಾರೈಕೆಯಿಂದ ಒಳ್ಳೆಯದೇ ಆಗುತ್ತದೆ' ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.












Click it and Unblock the Notifications