S.M. Krishna: ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ...
ಕರ್ನಾಟಕದ ಮುಖ್ಯಮಂತ್ರಿ ಆಗಿ, ಕರ್ನಾಟಕ ರಾಜ್ಯದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನ ಮಾಡಿ. ಜಾಗತಿಕ ಮಟ್ಟದಲ್ಲಿ ಕನ್ನಡ ನಾಡು ಗುರುತಿಸಿಕೊಳ್ಳಲು ಕೊಡುಗೆ ನೀಡಿದ್ದ, ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ತುರ್ತು ನಿಗಾ ಘಟಕ ಅಂದ್ರೆ ಐಸಿಯು ಸೇರಿದ್ದಾರೆ. 92 ವರ್ಷ ವಯಸ್ಸಿನ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರಿಗೆ ಏನಾಯ್ತು? ಈಗ ಹೇಗಿದೆ ಅವರ ಆರೋಗ್ಯ? ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ? ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರು ಕಾಂಗ್ರೆಸ್ ಪಕ್ಷದಿಂದ ಬೆಳೆದು ಬಂದಿದ್ದರೂ, ಕರ್ನಾಟಕದ ರಾಜಕೀಯ ಬದಲಾವಣೆ ಗಾಳಿಗೆ ಸಿಲುಕಿ ಕೆಲವು ವರ್ಷಗಳ ಹಿಂದಷ್ಟೇ ಬಿಜೆಪಿ ಸೇರಿದ್ದರು. ಬಿಜೆಪಿ ಪಕ್ಷದಲ್ಲಿ ಉನ್ನತ ಗೌರವ ಪಡೆದಿರುವ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರು, ಕೇಂದ್ರ ನಾಯಕರಿಗೆ ಕೂಡ ಹತ್ತಿರವಾಗಿದ್ದಾರೆ. ಹೀಗಿದ್ದಾಗ ವಯೋ ಸಹಜ ಆರೋಗ್ಯ ಸಮಸ್ಯೆಗಳ ಕಾರಣ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಮತ್ತೆ ಐಸಿಯುಗೆ ಸೇರಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿ ಮಾಡಿದೆ. ಹಾಗಾದ್ರೆ ಈಗ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯ ಹೇಗಿದೆ? ಮುಂದೆ ಓದಿ.

ಇತ್ತೀಚಿಗೆ ಡಿಸ್ಚಾರ್ಜ್ ಆಗಿ ಬಂದಿದ್ದರು
4 ತಿಂಗಳಿಂದ ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಅವರು ಐಸಿಯುಗೆ ಸೇರಿ ಚಿಕಿತ್ಸೆ ಪಡೆದು ಗುಣಮುಖರಾಗಿ, ಕಳೆದ ಬುಧವಾರ ಡಿಸ್ಚಾರ್ಜ್ ಆಗಿದ್ದರು. ಆದರೆ ಇದೀಗ ಮತ್ತೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಐಸಿಯು ಸೇರಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದು ಈ ಬಗ್ಗೆ ರಾಜಕೀಯ ನಾಯಕರು & ಬೆಂಬಲಿಗರು ಮಾಹಿತಿ ಪಡೆಯುತ್ತಿದ್ದಾರೆ. ಹಾಗೇ ಅಭಿಮಾನಿಗಳು ಮಾಜಿ ಸಿಎಂ ಆರೋಗ್ಯ ಸ್ಥಿತಿ ಬಗ್ಗೆ ಆತಂಕಗೊಂಡಿದ್ದು, ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ.












Click it and Unblock the Notifications