ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಪ್ರವಾಹದಿಂದ ನಷ್ಟ : 546 ಕೋಟಿ ಕೊಟ್ಟ ಕೇಂದ್ರ

|
Google Oneindia Kannada News

ಬೆಂಗಳೂರು, ನವೆಂಬರ್ 19 : ಪ್ರವಾಹ ಮತ್ತು ಭೂ ಕುಸಿತದಿಂದ ನಷ್ಟ ಅನುಭವಿಸಿರುವ ಕರ್ನಾಟಕಕ್ಕೆ 546 ಕೋಟಿ ನೆರವು ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕೊಡಗು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಅಪಾರ ನಷ್ಟವಾಗಿತ್ತು.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ, ಕೃಷಿ ಮಂತ್ರಿ ರಾಧಾ ಮೋಹನ್ ಸಿಂಗ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೊಡಗು ಪ್ರವಾಹದಿಂದ 3 ಸಾವಿರ ಕೋಟಿ ನಷ್ಟ: ಕುಮಾರಸ್ವಾಮಿಕೊಡಗು ಪ್ರವಾಹದಿಂದ 3 ಸಾವಿರ ಕೋಟಿ ನಷ್ಟ: ಕುಮಾರಸ್ವಾಮಿ

ಎನ್‌ಡಿಆರ್‌ಎಫ್ ನಿಧಿಯ ಮೂಲಕ ಕರ್ನಾಟಕಕ್ಕೆ 546.21 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ನೀಡಲಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ಕೊಡಗು ಮತ್ತು ಇತರ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿತ್ತು.

ಲಘು ವಾಹನ, ಬಸ್‌ಗಳ ಸಂಚಾರಕ್ಕೆ ಸಂಪಾಜೆ ಘಾಟ್ ಮುಕ್ತಲಘು ವಾಹನ, ಬಸ್‌ಗಳ ಸಂಚಾರಕ್ಕೆ ಸಂಪಾಜೆ ಘಾಟ್ ಮುಕ್ತ

Karnataka floods : Centrel govt approves for Rs 546 crore fund

ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಕೇಂದ್ರ ಸರ್ಕಾರದ ತಂಡ ಭೇಟಿ ನೀಡಿದ ಮಳೆ ಮತ್ತು ಭೂ ಕುಸಿತದಿಂದ ಆದ ನಷ್ಟದ ಅಂದಾಜು ನಡೆಸಿತ್ತು. ಈ ತಂಡ ನೀಡಿದ ವರದಿಯ ಆಧಾರದ ಮೇಲೆ ಅನುದಾನ ನೀಡಲಾಗುತ್ತಿದೆ.

ಚಿತ್ರಗಳು : ಮಡಿಕೇರಿ-ಮಂಗಳೂರು ರಸ್ತೆ ದುರಸ್ಥಿಚಿತ್ರಗಳು : ಮಡಿಕೇರಿ-ಮಂಗಳೂರು ರಸ್ತೆ ದುರಸ್ಥಿ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 2 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಿದ್ದರು. ಸರ್ಕಾರ ಮೊದಲ ಹಂತದಲ್ಲಿ 546 ಕೋಟಿ ರೂ. ನೀಡಿದೆ.

English summary
The Centrel government approved over Rs 546 crore as additional assistance to Karnataka, which was hit by floods and landslides in the month of July and August. A decision was taken at a high-level meeting chaired by Home Minister Rajnath Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X