ಕರ್ನಾಟಕದಲ್ಲಿ ಮಳೆ ಕೊರತೆ: ಸೂಪರ್ ಎಲ್ ನೀನೋ ಪರಿಣಾಮ, ಸರ್ಕಾರದಿಂದ ತುರ್ತು ಕ್ರಮ

ಕರ್ನಾಟಕದಲ್ಲಿ ಈ ಬಾರಿ ಮಳೆ ಕೊರತೆ ಎದುರಾಗಿದೆ. ಅಲ್ಲದೆ ಸೂಪರ್ ಎಲ್ ನೀನೋ ಪರಿಣಾಮದ ಆತಂಕವೂ ಎದುರಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ತುರ್ತು ಸಭೆ ನಡೆಸಿದೆ. ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನೀನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಅವರು, ಈವರೆಗೆ ಕೈಗೊಂಡಿರುವ ಅಗತ್ಯ ಕ್ರಮಗಳ ಕುರಿತು ಮಾಹಿತಿ ಪಡೆದು, ಮಳೆ ಕೊರತೆ, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.

Super El Nino

ಜಾಗತಿಕ ಹವಾಮಾನ ವೈಪರೀತ್ಯದ ಭಾಗವಾಗಿ ಸೂಪರ್ ಎಲ್ ನೀನೋ ಪರಿಣಾಮದಿಂದ ರಾಜ್ಯದಲ್ಲಿ ಉಂಟಾಗಬಹುದಾದ ಸಂಭವನೀಯ ಪರಿಣಾಮಗಳು, ಮಳೆಯ ಕೊರತೆಯಿಂದ ಜನರು ಎದುರಿಸಬಹುದಾದ ಸಮಸ್ಯೆಗಳು ಹಾಗೂ ರಾಜ್ಯದ ಕೆಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

India Weather: 315 ಜಿಲ್ಲೆಗಳಲ್ಲಿ ಮಳೆ ಕೊರತೆ, ಅಪಾಯಕಾರಿ ಜಿಲ್ಲೆಗಳೆಷ್ಟು? ಜುಲೈ 2ರವರೆಗಿನ ಮುನ್ಸೂಚನೆ ಇಲ್ಲಿದೆ
India Weather: 315 ಜಿಲ್ಲೆಗಳಲ್ಲಿ ಮಳೆ ಕೊರತೆ, ಅಪಾಯಕಾರಿ ಜಿಲ್ಲೆಗಳೆಷ್ಟು? ಜುಲೈ 2ರವರೆಗಿನ ಮುನ್ಸೂಚನೆ ಇಲ್ಲಿದೆ

ಸಂಭವನೀಯ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ನೀರಿನ ಸಂರಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಕಾರ್ಯಯೋಜನೆಗಳನ್ನು ಸಿದ್ಧಪಡಿಸಬೇಕು. ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು. ಜಲಾಶಯಗಳ ನೀರಿನ ಮಟ್ಟ, ಅಂತರ್ಜಲ ಪರಿಸ್ಥಿತಿ ಹಾಗೂ ನೀರಿನ ಬಳಕೆಯ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಯಾವುದೇ ರೀತಿಯ ಪ್ರಕೃತಿ ವಿಕೋಪ ಅಥವಾ ಬರ ಪರಿಸ್ಥಿತಿ ಎದುರಾದರೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಅನುಮತಿಯನ್ನು ತ್ವರಿತಗತಿಯಲ್ಲಿ ನೀಡಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಅಗತ್ಯವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.

Karnataka Rains: ಕರಾವಳಿ, ಒಳನಾಡು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್
Karnataka Rains: ಕರಾವಳಿ, ಒಳನಾಡು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್

ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ನೀರಿನ ಸಮಸ್ಯೆ

ಇನ್ನು ಕರ್ನಾಟಕದ 122 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 139 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 789 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲಾಗಿದ್ದು, 669 ಹಳ್ಳಿಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+