ಕರ್ನಾಟಕದಲ್ಲಿ ಜೂನ್ 30ರ ತನಕ ಲಾಕ್ ಡೌನ್ ವಿಸ್ತರಣೆ
ಬೆಂಗಳೂರು, ಮೇ 31 : ಕರ್ನಾಟಕ ಸರ್ಕಾರ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಅನ್ನು ಜೂನ್ 30ರ ತನಕ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 299 ಹೊಸ ಪ್ರಕರಣಗಳು ದಾಖಲಾಗಿವೆ.
Recommended Video
ಭಾನುವಾರ ಸಂಜೆ ಕರ್ನಾಟಕ ಸರ್ಕಾರ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕೇಂದ್ರ ಗೃಹ ಇಲಾಖೆ ಶನಿವಾರ ಒಂದು ತಿಂಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿತ್ತು. ಈ ಆದೇಶದ ಬಳಿಕ ಕರ್ನಾಟಕ ಸರ್ಕಾರ ಲಾಕ್ ಡೌನ್ ವಿಸ್ತರಿಸಿದೆ.

ಕಂಟೈನ್‌ಮೆಂಟ್ ಝೋನ್‌ಗಳಲ್ಲಿ ಜೂನ್ 30ರ ತನಕ ಲಾಕ್ ಡೌನ್ ಆದೇಶ ಜಾರಿಯಲ್ಲಿ ಇರುತ್ತದೆ. ಇತರ ಪ್ರದೇಶಗಳಲ್ಲಿ ಕೆಲವು ಷರತ್ತಿನೊಂದಿಗೆ ಲಾಕ್ ನಿಯಮಗಳಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಕರ್ನಾಟಕದಲ್ಲಿ ಲಾಕ್ ಡೌನ್ ನಿಯಮಗಳಲ್ಲಿ ಕೆಲವು ವಿನಾಯಿತಿ ನೀಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಸರ್ಕಾರಿ ಬಸ್‌ಗಳ ಸಂಚಾರವಿದೆ. ದೇಶಿಯ ವಿಮಾನಗಳು ಹಾರಾಟ ನಡೆಸುತ್ತಿವೆ. ಜೂನ್ 1ರಿಂದ 30ರ ತನಕ 5ನೇ ಹಂತದ ಲಾಕ್ ಡೌನ್ ನಿಯಮಾವಳಿಗಳು ಜಾರಿಯಲ್ಲಿರುತ್ತದೆ.
ರಾಜ್ಯದಲ್ಲಿ ಜೂನ್ 1ರಿಂದ ಪ್ರಾರ್ಥನಾ ಮಂದಿರ, ಮಾಲ್, ಹೋಟೆಲ್ ತೆರೆಯಲು ಅನುಮತಿ ನೀಡಲಾಗುತ್ತದೆ ಎಂದು ಸರ್ಕಾರ ಕೇಳಿತ್ತು. ಆದರೆ, ಕೇಂದ್ರ ಗೃಹ ಸಚಿವಾಲಯ ಜೂನ್ 8ರಿಂದ ಪ್ರಾರ್ಥನಾ ಮಂದಿರ, ಹೋಟೆಲ್ ತೆರೆಯಬಹುದು ಎಂದು ಹೇಳಿತ್ತು.












Click it and Unblock the Notifications