ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊನೆಗೂ ಅಧಿಕೃತ : ಕರ್ನಾಟಕಕ್ಕೆ 3 ಉಪಮುಖ್ಯಮಂತ್ರಿಗಳು

|
Google Oneindia Kannada News

Recommended Video

ಅಚ್ಚರಿಯ ರೀತಿಯಲ್ಲಿ ಇವರು ಉಪ-ಮುಖ್ಯಮಂತ್ರಿಗಳಾಗಿದ್ದಾರೆ..? | Oneindia Kannada

ಬೆಂಗಳೂರು, ಆಗಸ್ಟ್ 26 : ಕರ್ನಾಟಕದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಪುನಃ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜೊತೆಗೆ ಮೂವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿದೆ.

ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ 17 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದರು. ಕುತೂಹಲಕ್ಕೆ ಕಾರಣವಾಗಿದ್ದ ಗೃಹ ಖಾತೆ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಅವರ ಪಾಲಾಗಿದೆ. ಮೂವರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಲಾಗಿದೆ.

ಖಾತೆ ಹಂಚಿಕೆ ಫೈನಲ್, ಇಲ್ಲಿದೆ ಅಧಿಕೃತ ಪಟ್ಟಿಖಾತೆ ಹಂಚಿಕೆ ಫೈನಲ್, ಇಲ್ಲಿದೆ ಅಧಿಕೃತ ಪಟ್ಟಿ

ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ ಮತ್ತು ಲಕ್ಷ್ಮಣ ಸವದಿ ಅವರನ್ನು ಉಪಮುಖ್ಯಮಂತ್ರಿಗಳಾಗಿ ನೇಮಕ ಮಾಡಲಾಗಿದೆ. 2018ರ ಚುನಾವಣೆಯಲ್ಲಿ ಸೋತ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿದ್ದು ಕುತೂಹಲಕ್ಕೆ ಕಾರಣವಾಗಿತ್ತು, ಈಗ ಉಪಮುಖ್ಯಮಂತ್ರಿ ಹುದ್ದೆಯೂ ಸಿಕ್ಕಿದೆ.

ಉಪ ಮುಖ್ಯಮಂತ್ರಿಗಳ ನೇಮಕ; ಇಕ್ಕಟ್ಟಿನಲ್ಲಿ ಯಡಿಯೂರಪ್ಪ!ಉಪ ಮುಖ್ಯಮಂತ್ರಿಗಳ ನೇಮಕ; ಇಕ್ಕಟ್ಟಿನಲ್ಲಿ ಯಡಿಯೂರಪ್ಪ!

ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದರು. ಆಗ
ಕೆ. ಎಸ್.ಈಶ್ವರಪ್ಪ, ಆರ್. ಅಶೋಕ್ ಅವರನ್ನು ಉಪಮುಖ್ಯಮಂತ್ರಿ ಮಾಡಲಾಗಿತ್ತು. ಈಗ ಮೂವರು ಉಪ ಮುಖ್ಯಮಂತ್ರಿ ನೇಮಕ ಮಾಡಲಾಗಿದೆ.

ಬಿಜೆಪಿ ಹೈಕಮಾಂಡ್ ವಿರುದ್ಧ ಯಡಿಯೂರಪ್ಪ ಬೆಂಬಲಿಗರ ಆಕ್ರೋಶಬಿಜೆಪಿ ಹೈಕಮಾಂಡ್ ವಿರುದ್ಧ ಯಡಿಯೂರಪ್ಪ ಬೆಂಬಲಿಗರ ಆಕ್ರೋಶ

ಉಪ ಮುಖ್ಯಮಂತ್ರಿ ನಂಬರ್ - 1

ಉಪ ಮುಖ್ಯಮಂತ್ರಿ ನಂಬರ್ - 1

69 ವರ್ಷದ ಗೋವಿಂದ ಕಾರಜೋಳ ಮುಧೋಳ ಕ್ಷೇತ್ರದ ಶಾಸಕರು. ದಲಿತ ಸಮುದಾಯಕ್ಕೆ ಸೇರಿದ ಅವರು ಡಿಪ್ಲೊಮಾ ಪದವೀಧರರು. 2004ರಿಂದ ಸತತವಾಗಿ ಮುಧೋಳ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪರಮಾಪ್ತರು.

ಉಪ ಮುಖ್ಯಮಂತ್ರಿ ನಂಬರ್ - 2

ಉಪ ಮುಖ್ಯಮಂತ್ರಿ ನಂಬರ್ - 2

50 ವರ್ಷದ ಡಾ. ಅಶ್ವತ್ಥ್ ನಾರಾಯಣ ಮಲ್ಲೇಶ್ವರಂ ಕ್ಷೇತ್ರದ ಶಾಸಕರು. ಒಕ್ಕಲಿಗ ಸಮುದಾಯಕ್ಕೆ ಸೇರಿದ ಇವರು ಎಂಬಿಬಿಎಸ್ ಪದವೀಧರರು. 2008, 2013 ಮತ್ತು 2018ರ ಚುನಾವಣೆಯಲ್ಲಿ ಸತತವಾಗಿ ಜಯಗಳಿಸಿದ್ದಾರೆ.

ಉಪ ಮುಖ್ಯಮಂತ್ರಿ - 3

ಉಪ ಮುಖ್ಯಮಂತ್ರಿ - 3

59 ವರ್ಷದ ಲಕ್ಷಣ ಸಂಗಪ್ಪ ಸವದಿ 2018ರ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸೇರಿದ ಅವರಿಗೆ ಸಚಿವ ಸ್ಥಾನ ನೀಡಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಈಗ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. 2004, 2008 ಮತ್ತು 2013ರ ಚುನಾವಣೆಯಲ್ಲಿ ಸೋತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪಗೆ ಪರಮಾಪ್ತರು.

ಉಪ ಮುಖ್ಯಮಂತ್ರಿ ಹುದ್ದೆ

ಉಪ ಮುಖ್ಯಮಂತ್ರಿ ಹುದ್ದೆ

ಜಗದೀಶ್ ಶೆಟ್ಟರ್, ಆರ್. ಅಶೋಕ, ಬಿ. ಶ್ರೀರಾಮುಲು, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಹೆಸರುಗಳು ಉಪ ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬಂದಿತ್ತು. ಆದರೆ, ಹೈಕಮಾಂಡ್ ನಡೆ ಕುತೂಹಲಕ್ಕೆ ಕಾರಣವಾಗಿದೆ.

English summary
Karnataka get the 3 Deputy Chief Minister. Govind Karjol, Lakshman Savadi and Dr. Ashwathnarayana appointed as Deputy Chief Minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X