ಕರ್ನಾಟಕದಲ್ಲಿ ಪ್ರವಾಹದಿಂದ ನಷ್ಟ : 546 ಕೋಟಿ ಕೊಟ್ಟ ಕೇಂದ್ರ
ಬೆಂಗಳೂರು, ನವೆಂಬರ್ 19 : ಪ್ರವಾಹ ಮತ್ತು ಭೂ ಕುಸಿತದಿಂದ ನಷ್ಟ ಅನುಭವಿಸಿರುವ ಕರ್ನಾಟಕಕ್ಕೆ 546 ಕೋಟಿ ನೆರವು ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕೊಡಗು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಅಪಾರ ನಷ್ಟವಾಗಿತ್ತು.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ, ಕೃಷಿ ಮಂತ್ರಿ ರಾಧಾ ಮೋಹನ್ ಸಿಂಗ್ ಸಭೆಯಲ್ಲಿ ಪಾಲ್ಗೊಂಡಿದ್ದರು.
ಎನ್‌ಡಿಆರ್‌ಎಫ್ ನಿಧಿಯ ಮೂಲಕ ಕರ್ನಾಟಕಕ್ಕೆ 546.21 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ನೀಡಲಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ಕೊಡಗು ಮತ್ತು ಇತರ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿತ್ತು.

ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಕೇಂದ್ರ ಸರ್ಕಾರದ ತಂಡ ಭೇಟಿ ನೀಡಿದ ಮಳೆ ಮತ್ತು ಭೂ ಕುಸಿತದಿಂದ ಆದ ನಷ್ಟದ ಅಂದಾಜು ನಡೆಸಿತ್ತು. ಈ ತಂಡ ನೀಡಿದ ವರದಿಯ ಆಧಾರದ ಮೇಲೆ ಅನುದಾನ ನೀಡಲಾಗುತ್ತಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 2 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಿದ್ದರು. ಸರ್ಕಾರ ಮೊದಲ ಹಂತದಲ್ಲಿ 546 ಕೋಟಿ ರೂ. ನೀಡಿದೆ.
-
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್











Click it and Unblock the Notifications