• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದಲ್ಲಿ ಎರಡು ದಿನಕ್ಕೆ ಲಾಕ್‌ಡೌನ್‌ ವಿಸ್ತರಣೆ

|

ಬೆಂಗಳೂರು, ಮೇ 17: ಕರ್ನಾಟಕದಲ್ಲಿ ಇನ್ನು ಎರಡು ದಿನಗಳ ಕಾಲ ಲಾಕ್‌ಡೌನ್‌ ಮುಂದುವರಿಸಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೂರನೇ ಹಂತದ ಲಾಕ್‌ಡೌನ್‌ ಮೇ 17ರಂದು ಮುಕ್ತಾಯವಾಗಲಿದ್ದು, ನಾಲ್ಕನೇ ಹಂತದ ಲಾಕ್‌ಡೌನ್‌ ಕುರಿತು ಇಂದು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಬೇಕಿತ್ತು. ಆದರೆ, ಇದುವರೆಗು ಕೇಂದ್ರದಿಂದ ಯಾವುದೇ ಸೂಚನೆ ಸಿಗದ ಹಿನ್ನೆಲೆ ರಾಜ್ಯ ಸರ್ಕಾರ ಎರಡು ದಿನ ಕಾಲ ಲಾಕ್‌ಡೌನ್‌ ವಿಸ್ತರಿಸಿದೆ.

ನಿರ್ಮಲಾ ಸುದ್ದಿಗೋಷ್ಟಿ: 'ನಾಲ್ಕನೇ ಪ್ಯಾಕೇಜ್ ರಾಜ್ಯಕ್ಕೆ ಹೆಚ್ಚಿನ ಲಾಭ'

ಮೇ 2ರಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಲಾಕ್‌ಡೌನ್‌ ಮಾರ್ಗಸೂಚಿ ಮೇ 19ರ ಮಧ್ಯರಾತ್ರಿವರೆಗೂ ಜಾರಿಯಲ್ಲಿರಲಿದೆ ಎಂದು ಸರ್ಕಾರದ ಕಾರ್ಯದರ್ಶಿ ವಿಜಯ್ ಭಾಸ್ಕರ್ ಆದೇಶ ನೀಡಿದ್ದಾರೆ.

ಕೇಂದ್ರದ ಮೂಲಗಳ ಪ್ರಕಾರ, ಇಂದು ರಾತ್ರಿ 9 ಗಂಟೆಗೆ ಕೇಂದ್ರ ಸಚಿವರು ಸಭೆ ಸೇರಲಿದ್ದು, ಹೊಸ ಮಾರ್ಗಸೂಚಿ ಬಗ್ಗೆ ಚರ್ಚಿಸಲಿದ್ದಾರೆ. ಆ ಬಳಿಕ ಲಾಕ್‌ಡೌನ್‌ ನಾಲ್ಕನೇ ಹಂತದ ಮಾರ್ಗಸೂಚಿ ಹೊರಬೀಳುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರ ಲಾಕ್‌ಡೌನ್‌ ಮಾರ್ಗಸೂಚಿ ಹೊರಡಿಸುವುದಕ್ಕೂ ಮುಂಚೆಯೇ, ಮಹಾರಾಷ್ಟ್ರ ಮತ್ತು ತಮಿಳುನಾಡು ಸರ್ಕಾರಗಳು ಮೇ 31ರವರೆಗೂ ಲಾಕ್‌ಡೌನ್‌ ಮುಂದುವರಿಸುವಂತೆ ಆದೇಶಿಸಿದೆ.

English summary
Karnataka Government orders extends lockdown for 2 more days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X