ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಸ್ಥಾನದಿಂದ ಯಡಿಯೂರಪ್ಪ ಇಳಿಸಲು ಶಾ-ಮೋದಿ ತಂತ್ರ?

|
Google Oneindia Kannada News

ಬೆಂಗಳೂರು, ಜ. 25: ಸಂಪುಟ ವಿಸ್ತರಣೆ, ಅತೃಪ್ತರ ಓಲೈಕೆ, ಹೈಕಮಾಂಡ್‌ಗೆ ಮೊರೆ, ಭಿನ್ನಮತಿಯರಿಗೆ ಸಮಾದಾನ ಇವಿಷ್ಟೆ ಕೆಲಸವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಳೆದ ಆರು ತಿಂಗಳಿನಿಂದ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸರಣಿ ಟ್ವೀಟ್ ಮಾಡಿದ್ದಾರೆ. ಆಡಳಿತ ಯಡಿಯೂರಪ್ಪ ಅವರ ಕೈಗೆ ಸಿಗುತ್ತಿಲ್ಲ. ಹೈಕಮಾಂಡ್ ಕ್ಯಾರೆ ಅನ್ತಿಲ್ಲ. ಸಿಎಂ ಯಡಿಯೂರಪ್ಪ ಮುಳುಗುತ್ತಿದ್ದಾರೆ. ಜೊತೆಗೆ ರಾಜ್ಯವನ್ನೂ ಮುಳುಗಿಸಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಸಮಾವೇಶದಲ್ಲಿ ಭಾಗವಹಿಸಿ ಬಂದಿರುವ ಮುಖ್ಯಮಂತ್ರಿ ರಾಜ್ಯದ ಜಿಡಿಪಿ ಶೇಕಡಾ 9ಕ್ಕಿಂತ ಹೆಚ್ಚಿದೆ ಎಂದು ಹೇಳಿದ್ದರು. ಆದರೆ ರಾಜ್ಯ ದಿವಾಳಿ ಅಂಚಿನಲ್ಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಒಂದೆ ಸಲಕ್ಕೆ 8 ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ ಅವರು, ರಾಜ್ಯ ಬಿಜೆಪಿ ಸರ್ಕಾರ ಹಾಗೂ ಸಿಎಂ ಯಡಿಯೂರಪ್ಪ ಅವರ ಆಡಳಿತ ವೈಖರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ!

ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ!

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಗೂ ಕಾಸಿಲ್ಲದ ದುಃಸ್ಥಿತಿ ಕರ್ನಾಟಕ ಸರ್ಕಾರಕ್ಕೆ ಬಂದಿದೆ. ತೆರಿಗೆ ಸಂಗ್ರಹ ಇಳಿಯುತ್ತಿದೆ, ಸಾಲದ ಹೊರೆ ಹೆಚ್ಚಾಗಿದೆ. ಕೇಂದ್ರ ಕೊಡಬೇಕಾದ ಅನುದಾನದ ಬಾಕಿ ಏರಿಕೆಯಾಗುತ್ತಲೆ ಇದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ನೌಕರರ ಸಂಬಳಕ್ಕೂ ತತ್ವಾತ ಬರಲಿದೆ ಎಂದು ರಾಜ್ಯ ಹಣಕಾಸು ಸ್ಥಿತಿಯ ಬಗ್ಗೆ ಸಿದ್ದರಾಮಯ್ಯ ಆತಂಕ ವ್ಯಕ್ತಡಪಸಿದ್ದಾರೆ.

ಹಿಂಜರಿಕೆಯಿಂದ ಸಿಎಂ ಯಡಿಯೂರಪ್ಪ ದಾವೋಸ್‌ಗೆ ಹೋಗಿದ್ಯಾಕೆ ಗೊತ್ತಾ?ಹಿಂಜರಿಕೆಯಿಂದ ಸಿಎಂ ಯಡಿಯೂರಪ್ಪ ದಾವೋಸ್‌ಗೆ ಹೋಗಿದ್ಯಾಕೆ ಗೊತ್ತಾ?

ಹಣ ಇಲ್ಲದೆ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ. ಗುತ್ತಿಗೆದಾರರು ಕಾಮಗಾರಿಗಳನ್ನು ಅರ್ಧಕ್ಕೆ ಬಿಟ್ಟು ಓಡಿ ಹೋಗುತ್ತಿದ್ದಾರೆ. ಖಾಲಿ ಖಜಾನೆ ತುಂಬಲು ರೈತರಿಂದ ಬಲತ್ಕಾರವಾಗಿ ಸಾಲ ವಸೂಲಿ ಮಾಡಲು ಪೀಡಿಸುತ್ತಿದ್ದಾರೆ. ಕಾಂಗ್ರೆಸ್‌ ಆಡಳಿತದಲ್ಲಿ ಸುಭೀಕ್ಷೆಯಿಂದ ಇದ್ದ ರಾಜ್ಯವೀಗ ಅರಾಜಕತೆಯತ್ತ ಸಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮೋದಿ-ಶಾ ಜೋಡಿಗೆ ಕರ್ನಾಟಕ ಮೇಲೆ ಯಾಕಿಷ್ಟು ಸಿಟ್ಟು?

ಮೋದಿ-ಶಾ ಜೋಡಿಗೆ ಕರ್ನಾಟಕ ಮೇಲೆ ಯಾಕಿಷ್ಟು ಸಿಟ್ಟು?

ಕೇಂದ್ರ ಪ್ರಾಯೋಜಕತ್ವ ಯೋಜನೆಗಳಿಗೆ ಅನುದಾನ ಬಿಡುಗಡೆ ಆಗುತ್ತಿಲ್ಲ. ತೆರಿಗೆ ಪಾಲು ಬರುತ್ತಿಲ್ಲ. ಜಿಎಸ್‌ಟಿ ಪರಿಹಾರವನ್ನೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುತ್ತಿಲ್ಲ. ಸಂಪುಟ ವಿಸ್ತರಣೆಗೂ ಒಪ್ಪಿಗೆ ಕೊಡುತ್ತಿಲ್ಲ. ಕರ್ನಾಟಕ ರಾಜ್ಯ ಬಗ್ಗೆ ನರೇಂದ್ರ ಮೋದಿ-ಅಮಿತ್ ಶಾ ಜೋಡಿಗೆ ಯಾಕಿಷ್ಟು ಕೋಪ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಳೆದ ಇಪ್ಪತ್ತು ವರ್ಷಗಳಲ್ಲಿಯೇ ಮೊದಲ ಸಲ ಕೇಂದ್ರ ಸರ್ಕಾರದ ವರಮಾನ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿಯೂ ಅದೇ ಸ್ಥಿತಿ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು ದಿವಾಳಿ ಮಾಡಲು ನಿರ್ಧಾರ ಮಾಡಿದ ಹಾಗಿದೆ ಎಂದು ಸಿದ್ದರಾಮಯ್ಯ ಬಿಜೆಪಿ ಆಡಳಿತವನ್ನು ಪ್ರಶ್ನಿಸಿದ್ದಾರೆ.

ಸಿಎಂ ಗಾದಿಯಿಂದ ಯಡಿಯೂರಪ್ಪ ಇಳಿಸಲು ಮೋದಿ-ಶಾ ತಂತ್ರ?

ಸಿಎಂ ಗಾದಿಯಿಂದ ಯಡಿಯೂರಪ್ಪ ಇಳಿಸಲು ಮೋದಿ-ಶಾ ತಂತ್ರ?

ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರಗೃಹ ಸಚಿವ ಅಮಿತ್ ಶಾ ಜೊಡಿ ಯಡಿಯೂರಪ್ಪ ಅವರನ್ನು ಹತಾಶರನ್ನಾಗಿ ಮಾಡಲು ಪ್ರಯತ್ನ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಯಡಿಯೂರಪ್ಪ ಹತಾಶರಾಗುವಂತೆ ಮಾಡಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಲಾಗುತ್ತಿದೆ. ಬಿಜೆಪಿಯ ಆಂತರಿಕ ಕಲಹಕ್ಕೆ ರಾಜ್ಯದ ಜನರು ಬಲಿಪಶು ಆಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ರಾಜ್ಯ ರಾಜಕಾರಣಕ್ಕೆ ಶನಿ ಕಾಟವಂತೆ!ರಾಜ್ಯ ರಾಜಕಾರಣಕ್ಕೆ ಶನಿ ಕಾಟವಂತೆ!

ಸಂಪುಟ ವಿಸ್ತರಣೆ ಸಧ್ಯಕ್ಕೆ ಇಲ್ಲ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಆರೋಪ ಮಹತ್ವ ಪಡೆದುಕೊಂಡಿದೆ.

ರಾಜ್ಯದ ಹಿತ ಬಲಿ ಕೊಡಬೇಡಿ

ರಾಜ್ಯದ ಹಿತ ಬಲಿ ಕೊಡಬೇಡಿ

ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ಅಧಿಕಾರಿಗಳು ಬಜೆಟ್ ಮಾಡುವುದು ಹೇಗೆ ಎಂದು ತಲೆಮೇಲೆ ಕೈಯಿಟ್ಟು ಕೂತಿದ್ದಾರೆ. ಯಡಿಯೂರಪ್ಪ ಅವರೇ, ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ, ರಾಜ್ಯದ ಹಿತವನ್ನು ಬಲಿಕೊಡಬೇಡಿ ಎಂದಿದ್ದಾರೆ.

ಸಂಪುಟ ವಿಸ್ತರಣೆಗೂ ಮುನ್ನ ಸಂತೋಷ್, ಸಿಎಂ ಭೇಟಿ: ಚರ್ಚೆ ಏನಾಯ್ತು?ಸಂಪುಟ ವಿಸ್ತರಣೆಗೂ ಮುನ್ನ ಸಂತೋಷ್, ಸಿಎಂ ಭೇಟಿ: ಚರ್ಚೆ ಏನಾಯ್ತು?

ಇದಲ್ಲದೆ ತಮ್ಮ ವೈಫಲ್ಯದಿಂದಾಗಿ ದೇಶವನ್ನು ಕಬರಸ್ತಾನ ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಸಾಮರ್ಥ್ಯವನ್ನು ಮುಚ್ಚಿಕೊಳ್ಳಲು ಪಾಕಿಸ್ತಾನದ ಜಪ ಮಾಡುತ್ತಿದ್ದಾರೆ. ತಮ್ಮ ನಾಯಕನ ಮೇಲ್ಪಂಕ್ತಿಯನ್ನು ಅನುಸರಿಸುತ್ತಿರುವ ರಾಜ್ಯದ ನಾಯಕರ ತಲೆಕೆಟ್ಟವರಂತೆ ಕೋಮುದ್ವೇಷಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮೇಲೆ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

English summary
Karnataka former cm siddaramaiah alleges gdp is going down, bjp is in its internal problem, and amit shah-modi trying to trying to get down from chief minister post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X