ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಫೋಟಕ ಸುದ್ದಿ : ಕಾಂಗ್ರೆಸ್‌ನಿಂದ ಮತ್ತೊಂದು ಆಡಿಯೋ ಟೇಪ್ ಬಿಡುಗಡೆ

By Gururaj
|
Google Oneindia Kannada News

Recommended Video

Puttaswamy and Congress MLA Wife offer audio released | ಶಾಸಕನ ಹೆಂಡತಿಗೆ ಆಮೀಷ ಒಡ್ಡಿದ ಬಿ ಎಸ್ ವೈ ಆಪ್ತ

ಬೆಂಗಳೂರು, ಮೇ 19 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ 4 ಗಂಟೆಗೆ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಸಾಬೀತು ಮಾಡಬೇಕಿದೆ. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಆಡಿಯೋ ಬಿಡುಗಡೆ ಮಾಡಿದೆ.

ಕರ್ನಾಟಕ ವಿಶ್ವಾಸಮತ LIVE: ವಿಧಾನಸೌಧದ ಮೇಲೆ ಎಲ್ಲರ ಕಣ್ಣುಕರ್ನಾಟಕ ವಿಶ್ವಾಸಮತ LIVE: ವಿಧಾನಸೌಧದ ಮೇಲೆ ಎಲ್ಲರ ಕಣ್ಣು

ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಶನಿವಾರ ವಿಧಾನಸೌಧದಲ್ಲಿ ಈ ಆಡಿಯೋ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರ ಪತ್ನಿಗೆ ಕರೆ ಮಾಡಿದ ಬಿಜೆಪಿ ನಾಯಕರು ಸಚಿವ ಸ್ಥಾನ, ಹಣದ ಆಮಿಷವೊಡ್ಡಿದ್ದಾರೆ.

ಅಖಾಡಕ್ಕಿಳಿದ ಜನಾರ್ದನ ರೆಡ್ಡಿ, ಕಾಂಗ್ರೆಸ್‌ ಶಾಸಕನಿಗೆ ಗಾಳ?ಅಖಾಡಕ್ಕಿಳಿದ ಜನಾರ್ದನ ರೆಡ್ಡಿ, ಕಾಂಗ್ರೆಸ್‌ ಶಾಸಕನಿಗೆ ಗಾಳ?

Karnataka Floor Test : Congress releases tape alleging BJP tried to buy MLA

ಸಚಿವ ಸ್ಥಾನ ನೀಡಿ 5ಕೋಟಿ ಹಣ ನೀಡುವುದು, ಸಚಿವ ಸ್ಥಾನ ಬೇಡವೆಂದರೆ 15 ಕೋಟಿ ಹಣ ನೀಡುವುದಾಗಿ ಬಿಜೆಪಿ ನಾಯಕರು ಶಾಸಕರ ಪತ್ನಿ ಜೊತೆ ಮಾತುಕತೆ ನಡೆಸಿದ ಆಡಿಯೋ ಇದಾಗಿದೆ. ಆದರೆ, ಯಾವ ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂಬದನ್ನು ಉಗ್ರಪ್ಪ ಅವರು ಬಹಿರಂಗ ಪಡಿಸಿಲ್ಲ.

ಕಾಂಗ್ರೆಸ್ ಶಾಸಕನಿಗೆ ಹಣದ ಆಮಿಷ: ಜನಾರ್ದನ ರೆಡ್ಡಿ ವಿರುದ್ಧ ದೂರುಕಾಂಗ್ರೆಸ್ ಶಾಸಕನಿಗೆ ಹಣದ ಆಮಿಷ: ಜನಾರ್ದನ ರೆಡ್ಡಿ ವಿರುದ್ಧ ದೂರು

ಅಚ್ಚರಿಯ ವಿಷಯವೆಂದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಮತ್ತು ಯಡಿಯೂರಪ್ಪ ಆಪ್ತರಾದ ವಿಧಾನಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಅವರು ಕಾಂಗ್ರೆಸ್ ಶಾಸಕರ ಪತ್ನಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

ಸಚಿವ ಸಂಪುಟಕ್ಕೆ ತಕ್ಷಣ ತೆಗೆದುಕೊಳ್ಳುತ್ತೇವೆ. ಶಾಸಕರ ಮೇಲಿರುವ ಅಕ್ರಮ ಗಣಿಗಾರಿಕೆ ಕೇಸನ್ನು ತೆಗೆದು ಹಾಕಿಸುತ್ತೇವೆ ಎಂದು ಬಿ.ಜೆ.ಪುಟ್ಟಸ್ವಾಮಿ ಆಮಿಷವೊಡ್ಡಿದ್ದಾರೆ.

ವಿ.ಎಸ್.ಉಗ್ರಪ್ಪ ಸವಾಲು : 'ವಿಜಯೇಂದ್ರ ಮತ್ತು ಬಿ.ಜೆ.ಪುಟ್ಟಸ್ವಾಮಿ ಅವರು ನಾವು ಕಾಂಗ್ರೆಸ್ ಶಾಸಕರ ಪತ್ನಿಗೆ ಕರೆ ಮಾಡಿಲ್ಲ ಎಂದು ಹೇಳಿದರೆ, ನಾನು ಶಾಸಕರ ಹೆಸರನ್ನು ಬಹಿರಂಗ ಪಡಿಸುತ್ತೇನೆ' ಎಂದು ವಿ.ಎಸ್.ಉಗ್ರಪ್ಪ ಸವಾಲು ಹಾಕಿದರು.

ಆಡಿಯೋ ಬಿಡುಗಡೆಯಾಗಿತ್ತು : ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಾಲ್ ಅವರಿಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಕರೆ ಮಾಡಿ ಆಮಿಷವೊಡ್ಡುವ ಆಡಿಯೋವನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿತ್ತು.

English summary
Karnataka Assembly Floor Test Updates. Legislative Council member and Congress leader V.S. Ugrappa on Saturday came up with an audio clip alleging that Chief Minister B.S.Yeddyurappa son B.Y.Vijayendra and MLC B.J.Puttaswamy tried to buy one of its MLA.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X