ಕರ್ನಾಟಕದಲ್ಲಿ ಕಾಂಗ್ರೆಸ್ ಸುನಾಮಿ: ಬಿಜೆಪಿಗೆ ರಾಜ್ಯದಲ್ಲಿ ಉಳಿಗಾಲವಿಲ್ಲ!

ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಮುಕ್ತಾಯವಾಗಿದ್ದು ಮತದಾರ ಈಗಾಗಲೇ ತನ್ನ ತೀರ್ಪು ನೀಡಿದ್ದಾನೆ. ಮೇ 13 ರಂದು ಮತದಾರನ ಮನದಲ್ಲಿ ಏನಿದೆ ಎನ್ನುವುದು ಬಹಿರಂಗವಾಗಲಿದೆ. ಮೂರು ಪಕ್ಷಗಳು ಮಾಡಿದ ಕೆಲಸ ಯಾವ ರೀತಿ ಫಲ ನೀಡಲಿದೆ ಎನ್ನುವುದು ಶನಿವಾರ ತಿಳಿಯಲಿದೆ.

ಮೇ 13ರಂದು ಕರ್ನಾಟಕದಲ್ಲಿ ಕಾಂಗ್ರೆಸ್ ಸುನಾಮಿ ಅಪ್ಪಳಿಸಲಿದೆ ಎಂದು ಕಾಂಗ್ರೆಸ್ ನಾಯಕ ಶ್ರೀವಸ್ತ ತಿಳಿಸಿದ್ದಾರೆ. ಬೂತ್ ಮಟ್ಟದ ಕಾರ್ಯಕರ್ತರು ನೀಡಿರುವ ಮಾಹಿತಿಯನ್ನು ಆಧರಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತ ಪಡೆಯುವುದು ಖಚಿತ ಎಂದು ಅವರು ಟ್ವೀಟ್ ಮಾಡಿದ್ದಾರೆ.

congress

ಈ ಕುರಿತು ಟ್ವೀಟ್ ಮಾಡಿರುವ ಅವರು, ಹಳೇ ಮೈಸೂರು ಭಾಗ, ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಮೇಲುಗೈ ಸಾಧಿಸುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಿತ್ತೂರು ಕರ್ನಾಟಕ ಮತ್ತು ಬೆಂಗಳೂರು ಭಾಗದಲ್ಲಿ 50-50 ರಷ್ಟು ಅವಕಾಶ ಇರುತ್ತದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ರಾಜ್ಯದಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಈಗಾಗಲೇ ಗಲವು ಚುನವಾಣೋತ್ತರ ಸಮೀಕ್ಷೆಗಳು ಬಿಡುಗಡೆಯಾಗಿದ್ದು ಎಲ್ಲಾ ಸಮೀಕ್ಷೆಗಳು ಕೂಡ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಎಂದು ಹೇಳಿವೆ. ಆದರೂ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವುದು ಅನುಮಾನ ಎನ್ನಲಾಗಿದೆ. ಬಿಜೆಪಿ ಎರಡನೇ ಸ್ಥಾನಕ್ಕೆ ಕುಸಿಯಲಿದ್ದು, ಜೆಡಿಎಸ್ ಮೂರನೇ ಸ್ಥಾನದಲ್ಲಿ ಇರಲಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+