Liquor: ಡಿ.31ರಂದು ದಾಖಲೆ ಮಟ್ಟದಲ್ಲಿ 'ಮದ್ಯ' ಮಾರಾಟ, ಎಷ್ಟು ಕೋಟಿ?
ಬೆಂಗಳೂರು, ಜನವರಿ 01: ಹೊಸ ವರ್ಷ 2024 ಅನ್ನು ಸ್ವಾಗತಿಸಿದ ಸಾರ್ವಜನಿಕರು ಅಬಕಾರಿ ಇಲಾಖೆ ಖಜಾನೆ ತುಂಬಿಸಿದ್ದಾರೆ. ವರ್ಷಾಚರಣೆ ನಿಮಿತ್ತ 2023ರ ಡಿಸೆಂಬರ್ 31 ರಂದು ವರ್ಷದ ಕೊನೆಯ ದಿನ ದಾಖಲೆ ಮಟ್ಟದಲ್ಲಿ ಮದ್ಯ ಮಾರಾಟವಾಗಿದೆ. ಈ ಬಗ್ಗೆ ಸ್ವತಃ ಮೈಸೂರು ಸೇಲ್ಸ್ ಇಂಟರ್‌ನ್ಯಾಷನ್ ಲಿ. (MSIL) ಅಧಿಕೃತ ಮಾಹಿತಿ ನೀಡಿದೆ.
ರಾಜ್ಯದಲ್ಲಿರುವ ಮೈಸೂರು ಸೇಲ್ಸ್ ಇಂಟರ್‌ನ್ಯಾಷನ್ ಲಿಮಿಟೆಡ್‌ನ (MSIL) ಒಟ್ಟು 1031 ಮದ್ಯ ಮಾರಾಟ ಮಳಿಗೆಗಳಿವೆ. ಇಲ್ಲ 2023ರ ಕೊನೆಯ ದಿನವಾದ ಭಾನುವಾರ (ಡಿ.31) ಒಂದೇ ದಿನ ₹18.85 ಕೋಟಿ ಮೊತ್ತದ ದಾಖಲೆಯ ಮದ್ಯ ಮಾರಾಟವಾಗಿದೆ ಎಂದು ಎಂಎಸ್‌ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ಬಹಿರಂಗಪಡಿಸಿದ್ದಾರೆ.

ಕಳೆದ ವರ್ಷದ ಇದೇ ದಿನಕ್ಕೆ ಹೋಲಿಸಿದರೆ ಇದು ಸುಮಾರು ₹ 4.34 ಕೋಟಿ ಹೆಚ್ಚಳವಾಗಿದೆ. 2022ರ ಡಿ. 31ರಂದು ₹14.51 ಕೋಟಿ ಮೊತ್ತದ ಮದ್ಯ ಮಾರಾಟವಾಗಿತ್ತು ಎಂದು ಅವರು ತಿಳಿಸಿದರು.
ರಾಯಚೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ಮಳಿಗೆಯಲ್ಲಿ ಅತ್ಯಂತ ಹೆಚ್ಚು, ಅಂದರೆ ₹11.66 ಲಕ್ಷ ರೂಪಾಯಿಗಳ ಮದ್ಯ ಮಾರಾಟವಾಗಿದ್ದರೆ, ಅದೇ ನಗರದ ಗಂಝ್ ರಸ್ತೆಯ ಮಳಿಗೆಯಲ್ಲಿ ₹9.96 ಲಕ್ಷದ ಮದ್ಯ ಬಿಕರಿಯಾಗಿ ಎರಡನೇ ಸ್ಥಾನದಲ್ಲಿದೆ.
ಬೆಂಗಳೂರಲ್ಲಿ ಮದ್ಯ ಮಾರಾಟ ಆಗಿದ್ದೇಷ್ಟು?
ಜಿಲ್ಲಾವಾರು ಮಾರಾಟದಲ್ಲಿ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅತ್ಯಧಿಕ ಮದ್ಯ ಮಾರಾಟವಾಗಿದೆ. ಅಂದರೆ ₹1.82 ಕೋಟಿಯ ಮದ್ಯ ಮಾರಾಟ ಕಂಡಿದೆ. ಕಳೆದ ವರ್ಷದ ಇದೇ ದಿನ ಈ ಜಿಲ್ಲೆಯಲ್ಲಿ ರೂ 1.35 ಕೋಟಿಯ ಮದ್ಯ ಮಾರಾಟವಾಗಿತ್ತು.
ಉನ್ನತ ದರ್ಜೆಗೇರಿಸಿ ಜ.1ರಂದು ಉದ್ಘಾಟನೆಗೊಂಡ ಬೆಂಗಳೂರು ಬಸವೇಶ್ವರನಗರದ ಎಂ ಎಸ್ ಐ ಎಲ್ ಬೋಟಿಕ್ ನಲ್ಲಿ ಭಾನುವಾರ ಆದ ಮದ್ಯ ಮಾರಾಟದ ಮೊತ್ತ ರೂ 3.5 ಲಕ್ಷ. ಇಲ್ಲಿ ಕಳೆದ ವರ್ಷದ ಇದೇ ದಿವಸ ಈ ಮಳಿಗೆಯಲ್ಲಿ ರೂ. 2.59 ಲಕ್ಷದ ಮದ್ಯ ಮಾರಾಟವಾಗಿತ್ತು ಎಂದು ಮನೋಜ್ ಹೇಳಿದ್ದಾರೆ.
ಉಳಿದ ದಿನಗಳಂದು ರಾಜ್ಯದ ಎಲ್ಲಾ ಎಂಎಸ್ಐಎಲ್ ಮಳಿಗೆಗಳಿಂದ ಆಗುವ ಮದ್ಯ ಮಾರಾಟದ ವಹಿವಾಟು ರೂ 8 ಕೋಟಿಯಷ್ಟಿರುತ್ತದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರಂದು ಇದು ರೂ 18.8 ಕೋಟಿಗೆ ಏರಿಕೆಯಾಗಿದೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications