Jail Video: ಹೈಪವರ್ ಕಮಿಟಿ ರಚನೆ, 5ವರ್ಷ ಒಂದೇ ಸ್ಥಳದಲ್ಲಿರುವ ಜೈಲಾಧಿಕಾರಿಗಳಿಗೆ ಶಾಕ್: ಜಿ.ಪರಮೇಶ್ವರ
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 5000 ಕೈದಿಗಳಿದ್ದಾರೆ. ಅಂಡರ್ ಟ್ರಯಲ್ಸ್, ಸಜಾ ಕೈದಿಗಳಿದ್ದಾರೆ. ಬೇರೆಬೇರೆ ಬ್ಯಾರಕ್‌ಗಳಲ್ಲಿ ಇದ್ದಾರೆ. ಈ ಕಾರಾಗೃಹದಲ್ಲಿ ಸೆಲಿಬ್ರಿಟಿಗಳು ಹೆಚ್ಚಿನ ಗಮನ ಈ ಕಾರಾಗೃಹದ ಮೇಲಿರುತ್ತದೆ. ಹೀಗಿದ್ದರು ಇಲ್ಲಿನ ವಿಡಿಯೋ ಸೋರಿಕೆ ಆಗಿದ್ದು, ಸಮಾಜದಲ್ಲಿ ಸಂಚಲನ ಸೃಷ್ಟಿಸಿವೆ. ಈ ಸಂಬಂಧ ರಾಜ್ಯ ಗೃಹ ಇಲಾಖೆಯುವ ಜೈಲಿನಲ್ಲಿ ನಡೆದಿರುವ ಚಟುವಟಿಕೆಯನ್ನು ಗಮನದಲ್ಲಿಟ್ಟುಕೊಂಡು 'ಹೈಪವರ್ ಸಮಿತಿ ರಚನೆ' ಮಾಡಿದೆ. ಜೊತೆಗೆ ಗೃಹ ಸಚಿವ ಜಿ.ಪರಮೇಶ್ವರ ಅವರು ಐದು ವರ್ಷ 5 ವರ್ಷ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜೈಲಾಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಕಾರಾಗೃಹಗಳ ಪ್ರಧಾನ ಕಚೇರಿಯಲ್ಲಿ 'ರಾಜ್ಯದ ಕಾರಾಗೃಹಗಳಲ್ಲಿ ಆಡಳಿತ ಮತ್ತು ಭದ್ರತೆಯ' ಕುರಿತಂತೆ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮಾತ್ರವಲ್ಲದೆ ರಾಜ್ಯದ ಎಲ್ಲ ಕಾರಾಗೃಹಗಳನ್ನು ಪರಿಶೀಲನೆ ಮಾಡಿ, ಸಮಗ್ರವಾದ ವರದಿಯನ್ನು ಕೊಡಬೇಕು. ಇದಕ್ಕೆ ಟರ್ಮ್ಶ್ ಆಫ್ ರೆಫರೆನ್ಸ್ ಕೊಡುತ್ತೇವೆ. ಈ ರೀತಿಯ ಘಟನೆಗಳಾಗುವುದು ಒಂದು ಭಾಗವಾದರೆ, ಸಿಸಿಟಿವಿ ಕೆಲಸ ಮಾಡದಿರುವುದು ಸೇರಿದಂತೆ ಎಲ್ಲ ರೀತಿಯ ಲೋಪಗಳ ಬಗ್ಗೆ ವರದಿಯಲ್ಲಿ ಕೊಡಬೇಕು ಎಂದು ಸಮಿತಿಗೆ ತಿಳಿಸಲಾಗುವುದು ಎಂದರು.
ಈ ರಚಿತ ಸಮಿತಿಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗುವುದು. ಐಜಿಪಿ ಸಂದೀಪ್ ಪಾಟೀಲ್, ಎಸ್‌ಪಿ ಅಮರನಾಥ್ ರೆಡ್ಡಿ, ಎಸ್‌ಪಿ ರಿಷ್ಯಾಂತ್ ಅವರಿಗೂ ಜವಾಬ್ದಾರಿ ಕೊಡುತ್ತೇವೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳು ಸಮಿತಿಯ ಸಹ ಸದಸ್ಯರಾಗಿರುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.

ಅಧಿಕಾರಿಗಳ ಅಮಾನತು ಬೆನ್ನಲ್ಲೆ ವರ್ಗಾವಣೆ, ನೇಮಕಾತಿ
ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಇಬ್ಬರು ಇಮ್ಮಿಡಿಯಟ್ ಸೂಪರಿಡೆಂಟ್ ಹಾಗೂ ಸಹಾಯಕ ಸೂಪರಿಂಟ್‌ಡೆಂಟ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಇದರ ಬೆನ್ನಲ್ಲೆ ಒಂದೇ ಸ್ಥಳದಲ್ಲಿ ಕೆಲವು ವರ್ಷಗಳಿಂದ ಬೀಡು ಬಿಟ್ಟಿರುವ ಜೈಲಾಧಿಕಾರಿಗಳ ವಿರುದ್ಧ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ.
ಒಂದೇ ಕಡೆ ಐದು ವರ್ಷ ಕಾರ್ಯನಿರ್ವಹಿಸಿದ ಕಾರಾಗೃಹ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಲಾಗುವುದು. ಕಾರಾಗೃಹಗಳಲ್ಲಿ ಸಿಬ್ಬಂದಿ ಕೊರತೆ ಇದೆ ಎಂಬ ಸಬೂಬು ಹೇಳುತ್ತಿದ್ದಾರೆ. 197 ವಾರ್ಡರ್, 22 ಇನ್‌ಸ್ಟ್ರಕ್ಟರ್, 3 ಜನ ಅಸಿಸ್ಟೆಂಟ್ ಸೂಪರಿಡೆಂಟ್ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಲಾಗಿದೆ. 983 ವಾರ್ಡರ್, 17 ಜನ ಜೈಲರ್ಸ್‌ಗಳ ನೇಮಕಾತಿಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಇಂತಹ ಘಟನೆಗಳು ಮರುಕಳಿಸಿದರೆ ಮತ್ತಷ್ಟು ಕಠಿಣ ಕ್ರಮ ಜರುಗಿಸಲಾಗುವುದು. ಎಲ್ಲ ಕಾರಾಗೃಹಗಳ ಅಧಿಕಾರಿಗಳು ಪ್ರಧಾನ ಕಚೇರಿ ಜೊತೆ ನೇರವಾಗಿ ಸಂಪರ್ಕದಲ್ಲಿ ಇರಬೇಕು. ಹಿರಿಯ ಅಧಿಕಾರಿಗಳು ಕಾರಾಗೃಹಗಳಿಗೆ ನಿರಂತರವಾಗಿ ಭೇಟಿ ನೀಡಬೇಕು. ತಿಂಗಳಿಗೆ ಒಂದು ಅಥವಾ ಎರಡು ಬಾರಿ ಕಡ್ಡಾಯವಾಗಿ ಭೇಟಿ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚಿಸಲಾಗಿದೆ.
ಕಮಿಟಿ ವರದಿ ಸಲ್ಲಿಕಗೆ ತಿಂಗಳ ಗಡುವು: ಬಳಿಕ ಕ್ರಮ
ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಾರಾಗೃಹಗಳಿಗೆ ಭೇಟಿ ನೀಡಿ, ಪ್ರಧಾನ ಕಚೇರಿಗೆ ವರದಿ ನೀಡಬೇಕು. ಯಾವುದೇ ರೀತಿಯ ತಪ್ಪುಗಳಾದಗ ಕ್ರಮ ತೆಗೆದುಕೊಳ್ಳಲು ಸರ್ಕಾರ ಸಿದ್ಧವಾಗಿದೆ. ಹೈಪವರ್ ಕಮಿಟಿ ವರದಿ ಬಂದ ನಂತರ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು. ಇಂತಹ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಮಾಧ್ಯಮದವರ ಸಹಕಾರ ಕೇಳಲಾಗುವುದು. ಎನ್‌ಐಎ ವರದಿಯನ್ನು ಕೂಡ ಸಭೆಯಲ್ಲಿ ಚರ್ಚಿಸಲಾಗಿದೆ. ಇದು ಕೂಡ ಹೈಪವರ್ ಕಮಿಟಿ ವರದಿಯಲ್ಲಿ ಬರುತ್ತದೆ.
ಹೈಪವರ್ ಕಮಿಟಿ ವರದಿಗೆ ಒಂದು ತಿಂಗಳು ಗಡುವು ನೀಡಲಾಗಿದೆ. ವರದಿಯನ್ನು ಬಹಿರಂಗ ಪಡಿಸುತ್ತೇನೆ. ಎಲ್ಲರಿಗೂ ಗೊತ್ತಾಗಲಿ. ಒಂದು ತಿಂಗಳೊಳಗೆ ವರದಿ ನೀಡಲೇಬೇಕು. ಈವರೆಗೆ ಚೀಫ್ ಸೂಪರಿಡೆಂಟ್ ಹುದ್ದೆಗೆ ಐಪಿಎಸ್‌ಗಳನ್ನು ನೇಮಿಸಿಲ್ಲ. ಸದ್ಯಕ್ಕೆ ಎಸ್‌ಪಿ ಯನ್ನು ನೇಮಿಸುತ್ತೇವೆ. ಮುಂದಿನ ದಿನಗಳಲ್ಲಿ ಡಿಐಜಿ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.












Click it and Unblock the Notifications