ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಾದಾಮಿ ಕ್ಷೇತ್ರದಲ್ಲಿ ಏ.23 ಕ್ಕೆ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ?

|
Google Oneindia Kannada News

Recommended Video

ಏಪ್ರಿಲ್ 23ರಂದು ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ | Oneindia Kannada

ಬೆಂಗಳೂರು, ಏಪ್ರಿಲ್ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆ ಸುದ್ದಿಗಳಿಗೆ ಪೂರ್ಣವಿರಾಮ ಹಾಕುವಂಥ ಪೋಸ್ಟ್ ವೊಂದನ್ನು ಇಂದು ಅವರ ಪುತ್ರ ಯತೀಂದ್ರ ಅವರು ಫೇಸ್ ಬುಕ್ ನಲ್ಲಿ ಹಾಕಿದ್ದರು.

ಇಂದು 12 ಗಂಟೆಗೆ ಸಿದ್ದರಾಮಯ್ಯ, ಜಿಟಿ ದೇವೇಗೌಡ ನಾಮಪತ್ರ ಸಲ್ಲಿಕೆಇಂದು 12 ಗಂಟೆಗೆ ಸಿದ್ದರಾಮಯ್ಯ, ಜಿಟಿ ದೇವೇಗೌಡ ನಾಮಪತ್ರ ಸಲ್ಲಿಕೆ

"23 ಕ್ಕೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ" ಎಂದು ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಡಾ.ಯತೀಂದ್ರ ಅವರು ಸ್ಟೇಟಸ್ ಹಾಕಿದ್ದರು. ಅಂದರೆ ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ಮಾತ್ರವಲ್ಲದೆ, ಬಾದಾಮಿಯಿಂದಲೂ ಸ್ಪರ್ಧಿಸುತ್ತಾರೆ ಎಂಬ ಸುದ್ದಿಯನ್ನು ಸ್ವತಃ ಅವರ ಪುತ್ರ ದೃಢಪಡಿಸಿದ್ದಾರೆ. ಆದರೆ ಫೇಸ್ ಬುಕ್ ನಲ್ಲಿದ್ದ ಈ ಸ್ಟೇಟಸ್ ಸದ್ಯಕ್ಕೆ ಕಾಣಿಸುತ್ತಿಲ್ಲ.

Karnataka elections: Siddaramaiah will be filing nimination in Badami constituency on April 23rd

ಹಲವು ದಿನಗಳಿಂದಲೂ ಸಿದ್ದರಾಮಯ್ಯ ಅವರು ಬಾದಾಮಿಯಿಂದಲೂ ಸ್ಪರ್ಧಿಸುತ್ತಾರೆ ಎಂದು ಸುದ್ದಿಯಾಗಿತ್ತು. ಚಾಮುಂಡೇಶ್ವರಿ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಅಷ್ಟೊಂದು ಸೇಫ್ ಅಲ್ಲ ಎಂದು ಕೆಲವು ಗುಪ್ತಚರ ವರದಿಗಳೂ ಹೇಳಿರುವುದಲ್ಲದೆ, ಇಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುತ್ತಿರುವ ಕ್ಷೇತ್ರದ ಹಾಲಿ ಶಾಸಕ ಜಿ.ಟಿದೇವೇಗೌಡ ಅವರು ಪ್ರಬಲ ಪೈಪೋಟಿ ನೀಡುವ ಸಾಧ್ಯತೆ ಇರುವುದರಿಂದ ಸಿದ್ದರಾಮಯ್ಯ ಎರಡು ಕ್ಷೇತ್ರಗಳನ್ನು ಆಯ್ದುಕೊಂಡಿದ್ದಾರೆ.

ಬಾದಾಮಿಯಲ್ಲಿ ಸಿದ್ದರಾಮಯ್ಯನ ಸೋಲಿಸಲು ಬಿಜೆಪಿ ಮಾಸ್ಟರ್ ಪ್ಲಾನ್ಬಾದಾಮಿಯಲ್ಲಿ ಸಿದ್ದರಾಮಯ್ಯನ ಸೋಲಿಸಲು ಬಿಜೆಪಿ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿ ಕ್ಷೇತ್ರದಿಂದ ಅವರು ಇಂದು(ಏ.20) ನಾಮಪತ್ರ ಸಲ್ಲಿಸಲಿದ್ದು, ಬಾದಾಮಿ ಕ್ಷೇತ್ರದಿಂದ ಏ.23 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

English summary
Karnataka Assembly Elections 2018: Along with Chamundeshwari constituency in Mysuru, chief minister Siddaramaiah will be contesting from Badami constituency in Bagalkot district in upcomming Assembly elections. His son Dr. Yathindra in his facebook post confirmed his father's candidature from Badami. Siddaramaiah will be filing his nomination from here on April 23rd.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X