ತೆಲಂಗಾಣ ಮಾದರಿ ಅನುಸರಿಸಲು ಕರ್ನಾಟಕದ ರೈತರ ಆಗ್ರಹ
Karnataka farmers: ಕರ್ನಾಟಕದಲ್ಲಿ ತೆಲಂಗಾಣ ಮಾದರಿಯನ್ನು ಅನುಸರಿಸುವ ಮೂಲಕ ರಾಜ್ಯದ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಕರ್ನಾಟಕದ ರೈತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. ಒಂದೊಮ್ಮೆ ಸೆಪ್ಟೆಂಬರ್ 30ರ ಒಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘಟನೆಯ ಮುಖಂಡರು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಕರ್ನಾಟಕದಲ್ಲಿರುವ ಜಲಾಶಯಗಳು ಹಾಗೂ ಕೆರೆಗಳಲ್ಲಿ ಭಾರೀ ಪ್ರಮಾಣದಲ್ಲಿ ಹುಳು ತುಂಬಿಕೊಂಡಿದೆ. ಇದರಿಂದ ಸಹಜವಾಗಿಯೇ ಕರ್ನಾಟಕದ ರೈತರಿಗೆ ನೀರಿನ ಸಮಸ್ಯೆ ಎದುರಾಗುತ್ತಿದೆ. ಈ ಸಮಸ್ಯೆಗೆ ರಾಜ್ಯ ಸರ್ಕಾರ ಪರಿಹಾರ ಕಂಡುಕೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಇದರ ಭಾಗವಾಗಿ ಕರ್ನಾಟಕದಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳಲ್ಲಿ ಹುಳು ತೆಗೆಸಿ, ರೈತರ ಜಮೀನಿಗೆ ನೀರು ಸರಬರಾಜು ಮಾಡಲು ಅವಶ್ಯ ಕ್ರಮ ಕೈಗೊಳ್ಳಬೇಕು. ಇದಕ್ಕೆ ತೆಲಂಗಾಣ ರಾಜ್ಯದ ಮಾದರಿಯನ್ನು ಅನುಸರಿಸಬೇಕು. ತೆಲಂಗಾಣದಲ್ಲಿ ಈಗಾಗಲೇ ಅಲ್ಲಿನ ಕೆರೆಗಳು ಹಾಗೂ ಜಲಾಶಯಗಳಲ್ಲಿ ಹುಳು ತೆಗೆಸಲಾಗಿದೆ ಎಂದು ರೈತರು ಒತ್ತಾಯಿಸಿದ್ದಾರೆ.

ಕೃಷಿ ಪಂಪ್ಸೆಟ್‌ಗಳಿಗೆ ರೈತರು ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎನ್ನುವ ನಿಯಮವನ್ನು ಸಡಿಲ ಮಾಡಬೇಕು. ಈ ಪ್ರಸ್ತಾವನೆಯನ್ನು ಕೈ ಬಿಟ್ಟು . ಕೃಷಿ ಪಂಪ್ ಸೆಟ್ಟುಗಳ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದು ಮಾಡಬೇಕು ರಾಜ್ಯ ಸರ್ಕಾರ ಭರವಸೆ ನೀಡಿದೆ. ಅದನ್ನು ಕಾರ್ಯರೂಪಕ್ಕೆ ತರಬೇಕು. ಕೃಷಿ ಸಾಲ ಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದಿರುವುದನ್ನು ಕೂಡಲೇ ರದ್ದುಗೊಳಿಸಬೇಕು. ರೈತರು ಬರ ಹಾಗೂ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ, ಪ್ರವಾಹ ಹಾನಿ ಮೊತ್ತವನ್ನು ಎನ್‌ಡಿಆರ್ಎಫ್ ಪರಿಹಾರ ಮಾನದಂಡ ತಿದ್ದುಪಡಿ ಮಾಡಿ ವೈಜ್ಞಾನಿಕ ಮಾನದಂಡ ಅನುಸರಿಸಿ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಇನ್ನು ಖಾಸಗಿ ಫೈನಾನ್ಸ್ ಗಳು ಬ್ಯಾಂಕುಗಳು ಸಾಲ ವಸೂಲಿಗೆ ನೋಟಿಸ್ ನೀಡಿ ಕಿರುಕುಳ ನೀಡಿ ಜಮೀನುಗಳನ್ನು ಹರಾಜು ಮಾಡುತ್ತಿದೆ. ಕೂಡಲೇ ಸರ್ಕಾರ ಮಧ್ಯಪ್ರವೇಶ ಮಾಡಿ ತಪ್ಪಿಸಬೇಕು. ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ನೀಡಿರುವುದನ್ನು ಕೈ ಬಿಡಬೇಕು. ಕಳಸಾ ಬಂಡೂರಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನೀಡಲು ಕೇಂದ್ರಕ್ಕೆ ಒತ್ತಾಯಿಸಿ. ಯೋಜನೆಗೆ ಅವಕಾಶ ಕಲ್ಪಿಸಬೇಕು. ಇನ್ನು ಕಬ್ಬಿನ ಉತ್ಪನ್ನ ಈಗ ಇಳುವರಿ ಕಡಿಮೆ ಆಗಿದೆ. ಹೀಗಾಗಿ, ಪ್ರಸಕ್ತ ಸಾಲಿನ ಎಫ್ಆರ್‌ಪಿ ದರಕ್ಕಿಂತ ಕಬ್ಬಿನ ಹೆಚ್ಚುವರಿ ದರ ನಿಗದಿ ಮಾಡಬೇಕು. ಕಳೆದ ವರ್ಷ ಟನ್ ಕಬ್ಬಿಗೆ 150 ರೂಪಾಯಿ ನಿಗದಿ ಮಾಡಲಾಗಿತ್ತು. ಇದನ್ನು ತಕ್ಷಣವೇ ಕೊಡಿಸಬೇಕು ಎಂಬ ಒತ್ತಾಯಗಳ ಬಗ್ಗೆ 25 ದಿನದ ಗಡುವಿನ ಒಳಗಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯದ ರೈತ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸಿವೆ.
ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಮಹದಾಯಿ ನೀರು ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ವೀರೇಶ್ ಸೂಬರದ ಮಠ, ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಲ್ಲೂರು ರವಿಕುಮಾರ್, ರಾಜ್ಯ ಕಬ್ಬು ಬೆಳೆಗಾರ ಸಂಘ ರಾಜ್ಯ ಕಾರ್ಯಧ್ಯಕ್ಷ ವೀರನಗೌಡ ಪಾಟೀಲ್, ಹಸಿರುಸೇನೆ ರಾಜ್ಯಾಧ್ಯಕ್ಷ ಕರಿಬಸಪ್ಪಗೌಡ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.











Click it and Unblock the Notifications