ಶುಕ್ರವಾರ ಬೆಂಗಳೂರಲ್ಲಿ ಆರ್ಭಟಿಸಿದ ರೈತ ಶಕ್ತಿ

Written By:
Subscribe to Oneindia Kannada

ಬೆಂಗಳೂರು, ಮೇ 27: ಶುಕ್ರವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಸಿರು ಬಾವುಟಗಳು ರಾರಾಜಿಸಿದವು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರೈತ ಸಮಾವೇಶಕ್ಕೆ ಸಾವಿರಾರು ಜನ ಸಾಕ್ಷಿಯಾದರು.

ಮಹಾತ್ಮ ಗಾಂಧಿ ಅವರ ಮೊಮ್ಮಗಳು ತಾರಾಗಾಂಧಿ ಬೃಹತ್ ಸಮಾವೇಶವನ್ನು ಉದ್ಘಾಟನೆ ಮಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಸಮಾವೇಶದಲ್ಲಿ ಖಂಡಿಸಲಾಯಿತು.[ತೋಟಗಳಿಗೆ ನೀರಿಲ್ಲ, ಅಡಿಕೆ ಬೆಳೆಗಾರರು ಕಂಗಾಲು]

farmer

ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರ ರೈತರ ಎಲ್ಲಾ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು, ಹೊಸ ಸಾಲ ನೀಡಬೇಕು, ಬರಗಾಲವನ್ನು ತಡೆಗಟ್ಟುವ ನೀರಾವರಿ ಯೋಜನೆಗಳನ್ನು ಜಾರಿಗೆ ತರಬೇಕು, ಕನಿಷ್ಠ ಬೆಂಬಲ ಬೆಲೆ ರದ್ದು ಮಾಡಿ, ಯೋಗ್ಯ ಬೆಲೆಯನ್ನು ನಿಗದಿ ಮಾಡಬೇಕು ಎಂಬ ಒತ್ತಾಯ ಕೇಳಿಬಂತು.[ಆನ್‌ಲೈನ್ ಕೃಷಿ ಮಾರುಕಟ್ಟೆ ಯಾವ ರಾಜ್ಯಗಳಲ್ಲಿ ಆರಂಭ?]

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಶಾಶ್ವತ ನೀರಾವರಿಗಾಗಿ ಕ್ರಮ ತೆಗೆದುಕೊಳ್ಳಬೇಕು. ರಾಜಕೀಯ ಹಿತಾಸಕ್ತಿಯನ್ನು ಬದಿಗಿಟ್ಟು ರೈತ ಪರ ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಬೇಕು ಎಂಬ ಒತ್ತಾಯ ಕೇಳಿಬಂತು.

-
-
-
-
-
-
-
-

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Thousands of farmers from all over the state are converged at National College Grounds, Basavanagudi, on Friday, May 27. Karnataka Rajya Raitha Sangha and Hasiru Sene organized Farmers rally in Basavanagudi national college ground, Bengaluru on May 27, 2016.
Please Wait while comments are loading...