ರಾಜ್ಯ ಸರ್ಕಾರದಿಂದ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ವರ್ಗಾವಣೆ, ಇಲ್ಲಿದೆ ವಿವರ
Officials Transfer: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡುತ್ತಲಿರುತ್ತದೆ. ಇದೀಗ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಗ್ರೂಪ್ 'ಎ' ಕಿರಿಯ ಶ್ರೇಣಿ ಅಧಿಕಾರಿಗಳಿಗೆ ಹಿರಿಯ ಶ್ರೇಣಿ ಹುದ್ದೆಗಳಿಗೆ ಮುಂಬಡ್ತಿ ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಗ್ರೂಪ್ 'ಎ' ಕಿರಿಯ ಶ್ರೇಣಿಯ ಅಧಿಕಾರಿಗಳಿಗೆ ಹಿರಿಯ ಶ್ರೇಣಿಯ ಹುದ್ದೆಗಳಿಗೆ ಪ್ರಮೋಷನ್ ನೀಡಿ ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕೃತ ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ, ಪ್ರಮುಖ ದೇವಾಲಯಗಳು ಹಾಗೂ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹೀಗಿದೆ ಹೊಸ ಹುದ್ದೆಗಳ ವಿವರ
* ಪಿ. ಜಯಮ್ಮ: ಇವರು ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಇವರನ್ನು ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ (ಇಒ) ನೇಮಕ ಮಾಡಲಾಗಿದೆ.
* ಸಿ.ಜಿ. ಕೃಷ್ಣ: ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಆಗಿದ್ದ ಇವರನ್ನು ಈಗ ಮೈಸೂರಿನ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
* ಎಸ್.ಲಕ್ಷ್ಮೀ ನಾರಾಯಣ: ರಾಮನಗರ ಜಿಲ್ಲೆಯ ಕಬ್ಬಾಳು ಗ್ರಾಮದ ಶ್ರೀ ಕಬ್ಬಾಳಮ್ಮ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಆಗಿದ್ದ ಇವರನ್ನು ಈಗ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾಯಿಸಲಾಗಿದೆ.
* ಪ್ರಶಾಂತ್ ಕುಮಾರ್ ಶೆಟ್ಟಿ: ಮಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರ ಹುದ್ದೆಗೆ ಪ್ರಶಾಂತ್ ಕುಮಾರ್ ಶೆಟ್ಟಿ ಅವರನ್ನು ನೂತನವಾಗಿ ನಿಯೋಜನೆ ಮಾಡಲಾಗಿದೆ.
* ಎಂ.ಜೆ. ರೂಪ: ಮೈಸೂರಿನ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಆಗಿದ್ದ ಇವರ ಸೇವೆಯನ್ನು ಧಾರ್ಮಿಕ ದತ್ತಿ ಇಲಾಖೆಯಿಂದ ಹಿಂಪಡೆದು, ಅವರ ಮೂಲ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ (DPAR) ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಎಲ್ಲಾ ಆಡಳಿತಾತ್ಮಕ ಬದಲಾವಣೆಗಳು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಮ್ಮ ನೂತನ ಜವಾಬ್ದಾರಿಗಳನ್ನು ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.


Click it and Unblock the Notifications
