ಮಹದಾಯಿ ನ್ಯಾಯಾಧೀಕರಣಕ್ಕೆ ಅರ್ಜಿ ಸಲ್ಲಿಸಿದ ಕರ್ನಾಟಕ

ಬೆಂಗಳೂರು, ಡಿಸೆಂಬರ್ 02 : ಮಹದಾಯಿ ನದಿಯಿಂದ 7 ಟಿಎಂಸಿ ನೀರನ್ನು ಮಲಪ್ರಭಾ ಕಣಿವೆಯ ಮೂಲಕ ಬಳಸಿಕೊಳ್ಳಲು ಅವಕಾಶ ನೀಡಬೇಕು ಎಂದು ಕರ್ನಾಟಕ ಸರ್ಕಾರ ಮಹದಾಯಿ ನ್ಯಾಯಾಧೀಕರಣದ ಮುಂದೆ ಅರ್ಜಿ ಸಲ್ಲಿಸಿದೆ.

ಮಂಗಳವಾರ ರಾಜ್ಯ ಸರ್ಕಾರ ಮಹದಾಯಿ ಜಲವಿವಾದ ನ್ಯಾಯಾಧೀಕರಣದ ಮುಂದೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದೆ. 7 ಟಿಎಂಸಿ ನೀರನ್ನು ಉತ್ತರ ಕರ್ನಾಟಕದ ಮಲಪ್ರಭಾ ಕಣಿವೆಯ ಮೂಲಕ ಬರಪೀಡಿತ ಪ್ರದೇಶಗಳಿಗೆ ಹಂಗಾಮಿಯಾಗಿ ಬಳಸಿಕೊಳ್ಳಲು ಅವಕಾಶ ನೀಡಬೇಕು ಎಂದು ಕೋರಿದೆ. [ಏನಿದು ಕಳಸಾ-ಬಂಡೂರಿ ಯೋಜನೆ]

kalasa banduri

7.56 ಟಿಎಂಸಿ ನೀರನ್ನು ಮಲಪ್ರಭೆಗೆ ತಿರುಗಿಸಿಕೊಂಡು ಹುಬ್ಬಳ್ಳಿ-ಧಾರವಾಡ, ಗದಗ ಮುಂತಾದ ಜಿಲ್ಲೆಗಳ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ-ಬಂಡೂರಿ ಯೋಜನೆಗೆ ಗೋವಾ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಆದ್ದರಿಂದ, ಕರ್ನಾಟಕ ಸರ್ಕಾರ ನ್ಯಾಯಾಧೀಕರಣದ ಮೊರೆ ಹೋಗಿದೆ. [ನ್ಯಾಯಾಧೀಕರಣಕ್ಕೆ ಅರ್ಜಿ]

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಮತ್ತು ರೈತ ಮುಖಂಡರೊಂದಿಗೆ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಅವರನ್ನು ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಭೇಟಿ ಮಾಡಿದ್ದರು. ನ್ಯಾಯಾಧೀಕರಣದ ಮುಂದೆ ಅರ್ಜಿ ಸಲ್ಲಿಸುವ ಬಗ್ಗೆ ಮಾತುಕತೆ ನಡೆಸಿದ್ದರು. [ಕಳಸಾ ಬಂಡೂರಿ ಅನುಷ್ಠಾನಕ್ಕೆ ಒತ್ತಾಯಿಸಿ ರೊಟ್ಟಿ ಚಳವಳಿ]

ಅರ್ಜಿಯ ಪ್ರಮುಖ ಅಂಶಗಳು : ಕರ್ನಾಟಕದಲ್ಲಿ 136 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಇವುಗಳಲ್ಲಿ 20 ತಾಲೂಕುಗಳು ಮಲಪ್ರಭಾ ಕಣಿವೆಯ ಭಾಗದಲ್ಲಿವೆ. ಮಹದಾಯಿ ಕಣಿವೆಯಲ್ಲಿ ಒಟ್ಟು 108 ಟಿಎಂಸಿ ನೀರಿನ ಲಭ್ಯತೆ ಇದೆ. ಗೋವಾ ರಾಜ್ಯ ಸದ್ಯ 9.395 ಟಿಎಂಸಿ ಬಳಕೆ ಮಾಡುತ್ತಿದೆ. ಕುಡಿಯುವ ನೀರು ಪೂರೈಕೆ ಮಾಡಲು 7 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+