ಕೋವಿಡ್ ನಿಯಂತ್ರಣ: ಜೂನ್ 14ರ ತನಕ ಕರ್ನಾಟಕದೆಲ್ಲೆಡೆ ಲಾಕ್‌ಡೌನ್
ಬೆಂಗಳೂರು, ಜೂನ್ 3: ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕಾಗಿ ಕರ್ನಾಟಕದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ವಿಸ್ತರಣೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಈ ಕುರಿತಂತೆ ಅಧಿಕೃತ ಪ್ರಕಟಣೆ, ಮಾರ್ಗಸೂಚಿ ಶೀಘ್ರವೇ ಹೊರ ಬರಲಿದೆ. ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿವರವಾಗಿ ತಿಳಿಸಲಿದ್ದಾರೆ.
ಕರ್ನಾಟಕದಲ್ಲಿ ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಮೇ 10 ರಿಂದ 14ರ ತನಕ ಲಾಕ್‌ಡೌನ್ ಮಾಡಲಾಗಿತ್ತು. ಪುನಃ ಮೇ 24ರಿಂದ ಜೂನ್ 7ರ ತನಕ ಲಾಕ್‌ಡೌನ್ ಮುಂದುವರೆದಿದೆ. ಈಗ ಜೂನ್ 14ರ ತನಕ ಲಾಕ್‌ಡೌನ್ ಅವಧಿ ವಿಸ್ತರಿಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ರಾಜ್ಯದ ಅರ್ಥಿಕ ಪರಿಸ್ಥಿತಿ, ಉದ್ಯಮಗಳ ಪರಿಸ್ಥಿತಿಯನ್ನು ನೋಡಿಕೊಂಡು ಕೆಲವು ವಿನಾಯಿತಿಗಳನ್ನು ನೀಡಲಾಗುತ್ತದೆ. ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈಗಾಗಲೇ ಸುಳಿವು ನೀಡಿದ್ದಾರೆ.

Recommended Video
ಕರ್ನಾಟಕ ಇಂದು 3 ಕೋಟಿ ಕೋವಿಡ್-19 ಪರೀಕ್ಷೆಗಳನ್ನು ಪೂರೈಸಲಿದೆ. ಜೂನ್ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ಪೂರೈಕೆಯಾಗಲಿರುವ 45 ಲಕ್ಷ ಡೋಸ್ ಲಸಿಕೆ ಮತ್ತು ರಾಜ್ಯ ಸರ್ಕಾರ ಖರೀದಿಸುತ್ತಿರುವ ಲಸಿಕೆ ಪೈಕಿ 13.7 ಲಕ್ಷ ಡೋಸ್ ಸೇರಿದಂತೆ ಒಟ್ಟು 58.71 ಲಕ್ಷ ಡೋಸ್ ಕೊರೊನಾ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಲಿದೆ, ಹೆಚ್ಚು ಹೆಚ್ಚು ಪರೀಕ್ಷೆ ಹಾಗೂ ಲಸಿಕಾ ಅಭಿಯಾನ ತೀವ್ರಗೊಳಿಸುವ ಮೂಲಕ ಸೋಂಕು ನಿಯಂತ್ರಿಸಲು ಯೋಜನೆ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ
ಕೊರೊನಾ ಮೂರನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚಿಸಲಾಗಿರುವ ತಜ್ಞರ ಸಮಿತಿಯೊಂದಿಗೆ ಮುಖ್ಯಮಂತ್ರಿ
ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಖ್ಯಾತ ವೈದ್ಯರಾದ ಡಾ.ದೇವಿ ಶೆಟ್ಟಿ, ಡಿಸಿಎಂ
ಡಾ. ಅಶ್ವಥ ನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ವಿವಿಧ ಇಲಾಖೆ ತಜ್ಞರುಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications