ಕರ್ನಾಟಕಕ್ಕೆ ಮೂರು ಮೆಡಿಕಲ್ ಕಾಲೇಜು ಕೊಟ್ಟ ಕೇಂದ್ರ ಸರ್ಕಾರ

ಬೆಂಗಳೂರು, ಅಕ್ಟೋಬರ್ 24 : ಕರ್ನಾಟಕದಲ್ಲಿ ಮೂರು ನೂತನ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಕಾಲೇಜಗಳ ನಿರ್ಮಾಣವಾಗುತ್ತಿದೆ.

ರಾಜ್ಯದ ಮೂರು ಜಿಲ್ಲೆಗಳಲ್ಲಿ ಪ್ರಸ್ತುತ ಇರುವ ಜಿಲ್ಲಾ ಆಸ್ಪತ್ರೆಗಳಿಗೆ ಹೊಂದಿಕೊಡಂತೆ ನೂತನ ವೈದ್ಯಕೀಯ ಕಾಲೇಜುಗಳು ನಿರ್ಮಾಣಗೊಳ್ಳುತ್ತಿವೆ. ಪ್ರತಿ ಕಾಲೇಜಿಗೆ 325 ಕೋಟಿ ರೂ. ವೆಚ್ಚವಾಗಲಿದೆ. ಕೇಂದ್ರ ಸರ್ಕಾರ ಶೇ 60ರಷ್ಟು ಅನುದಾನ ನೀಡಲಿದೆ.

ಚಿಕ್ಕಮಗಳೂರು, ಹಾವೇರಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ನೂತನ ಮೆಡಿಕಲ್ ಕಾಲೇಜು ನಿರ್ಮಾಣವಾಗುತ್ತಿದೆ. ಕರ್ನಾಟಕ ಸರ್ಕಾರ ಮತ್ತು ಕೇಂದ್ರ ನಡುವೆ ಕಾಲೇಜು ನಿರ್ಮಾಣ ಕುರಿತ ಒಪ್ಪಂದಕ್ಕೆ ಶೀಘ್ರದಲ್ಲಿಯೇ ಸಹಿ ಹಾಕಲಾಗುತ್ತದೆ.

Karnataka Get Three New Medical College

ಕರ್ನಾಟಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೊಸ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ.

ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಮುಂದಾಗಿದ್ದರು. ಹಲವು ಜಿಲ್ಲೆಗಳಲ್ಲಿ ಕಾಲೇಜುಗಳ ಸ್ಥಾಪನೆಯಾಗಿತ್ತು.

ಚಿಕ್ಕಮಗಳೂರಿನಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ ಕೊಡಲಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳು ಸೇರಿ ರಾಜ್ಯದಲ್ಲಿ 50 ವೈದ್ಯಕೀಯ ಕಾಲೇಜುಗಳಿವೆ. 6305 ವೈದ್ಯಕೀಯ ಸೀಟುಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+