ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್: ಸಿಎಂ

|
Google Oneindia Kannada News

ಬೆಂಗಳೂರು, ಮೇ 20: ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಬಸ್‌ಪಾಸನ್ನು ಸಂಪೂರ್ಣ ಉಚಿತವಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ನಂತರ ಮಾಧ್ಯಮದವರೊಂದಿಗೆ ಸಿಎಂ ಬೊಮ್ಮಾಯಿ ಮಾತನಾಡಿದರು.

ಎಸ್.ಸಿ/ಎಸ್.ಪಿ / ಟಿ. ಎಸ್.ಪಿ ಯೋಜನೆಯಡಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಶಿಕ್ಷಣ, ಆರೋಗ್ಯ, ಅಪೌಷ್ಟಿಕತೆ, ಮಹಿಳೆಯರ ಕಾರ್ಯಕ್ರಮಗಳು, ವಿದ್ಯಾರ್ಥಿನಿಲಯಗಳ ಕ್ಲಸ್ಟರ್ ಯೋಜನೆಗಳಿಗೆ ಆಗಸ್ಟ್ 15 ರೊಳಗೆ ಚಾಲನೆ ನೀಡಲು ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕು. ಶಾಸನಬದ್ಧವಾಗಿ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳಿಗೆ ನಿಗದಿಯಾಗಿರುವ ಅನುದಾನವನ್ನು ಈ ಸಮುದಾಯಗಳ ಅಭಿವೃದ್ಧಿಗೆಂದೇ ವೆಚ್ಚವಾಗಬೇಕು ಎಂದರು.

'ಭ್ರಷ್ಟ ಸಚಿವರ ಜೊತೆ ಸಿಎಂ ಬೊಮ್ಮಾಯಿ ಬೆಂಗಳೂರು ಸಿಟಿ ರೌಂಡ್''ಭ್ರಷ್ಟ ಸಚಿವರ ಜೊತೆ ಸಿಎಂ ಬೊಮ್ಮಾಯಿ ಬೆಂಗಳೂರು ಸಿಟಿ ರೌಂಡ್'

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅನುದಾನವನ್ನು ನೀಡುವುದಲ್ಲದೆ, ನಿಗಮ ಮಂಡಳಿಗಳಿಗೂ ಅನುದಾನವನ್ನು ಒದಗಿಸಲಾಗಿದೆ. ಅದನ್ನೂ ಹೆಚ್ಚಿಸಬೇಕೆಂದು ಎಲ್ಲರ ಅಭಿಪ್ರಾಯವಿದೆ. ಒಂದು ವಾರದಲ್ಲಿ ಅನುದಾನ ಹೆಚ್ಚಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

28000 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ

28000 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ

ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ವಿವಿಧ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನಲ್ಲಿ 28000 ಕೋಟಿ ರೂ.ಗಳನ್ನು ನೀಡಲು ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಗೆ 500 ಕೋಟಿ ರೂ.ಗಳನ್ನು ಹೆಚ್ಚಿಗೆ ನೀಡಲಾಗಿದೆ. ಕೃಷಿ ಇಲಾಖೆಗೆ 851 ಕೋಟಿ ರೂ.ಗಳಿದ್ದ ಅನುದಾನವನ್ನು 1061 ಕೋಟಿ ರೂ.ಗಳಿಗೆ ಏರಿಸಲಾಗಿದೆ. ತೋಟಗಾರಿಕೆ ಇಲಾಖೆಗೆ 142 ಕೋಟಿಗಳಿದ್ದ ಅನುದಾನವನ್ನು 187 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಆರೋಗ್ಯ ಇಲಾಖೆಗೆ 899 ಕೋಟಿ ರೂ.ಗಳನ್ನು ಕಳೆದ ವರ್ಷ ನೀಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 1,300 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು. ಸಹಕಾರ ಇಲಾಖೆಯಲ್ಲಿ sc st ಸಮುದಾಯದ ಜನರಿಗೆ ಸದಸ್ಯತ್ವ ನೀಡಲು 203 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಪಿಂಚಣಿಗಳ ಮೊತ್ತ ಹೆಚ್ಚಳ ಮಾಡಿದ್ದು, ಕಳೆದ ವರ್ಷ 2,900 ಕೋಟಿ ರೂ.ಗಳಿದ್ದ ಅನುದಾನವನ್ನು ಈ ಬಾರಿ 3,748 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಕೌಶಲ್ಯಾಭಿವೃದ್ಧಿಗೆ 180 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ 9,000 ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಅಂಬೇಡ್ಕರ್ ಓಡಾಡಿದ ಸ್ಥಳಗಳ ಅಭಿವೃದ್ಧಿಗೆ ಹಣ

ಅಂಬೇಡ್ಕರ್ ಓಡಾಡಿದ ಸ್ಥಳಗಳ ಅಭಿವೃದ್ಧಿಗೆ ಹಣ

ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕರ್ನಾಟದಲ್ಲಿ ಪ್ರವಾಸ ಮಾಡಿದ್ದ ಸ್ಥಳಗಳ ಅಭಿವೃದ್ಧಿಗೆ ಒಟ್ಟು 20 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಮಲೆನಾಡು ಅಭಿವೃದ್ಧಿ ಮಂಡಳಿ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿಯ ಶಾಸಕರಿಗೆ ಒಂದು ಕೋಟಿ ರೂ.ಗಳನ್ನು ನೀಡಲಾಗುವುದು. ಹಿಂದಿನ ಸರ್ಕಾರ ಅನುದಾನ ಒದಗಿಸುವುದಾಗಿ ಘೋಷಣೆ ಮಾಡಿತ್ತು. ಅನುದಾನ ಒದಗಿಸಿ ಕ್ರಿಯಾ ಯೋಜನೆ ರೂಪಿಸಲು ಅನುಮತಿ ನೀಡಲಾಗಿದೆ ಎಂದರು.

ಅಗಸ್ಟ್ ಅಂತ್ಯದೊಳಗೆ ಅನುಷ್ಠಾನ

ಅಗಸ್ಟ್ ಅಂತ್ಯದೊಳಗೆ ಅನುಷ್ಠಾನ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅಗಸ್ಟ್ ತಿಂಗಳ ಅಂತ್ಯದೊಳಗಾಗಿ ಕಡ್ಡಾಯವಾಗಿ ಅನುಷ್ಠಾನಗೊಳಿಸಿ. ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಶಾಸನಬದ್ದ ಅನುದಾನ ಆ ಸಮುದಾಯಗಳಿಗೆ ಮಾತ್ರ ಬಳಕೆಯಾಗಬೇಕು. ಇವು ಇಂದು ನಡೆದ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷರ್ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ನೀಡಿದ ಸೂಚನೆಗಳು.

1600 ಕೋಟಿ ರೂ. ವಿನಿಯೋಗಿಸಲು ಸೂಚನೆ

1600 ಕೋಟಿ ರೂ. ವಿನಿಯೋಗಿಸಲು ಸೂಚನೆ

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ನಿಗಮ ಮಂಡಳಿಗಳ ಬ್ಯಾಂಕ್ ಖಾತೆಯಲ್ಲಿರುವ 1600 ಕೋಟಿ ರೂ.ಗಳನ್ನು ಮುಂದಿನ ಮೂರು ತಿಂಗಳಲ್ಲಿ (ಗಂಗಾ ಕಲ್ಯಾಣ ಯೋಜನೆ ಹೊರತು ಪಡಿಸಿ) ಎಸ್.ಸಿ.ಎಸ್.ಪಿ ಯೋಜನೆಗಳಿಗೆ ವಿನಿಯೋಗಿಸಬೇಕು. ತಪ್ಪಿದಲ್ಲಿ ಈ ಮೊತ್ತವನ್ನು ಈ ಸಾಲಿನ ಕಾರ್ಯಕ್ರಮಗಳಿಗೆ ಮರುಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.

ಲಾಪ್‌ಟಾಪ್ ವಿತರಣೆಗೆ ಆದ್ಯತೆ

ಲಾಪ್‌ಟಾಪ್ ವಿತರಣೆಗೆ ಆದ್ಯತೆ

* ಎಸ್.ಸಿ/ಎಸ್.ಪಿ / ಟಿ. ಎಸ್.ಪಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ನೀಡಲು ಹೆಚ್ವಿನ ಆದ್ಯತೆ ನೀಡುವುದು

* ಉನ್ನತ ಶಿಕ್ಷಣ ಇಲಾಖೆಯಡಿ ಫೆಲೋಶಿಪ್ / ಲಾಪ್ ಟಾಪ್ ವಿತರಣೆಗೆ ಆದ್ಯತೆ ನೀಡುವುದು

* ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯೋಜನೆಗಳಡಿ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅತಿ ಹೆಚ್ಚಿನ ಆದ್ಯತೆ ನೀಡುವುದು.

* ಇಂದಿನ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಣಯಗಳಿಗೆ ಆದೇಶ ಹೊರಡಿಸುವುದು ಹಾಗೂ ಆಗಸ್ಟ್ 15 ರೊಳಗೆ ಎಲ್ಲಾ ವೈಯಕ್ತಿಕ ಯೋಜನೆಗಳಿಗೆ ಚಾಲನೆ ನೀಡುವುದು.

*ಸಮಾಜ ಕಲ್ಯಾಣ ಇಲಾಖೆಯು ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ತಲುಪುತ್ತಿರುವ ಬಗ್ಗೆ ಮೇಲ್ವಿಚಾರಣೆ ಮಾಡುವುದು.

English summary
Chief Minister Basavaraja Bommai said that it was decided to provide bus passes free to Students belonging to Scheduled Castes and Tribe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X