Karnataka: 'ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಶಿಕ್ಷಣ ಸುಧಾರಣೆಗಳ ಕುರಿತು ಸಂಪುಟ ಉಪಸಮಿತಿ' ರಚನೆ

ಬೆಂಗಳೂರು: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರೋಗ್ಯ ಖಾತೆ ಸಚಿವ ಯು ಟಿ ಖಾದರ್ ನೇತೃತ್ವದಲ್ಲಿ 'ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಶಿಕ್ಷಣ ಸುಧಾರಣೆಗಳ ಕುರಿತು ಸಂಪುಟ ಉಪಸಮಿತಿ' ರಚಲಾಗಿದೆ ಎಂದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ಉದ್ದೇಶದಿಂದ ಮುನ್ನಡೆಸುತ್ತಿರುವ 'ಛಾತ್ರೋಂ ಕಿ ಗೂಂಜ್' ವಿದ್ಯಾರ್ಥಿ ಚಳುವಳಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ರಾಜ್ಯದ ವಿದ್ಯಾರ್ಥಿಗಳ ಸಮಸ್ಯೆ ಹಾಗೂ ಆಕಾಂಕ್ಷೆಗಳನ್ನು ಅರಿತು ಸೂಕ್ತ ಸುಧಾರಣೆಗಳನ್ನು ಜಾರಿಗೆ ತರಲು ಉದ್ದೇಶ ಹೊಂದಲಾಗಿದೆ ಎಂದರು.

Karnataka

ಸಂಪುಟ ಉಪಸಮಿತಿ ಯಾರು ಯಾರಿದ್ದಾರೆ?

ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ರಚಿಸಿರುವ ಈ ಸಂಪುಟ ಉಪಸಮಿತಿಯಲ್ಲಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಸಚಿವರಾದ ಬಸವರಾಜ ರಾಯರೆಡ್ಡಿ, ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ಅವರು ಸದಸ್ಯರಾಗಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು, ಆಕಾಂಕ್ಷೆಗಳು ಮತ್ತು ಅಭಿಪ್ರಾಯಗಳನ್ನು ಆಲಿಸಿ, ವಿದ್ಯಾರ್ಥಿಗಳು ಹಾಗೂ ಯುವಜನರು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಒದಗಿಸುವಂತಹ ಶಿಕ್ಷಣ ಸುಧಾರಣೆಗಳನ್ನು ಶಿಫಾರಸು ಮಾಡುವಂತೆ ಸಮಿತಿಗೆ ಈಗಾಗಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿರ್ದೇಶಿಸಿದ್ದಾರೆ ಎಂದು ಅವರು ಹೇಳಿದರು.

ಯುವಜನರ ಭವಿಷ್ಯಕ್ಕೆ ಗುಣಮಟ್ಟದ ಶಿಕ್ಷಣ

ರಾಜ್ಯದ ಯುವಜನರ ಮೇಲೆ ಕರ್ನಾಟಕದ ಭವಿಷ್ಯ ನಿಂತಿದೆ. ಯುವ ಸಮೂಹಕ್ಕೆ ಗುಣಮಟ್ಟದ ಶಿಕ್ಷಣ, ಅಗತ್ಯ ಮೂಲಸೌಕರ್ಯ ಹಾಗೂ ಸಮರ್ಪಕ ಅವಕಾಶಗಳನ್ನು ಒದಗಿಸಬೇಕು. ಈ ಸಂಬಂಧ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರವು ವಿದ್ಯಾರ್ಥಿಗಳು ಮತ್ತು ರಾಜ್ಯದ ಯುವಜನರ ಸಮಸ್ಯೆಗಳು ಹಾಗೂ ಭಾವನೆಗಳನ್ನು ಅರ್ಥಮಾಡಿಕೊಂಡು, ಅವರ ಆಕಾಂಕ್ಷೆಗಳಿಗೆ ಸ್ಪಂದಿಸುವ ಉದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಯುವಜನರು ಹಾಗೂ ಸಾರ್ವಜನಿಕರಿಂದ ಬರುವ ಸಲಹೆ-ಸೂಚನೆಗಳನ್ನು ಮುಕ್ತವಾಗಿ ಸ್ವೀಕರಿಸಲಾಗುವುದು. ಎಲ್ಲರೂ ಒಟ್ಟಾಗಿ ಯುವಜನರಿಗೆ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಕಸ್ತೂರಿ ರಂಗನ್ ಸಮಿತಿ ವರದಿ ತಿರಸ್ಕಾರ

ರಾಜ್ಯದ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸದಿಂತೆ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕರಡು ಅಧಿಸೂಚನೆ ಪ್ರಕಟಿಸಿದೆ. ಈ ವರದಿಯನ್ನು ತಿರಸ್ಕರಿಸಬೇಕು ಎಂದು ಈಗಾಗಲೇ ಕರ್ನಾಟಕ ವಿಧಾನಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಮಲೆನಾಡಿನ ಜನರು ಆತಂಕ ಪಡುವ ಅಗತ್ಯವಿಲ್ಲ. ರಾಜ್ಯದಿಂದ ತಿರಸ್ಕರಿಸುತ್ತೇವೆ ಎಂದರು ಸಹಿತ ಕೇಂದ್ರವು ರಾಜ್ಯದೊಂದಿಗೆ ಚರ್ಚಿಸದೇ ಮತ್ತೆ ಅಧಿಸೂಚನೆ ಹೊರಡಿಸಿದೆ ಎಂದು ಮಧು ಬಂಗಾರಪ್ಪ ಬುಧವಾರ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+