ಕರ್ನಾಟಕ: ಅಂತಿಮ ಮತದಾರರ ಪಟ್ಟಿ ಪ್ರಕಟ, ಬರೋಬ್ಬರಿ 1 ಕೋಟಿಗೂ ಹೆಚ್ಚು ಮತದಾರರ ಹೆಸರು ಡಿಲೀಟ್

ಈಗಾಗಲೇ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಂದರೆ ಎಸ್‌ಐಆರ್‌ ಹಲವು ರಾಜಕೀಯ ತಿರುವು ಪಡೆದುಕೊಂಡಿತ್ತು. ಇಂದಿಗೂ ಈ ಎಸ್‌ಐಆರ್‌ ವಿರುದ್ಧ ಪರವಿರೋಧ ಚರ್ಚೆ ಆಗುತ್ತಲೇ ಇದೆ. ಇದರ ನಡುವೆಯೇ ರಾಜ್ಯ ಚುನಾವಣಾ ಆಯೋಗವು ಇಂದು (ಅಕ್ಟೋಬರ್ 27) ಕರ್ನಾಟಕದ ಅಂತಿಮ ಮತದಾರರ ಪಟ್ಟಿಯನ್ನ ಅಧಿಕೃತವಾಗಿ ಪ್ರಕಟಿಸಿದೆ.

ಆದರೆ, ಈ ಬಾರಿ ಪ್ರಕಟವಾಗಿರುವ ಪಟ್ಟಿಯಲ್ಲಿ ಬರೋಬ್ಬರಿ 1 ಕೋಟಿಗೂ ಹೆಚ್ಚು ಜನರ ಹೆಸರುಗಳು ನಾಪತ್ತೆಯಾಗಿರುವುದು ಭಾರೀ ಅಚ್ಚರಿ ಮೂಡಿಸಿದೆ. ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕಚೇರಿ ಬಿಡುಗಡೆ ಮಾಡಿರುವ ಈ ಹೊಸ ಪಟ್ಟಿ ಮುಂಬರುವ ಚುನಾವಣಾ ಪ್ರಕ್ರಿಯೆಯಲ್ಲಿ ಭಾರೀ ಸಂಚಲನ ಸೃಷ್ಟಿಸಿವೆ.

Karnataka Electoral Roll 2026 Published Nearly 1 Crore Voter Names Deleted After SIR Exercise

ಕರ್ನಾಟಕ ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ಪರಿಷ್ಕರಣೆಗೂ ಮುನ್ನ ಕರ್ನಾಟಕದಲ್ಲಿ ಒಟ್ಟು 5,54,32,314 (5.54 ಕೋಟಿ) ಮತದಾರರಿದ್ದರು. ಆದರೆ, ಪರಿಷ್ಕರಣೆಯ ನಂತರ ಪ್ರಕಟವಾದ ಅಂತಿಮ ಪಟ್ಟಿಯಲ್ಲಿ ಮತದಾರರ ಸಂಖ್ಯೆ 4,55,00,011 (4.55 ಕೋಟಿ) ಕ್ಕೆ ಇಳಿಕೆಯಾಗಿದೆ. ಅಂದರೆ, ಬರೋಬ್ಬರಿ 99.32 ಲಕ್ಷ (ಸರಿಸುಮಾರು 1 ಕೋಟಿ) ಮತದಾರರ ಹೆಸರುಗಳನ್ನ ಅಂತಿಮ ಪಟ್ಟಿಯಿಂದ ಕೈಬಿಡಲಾಗಿದೆ.

ನಕಲಿ ಮತದಾರರು, ಮೃತಪಟ್ಟವರು, ಬೇರೆಡೆಗೆ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿದ್ದವರನ್ನ ಪತ್ತೆ ಹಚ್ಚಿ, ಅಂತಹ ಹೆಸರುಗಳನ್ನ ಡಿಲೀಟ್ ಮಾಡಲಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಮೂಲಕ ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗೆ ವೇದಿಕೆ ಸಿದ್ಧಪಡಿಸಲಾಗಿದೆ.

ಅಂತಿಮ ಪಟ್ಟಿಯಲ್ಲಿರುವ ಪುರುಷ, ಮಹಿಳಾ ಮತದಾರರೆಷ್ಟು?

ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ, ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯಲ್ಲಿ ಈ ಬಾರಿ ಮಹಿಳಾ ಮತದಾರರೇ ಮೇಲುಗೈ ಸಾಧಿಸಿದ್ದಾರೆ. ಪ್ರಸ್ತುತ ಪ್ರಕಟವಾಗಿರುವ 4.55 ಕೋಟಿ ಮತದಾರರ ಪೈಕಿ 2,29,12,355 ಮಹಿಳಾ ಮತದಾರರಿದ್ದರೆ, 2,25,40,493 ಪುರುಷ ಮತದಾರರಿದ್ದಾರೆ. ಅಂದರೆ, ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆಯೇ ರಾಜ್ಯದಲ್ಲಿ ಹೆಚ್ಚಾಗಿದೆ.

ಇನ್ನು, ರಾಜ್ಯದಲ್ಲಿ ಒಟ್ಟು 2,841 ತೃತೀಯ ಲಿಂಗಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಅರ್ಹತೆ ಪಡೆದಿದ್ದಾರೆ. ಮಹಿಳಾ ಮತದಾರರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿರುವುದು ಮುಂಬರುವ ಚುನಾವಣೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ.

ಯುವ ಹಾಗೂ ಹೊಸ ಮತದಾರರ ಅಂಕಿ-ಅಂಶ

ಯಾವುದೇ ಚುನಾವಣೆಯ ದಿಕ್ಕನ್ನು ಬದಲಾಯಿಸುವ ಶಕ್ತಿ ಯುವ ಸಮುದಾಯಕ್ಕಿದೆ. ಈ ಬಾರಿಯ ಪರಿಷ್ಕೃತ ಪಟ್ಟಿಯಲ್ಲಿ 18 ರಿಂದ 19 ವರ್ಷ ವಯಸ್ಸಿನ ಯುವ ಮತದಾರರ ಸಂಖ್ಯೆ ಕೂಡ ಗಮನಾರ್ಹವಾಗಿದೆ. ರಾಜ್ಯಾದ್ಯಂತ ಒಟ್ಟು 6.83 ಲಕ್ಷಕ್ಕೂ ಹೆಚ್ಚು ಹೊಸ ಹಾಗೂ ಯುವ ಮತದಾರರು ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಲು ಸಜ್ಜಾಗಿದ್ದಾರೆ.

ಒಟ್ಟಾರೆಯಾಗಿ, ಚುನಾವಣಾ ಆಯೋಗವು ನಡೆಸಿರುವ ಈ ಸುದೀರ್ಘ ಹಾಗೂ ಬೃಹತ್ ಪರಿಷ್ಕರಣೆ ಕಾರ್ಯವು ಚುನಾವಣಾ ಅಕ್ರಮಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. 1 ಕೋಟಿಗೂ ಅಧಿಕ ಹೆಸರುಗಳನ್ನು ಕೈಬಿಟ್ಟಿರುವುದರಿಂದ, ಪ್ರತಿಯೊಬ್ಬ ನಾಗರಿಕರು ಕೂಡಲೇ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಈಗಲೇ ಖಚಿತಪಡಿಸಿಕೊಳ್ಳುವುದು ಅತ್ಯಂತ ಸೂಕ್ತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+