ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾಹ ಭೀತಿ: ಯಡಿಯೂರಪ್ಪ ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ

|
Google Oneindia Kannada News

ಬೆಂಗಳೂರು, ಆಗಸ್ಟ್ 6: ಕರ್ನಾಟಕದ ರಾಜ್ಯದ ಹಲವು ಕಡೆ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಕೊಡಗು, ಕರಾವಳಿ, ಮಲೆನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಪ್ರವಾಹದ ಆತಂಕ ಇದೆ.

Recommended Video

ತುಂಬಿ ಹರಿದ ಕಾಗಿಣಾ ನದಿ, ನಡುಗಡ್ಡೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ | Oneindia Kannada

ಮಳೆ ಹಾಗೂ ಪ್ರವಾಹ ಕುರಿತು ಸರ್ಕಾರ ಯಾವುದೇ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ, ಇದರ ಪರಿಣಾಮ ಭಾರಿ ನಷ್ಟ ಎದುರಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಕಿಡಿಕಾರಿದ್ದಾರೆ.

ಮಳೆ, ಪ್ರವಾಹ: ಮುಂಜಾಗ್ರತೆಗಾಗಿ 50 ಕೋಟಿ ಬಿಡುಗಡೆಗೆ ಸಿಎಂ ಸೂಚನೆಮಳೆ, ಪ್ರವಾಹ: ಮುಂಜಾಗ್ರತೆಗಾಗಿ 50 ಕೋಟಿ ಬಿಡುಗಡೆಗೆ ಸಿಎಂ ಸೂಚನೆ

ಕೊರೊನಾ ಸೋಂಕಿಗೆ ತುತ್ತಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ 'ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ?' ಎಂದು ಪ್ರಶ್ನಿಸಿದ್ದಾರೆ. ಮುಂದೆ ಓದಿ....

ಊಟ-ವಸತಿ ವ್ಯವಸ್ಥೆ ಕಲ್ಪಿಸಿ

ಊಟ-ವಸತಿ ವ್ಯವಸ್ಥೆ ಕಲ್ಪಿಸಿ

'ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು' ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಪ್ರವಾಹ ಪರಿಸ್ಥಿತಿಯ ಉಸ್ತುವಾರಿ ಕಾರ್ಯ ಕುಂಠಿತ

ಪ್ರವಾಹ ಪರಿಸ್ಥಿತಿಯ ಉಸ್ತುವಾರಿ ಕಾರ್ಯ ಕುಂಠಿತ

'ರಾಜ್ಯ ಕಂದಾಯ ಸಚಿವರೂ ಕ್ವಾರಂಟೈನ್‌ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಇತ್ತೀಚೆಗೆ ವರ್ಗಾವಣೆಗೊಂಡಿರುವ ಬಿಬಿಎಂಪಿ ಆಯುಕ್ತರಿಗೆ ಕಂದಾಯ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿರುವುದರಿಂದ ಪ್ರವಾಹ ಪರಿಸ್ಥಿತಿಯ ಉಸ್ತುವಾರಿ ಕಾರ್ಯ ಕುಂಠಿತಗೊಂಡಿದೆ. ಮುಖ್ಯಮಂತ್ರಿ ಈ ಕಡೆ ತಕ್ಷಣ ಗಮನಹರಿಸಬೇಕು.' ಎಂದು ಆಗ್ರಹಿಸಿದ್ದಾರೆ.

ಮುಂದುವರೆದ ಮಳೆ: ಕರಾವಳಿ, ಮಲೆನಾಡಿನಾದ್ಯಂತ ರೆಡ್ ಅಲರ್ಟ್ ಘೋಷಣೆಮುಂದುವರೆದ ಮಳೆ: ಕರಾವಳಿ, ಮಲೆನಾಡಿನಾದ್ಯಂತ ರೆಡ್ ಅಲರ್ಟ್ ಘೋಷಣೆ

ಅಧಿಕಾರಿ, ಸಚಿವರಿಗೆ ಜವಾಬ್ದಾರಿ ಹಂಚಿ

ಅಧಿಕಾರಿ, ಸಚಿವರಿಗೆ ಜವಾಬ್ದಾರಿ ಹಂಚಿ

'ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಅವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು' ಎಂದು ತಿಳಿಸಿದ್ದಾರೆ.

ಸರ್ಕಾರದ ನಿರ್ಲಕ್ಷಕ್ಕೆ ಅಮಾಯಕರು ಬಲಿ

ಸರ್ಕಾರದ ನಿರ್ಲಕ್ಷಕ್ಕೆ ಅಮಾಯಕರು ಬಲಿ

'ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ.‌‌ ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ' ಎಂದು ಟ್ವಿಟ್ಟರ್ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

English summary
Karnataka Flood: Congress leader Siddaramaiah has urged the government to take necessary steps in the wake of heavy rains in the state of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X