Fake News: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ವೇಳೆ ಬಾರ್, ಪಬ್ ಬಂದ್!
ಬೆಂಗಳೂರು, ಜನವರಿ 6: ಕರ್ನಾಟಕದಲ್ಲಿ ಕೊರೊನಾವೈರಸ್ ನಿಯಂತ್ರಿಸುವ ಹಿನ್ನೆಲೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಬಾರ್, ರೆಸ್ಟೋರೆಂಟ್, ಪಬ್ ತೆರೆದಿರುತ್ತವೆಯೇ ಇಲ್ಲವೇ ಎಂಬುದರ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ನಕಲಿ ಆದೇಶ ಪ್ರತಿಯೇ ಇಷ್ಟಕ್ಕೆಲ್ಲ ಕಾರಣವಾಗಿದೆ.
ಕರ್ನಾಟಕ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ರವಿಕುಮಾರ್ ಹೆಸರಿನಲ್ಲಿ ನಕಲಿ ಆದೇಶ ಪ್ರತಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ. ಈ ನಕಲಿ ಆದೇಶ ಪ್ರತಿಯ ಪ್ರಕಾರ, ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಷ್ಟಾಬ್ಲಿಷಮೆಂಟ್ 2007ರ ಅಡಿಯಲ್ಲಿ ವೀಕೆಂಡ್ ಕರ್ಫ್ಯೂ ಸಮಯದಲ್ಲಿ ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್ ಅನ್ನು ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೂ ಮುಚ್ಚಲಾಗಿರುತ್ತದೆ. ಹಾಗಿದ್ದಲ್ಲಿ ನಕಲಿ ಆದೇಶ ಪ್ರತಿಯಲ್ಲಿ ಏನಿದೆ ಎಂಬುದನ್ನು ಒಮ್ಮೆ ಓದಿ.
ನಕಲಿ ಆದೇಶ ಪ್ರತಿಯಲ್ಲಿ ಉಲ್ಲೇಖ ಆಗಿರುವುದು ಏನು?:
ರಾಜ್ಯದ ಅನೇಕ ಕಡೆಗಳಲ್ಲಿ ಕೊವಿಡ್-19 ಓಮಿಕ್ರಾನ್ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಅನ್ನು ವೀಕೆಂಡ್ ಕರ್ಫ್ಯೂ ಹಿನ್ನೆಲೆ ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಷ್ಟಾಬ್ಲಿಷಮೆಂಟ್ ಕಾಯ್ದೆ 2007ರ ಅನ್ವಯ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೂ ಈ ಮೇಲಿನ ಎಲ್ಲವನ್ನೂ ಮುಚ್ಚಬೇಕೆಂದು ಆದೇಶಿಸಿದೆ.

ಆದ್ದರಿಂದ ಇಂತಹ ದೃಢ ನಿರ್ಧಾರವನ್ನು ರಾಜ್ಯ ಸರ್ಕಾರ ಈ ಮೇಲ್ಕಂಡ ಎಲ್ಲವೂಗಳನ್ನು ಮುಚ್ಚಿಸುವಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಈ ರೀತಿ ವರದಿಗಳನ್ನು ಆಧರಿಸಿ ಕ್ರಮಗಳನ್ನು ಕೈಗೊಂಡು ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.












Click it and Unblock the Notifications