ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕಕ್ಕೆ ಮೂರು ಮೆಡಿಕಲ್ ಕಾಲೇಜು ಕೊಟ್ಟ ಕೇಂದ್ರ ಸರ್ಕಾರ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 24 : ಕರ್ನಾಟಕದಲ್ಲಿ ಮೂರು ನೂತನ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಕಾಲೇಜಗಳ ನಿರ್ಮಾಣವಾಗುತ್ತಿದೆ.

ರಾಜ್ಯದ ಮೂರು ಜಿಲ್ಲೆಗಳಲ್ಲಿ ಪ್ರಸ್ತುತ ಇರುವ ಜಿಲ್ಲಾ ಆಸ್ಪತ್ರೆಗಳಿಗೆ ಹೊಂದಿಕೊಡಂತೆ ನೂತನ ವೈದ್ಯಕೀಯ ಕಾಲೇಜುಗಳು ನಿರ್ಮಾಣಗೊಳ್ಳುತ್ತಿವೆ. ಪ್ರತಿ ಕಾಲೇಜಿಗೆ 325 ಕೋಟಿ ರೂ. ವೆಚ್ಚವಾಗಲಿದೆ. ಕೇಂದ್ರ ಸರ್ಕಾರ ಶೇ 60ರಷ್ಟು ಅನುದಾನ ನೀಡಲಿದೆ.

ಒಂದೂವರೆ ಶತಮಾನದ ನಂತರ ಗೋವಾಕ್ಕೆ ಮತ್ತೊಂದು ಮೆಡಿಕಲ್ ಕಾಲೇಜ್ಒಂದೂವರೆ ಶತಮಾನದ ನಂತರ ಗೋವಾಕ್ಕೆ ಮತ್ತೊಂದು ಮೆಡಿಕಲ್ ಕಾಲೇಜ್

ಚಿಕ್ಕಮಗಳೂರು, ಹಾವೇರಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ನೂತನ ಮೆಡಿಕಲ್ ಕಾಲೇಜು ನಿರ್ಮಾಣವಾಗುತ್ತಿದೆ. ಕರ್ನಾಟಕ ಸರ್ಕಾರ ಮತ್ತು ಕೇಂದ್ರ ನಡುವೆ ಕಾಲೇಜು ನಿರ್ಮಾಣ ಕುರಿತ ಒಪ್ಪಂದಕ್ಕೆ ಶೀಘ್ರದಲ್ಲಿಯೇ ಸಹಿ ಹಾಕಲಾಗುತ್ತದೆ.

ಮೆಡಿಕಲ್ ಸೀಟು ಹಂಚಿಕೆಯಲ್ಲಿ ಹಗರಣ ನಡೆದಿಲ್ಲ ಡಿಸಿಎಂ ಸ್ಪಷ್ಟನೆಮೆಡಿಕಲ್ ಸೀಟು ಹಂಚಿಕೆಯಲ್ಲಿ ಹಗರಣ ನಡೆದಿಲ್ಲ ಡಿಸಿಎಂ ಸ್ಪಷ್ಟನೆ

Karnataka Get Three New Medical College

ಕರ್ನಾಟಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೊಸ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ.

ಮೆಡಿಕಲ್ ಕಾಲೇಜ್‌ನಲ್ಲಿ Ragging: ತಲೆಬೋಳಿಸಿಕೊಂಡು ಸೆಲ್ಯೂಟ್ ಹೊಡೆದ ವಿದ್ಯಾರ್ಥಿಗಳುಮೆಡಿಕಲ್ ಕಾಲೇಜ್‌ನಲ್ಲಿ Ragging: ತಲೆಬೋಳಿಸಿಕೊಂಡು ಸೆಲ್ಯೂಟ್ ಹೊಡೆದ ವಿದ್ಯಾರ್ಥಿಗಳು

ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಮುಂದಾಗಿದ್ದರು. ಹಲವು ಜಿಲ್ಲೆಗಳಲ್ಲಿ ಕಾಲೇಜುಗಳ ಸ್ಥಾಪನೆಯಾಗಿತ್ತು.

ಚಿಕ್ಕಮಗಳೂರಿನಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ ಕೊಡಲಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳು ಸೇರಿ ರಾಜ್ಯದಲ್ಲಿ 50 ವೈದ್ಯಕೀಯ ಕಾಲೇಜುಗಳಿವೆ. 6305 ವೈದ್ಯಕೀಯ ಸೀಟುಗಳಿವೆ.

English summary
Union government approved to set up 3 new medical college in Karnataka. Medical College will come under centrally sponsored scheme at Chikkamagaluru, Haveri and Yadgiri district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X