ಪ್ರತಾಪ್ ಗೌಡ ಪಾಟೀಲ್ ಪ್ರತ್ಯಕ್ಷ, ಕಾಂಗ್ರೆಸ್‌ ಪಾಳಯಕ್ಕೆ ಜಿಗಿತ!

Recommended Video

      ಪ್ರತಾಪ್ ಗೌಡ ಪಾಟೀಲ್ ಪ್ರತ್ಯಕ್ಷ, ಕಾಂಗ್ರೆಸ್‌ ಪಾಳಯಕ್ಕೆ ಜಿಗಿತ | Oneindia Kannada

      ಬೆಂಗಳೂರು, ಮೇ 19 : ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್ ಗೌಡ ಪಾಟೀಲ್ ವಿಧಾನಸೌಧಕ್ಕೆ ಆಗಮಿಸಿದರು. ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಪಾಳಯಕ್ಕೆ ಜಿಗಿದಿದ್ದಾರೆ.

      ಮೇ 16ರಿಂದ ನಾಪತ್ತೆಯಾಗಿದ್ದ ಪ್ರತಾಪ್ ಗೌಡ ಪಾಟೀಲ್ ಗೋಲ್ಡ್‌ ಫಿಂಚ್ ಹೋಟೆಲ್‌ನಿಂದ ಪೊಲೀಸ್ ಭದ್ರತೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದರು. ವಿಧಾನಸೌಧದ ಮೆಟ್ಟಿಲ ಬಳಿಯೇ ಡಿ.ಕೆ.ಶಿವಕುಮಾರ್ ಅವರು ಪಾಟೀಲರನ್ನು ಬರಮಾಡಿಕೊಂಡು ಪಕ್ಷದ ವಿಪ್ ನೀಡಿದರು.

      ನಂತರ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, 'ಪ್ರತಾಪ್ ಗೌಡ ಪಾಟೀಲ್ ಅವರು ಪಕ್ಷದ ವಿಪ್ ಪಡೆಡಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಮತಚಲಾವಣೆ ಮಾಡಲಿದ್ದಾರೆ. ಅವರು ಎಲ್ಲಿ ಹೋಗಿದ್ದರು ಎಂದು ಅವರನ್ನೇ ಕೇಳಿ' ಎಂದರು.

      Karnataka Floor Test : Pratapgouda Patil has slipped out of the BJP hands

      ವಿಧಾನಸೌಧದ ಮೊಗಸಾಲೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರನ್ನು ಬಿಜೆಪಿ ಪಾಳಯಕ್ಕೆ ಕರೆದುಕೊಂಡು ಹೋಗುವ ಪ್ರಯತ್ನ ನಡೆಯಿತು. ಯಲಹಂಕದ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಪಾಟೀಲರನ್ನು ಎಳೆಯಲು ಮುಂದಾದರು. ಆದರೆ, ಅವರು ಕಾಂಗ್ರೆಸ್ ನಾಯಕರು ಕುಳಿತಿರುವ ಜಾಗಕ್ಕೆ ತೆರಳಿದರು.

      ಡಿ.ಕೆ.ಸುರೇಶ್, ತುಮಕೂರು ಸಂಸದ ಮುದ್ದಹನುಮೇಗೌಡ ಅವರು ಪ್ರತಾಪ್ ಗೌಡ ಪಾಟೀಲ್ ಅವರನ್ನು ಕರೆದುಕೊಂಡು ಹೋದರು. ಕಾಂಗ್ರೆಸ್‌ ಸದಸ್ಯರ ಜೊತೆ ಕುಳಿತು ಅವರು ಊಟ ಸಮಿಯುತ್ತಿದ್ದಾರೆ. ಎಲ್ಲಾ ಕಾಂಗ್ರೆಸ್ ನಾಯಕರು ಅದೇ ಕೊಠಡಿಯಲ್ಲಿದ್ದಾರೆ.

      ಮೇ 16ರಂದು ಪ್ರತಾಪ್ ಗೌಡ ಪಾಟೀಲ್ ಬೆಂಗಳೂರಿನಿಂದ ನಾಪತ್ತೆಯಾಗಿದ್ದರು. ಖಾಸಗಿ ವಿಮಾನದ ಮೂಲಕ ಅವರು ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ್ದರು. ಆದರೆ, ಎಲ್ಲಿದ್ದರು? ಎಂಬುದು ಇನ್ನೂ ಖಚಿತವಾಗಿಲ್ಲ.

      ಪ್ರತಾಪ್ ಗೌಡ ಪಾಟೀಲ್ 2013, 2018ರ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. 2008ರಲ್ಲಿ ಇದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಬಿಜೆಪಿ ಅವರನ್ನು ರಹಸ್ಯ ಸ್ಥಳಕ್ಕೆ ಕರೆದುಕೊಂಡು ಹೋಗಿತ್ತು ಎಂದು ತಿಳಿದುಬಂದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+