ತಮಿಳುನಾಡಿನ ಸಿಎಂ ವಿಜಯ್‌ರಿಂದ ಕರ್ನಾಟಕಕ್ಕೆ ಗುಡ್‌ನ್ಯೂಸ್: ಕಾವೇರಿ ನದಿ ನೀರು ಹಂಚಿಕೆ -ಮೇಕೆದಾಟು ವಿವಾದ ವಿಚಾರದಲ್ಲಿ ಸಾಫ್ಟ್
Karnataka: ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಅಭೂತ ಪೂರ್ವ ಯಶಸ್ಸು ಗಳಿಸಿರುವ ಹಾಗೂ ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಕನ್ನಡಿಗರಿಗೆ ಗುಡ್‌ನ್ಯೂಸ್ ಕೊಡುವ ಸಾಧ್ಯತೆ ಇದೆ. ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಕಾವೇರಿ ನದಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರದಲ್ಲಿ ವೈಮನಸ್ಸು ಇದೆ. ತಮಿಳುನಾಡಿನಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಾವೇರಿ ನದಿ ನೀರು ಹಂಚಿಕೆ ವಿಚಾರವೂ ವಿವಾದ ಸ್ವರೂಪವನ್ನು ಪಡೆದುಕೊಳ್ಳುತ್ತದೆ.
ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಿಂದಾಗಿ ಎರಡೂ ರಾಜ್ಯಗಳ ನಡುವೆ ದೊಡ್ಡ ಮಟ್ಟದ ನದಿ ನೀರು ಹಂಚಿಕೆ ವಿವಾದ ಎದುರಾಗಿಲ್ಲ. ಇದೀಗ ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರವಿದ್ದು, ಕಾಂಗ್ರೆಸ್ ಪಕ್ಷದ ಐವರು ಶಾಸಕರ ಬೆಂಬಲ ತಮಿಳುನಾಡಿನ ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಇದೆ.

ಇದೇ ಕಾರಣಕ್ಕೆ ಈ ಬಾರಿ ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಕಾವೇರಿ ನದಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರದಲ್ಲಿ ವಿವಾದ ಸೃಷ್ಟಿಯಾಗುವ ಸಾಧ್ಯತೆ ವಿರಳ ಎಂದು ಹೇಳಲಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಕಾವೇರಿ ನದಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ಹಾಗೂ ತಮಿಳುನಾಡಿನಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ತಮಿಳುನಾಡಿನ ಸರ್ಕಾರಿ ಅಧಿಕಾರಿಗಳೊಂದಿಗೆ ವಿಜಯ್ ಅವರು ಸಭೆ ನಡೆಸಿದ್ದು, ಕಾವೇರಿ ನದಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರದಲ್ಲಿ ಸಾಫ್ಟ್ ಆಗಿದ್ದಾರೆ ಎಂದು ಹೇಳಲಾಗಿದೆ.
ಕಾವೇರಿ ನದಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ಸೇರಿದಂತೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಯಾವುದೇ ವಿವಾದಾತ್ಮಕ ಹೇಳಿಕೆಯನ್ನು ಕೊಡಬೇಡಿ, ವಿವಾದಾತ್ಮಕ ಹೇಳಿಕೆಯನ್ನು ಕೊಟ್ಟು, ಗಮನ ಸೆಳೆಯುವುದಕ್ಕಿಂತಲೂ ಎರಡೂ ರಾಜ್ಯಗಳ ನಡುವಿನ ಜಲ ವಿವಾದವನ್ನು ಸಕಾರಾತ್ಮಕವಾಗಿ ಪರಿಹರಿಸಿಕೊಳ್ಳುವುದಕ್ಕೆ ಅವರು ಒಲವು ತೋರಿದ್ದಾರೆ ಎಂದು ಹೇಳಲಾಗಿದೆ.
ತಮಿಳುನಾಡಿನ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ
ವಿಜಯ್ ಅವರು ತಮಿಳುನಾಡಿನ ಅಧಿಕಾರಿಗಳೊಂದಿಗೆ ರಾಜ್ಯದ ನೀರಿನ ಹಕ್ಕುಗಳನ್ನು ಪ್ರತಿಪಾದಿಸುವುದು, ವಿವಾದಾತ್ಮಕ ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದ ವಿಚಾರಗಳ ಮೇಲೆ ಗಮನಹರಿಸುವುದು ಹಾಗೂ ಡೆಲ್ಟಾ ಭಾಗದ ರೈತರ ಮುಂಬರುವ ನೀರಿನ ಅಗತ್ಯಗಳನ್ನು ಪೂರೈಸುವ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆಗಳನ್ನು ನಡೆಸಿದರು.
ಇತ್ತೀಚೆಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ, ದೀರ್ಘಕಾಲದ ಕಾವೇರಿ ನದಿ ನೀರು ಹಂಚಿಕೆ ವಿವಾದದ ಬಗ್ಗೆ ಉನ್ನತ ಮಟ್ಟದ ಪರಿಶೀಲನಾ ಸಭೆಗಳು ನಡೆಸಿದ್ದಾರೆ. ಕೃಷಿ ಮತ್ತು ಜಲಸಂಪನ್ಮೂಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ವಿಜಯ್ ನಿರ್ಣಾಯಕ ಸಭೆ ಕರೆದಿದ್ದರು. ಸುಗಮ ನೀರಿನ ಹಂಚಿಕೆಗಾಗಿ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದೊಂದಿಗೆ ತೊಡಗಿಸಿಕೊಳ್ಳಲು ಕಾಂಗ್ರೆಸ್ ನಾಯಕತ್ವದೊಂದಿಗಿನ ತಮ್ಮ ರಾಜಕೀಯ ಸಂಬಂಧವನ್ನು ಬಳಸಿಕೊಳ್ಳುವಂತೆ ಅಲ್ಲಿನ ರೈತರು ಮುಖ್ಯಮಂತ್ರಿ ವಿಜಯ್ ಅವರಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಸಹಕಾರ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆ
ಇನ್ನು ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರ ಇರುವುದು ಕರ್ನಾಟಕಕ್ಕೆ ಲಾಭವಾಗಲಿದೆ. ಎರಡೂ ರಾಜ್ಯಗಳ ನಡುವೆ ಇರುವ ಕಾವೇರಿ ನದಿ ನೀರು ಹಂಚಿಕೆ ವಿವಾದವು ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿದ್ದು, ತಮಿಳುನಾಡಿನಲ್ಲಿ ಟಿವಿಕೆಗೆ ಕಾಂಗ್ರೆಸ್ ಪಕ್ಷದ ಬೆಂಬಲ ಇದೆ. ಹೀಗಾಗಿ, ಕಾವೇರಿ ನದಿ ನೀರು ಹಂಚಿಕೆ ವಿವಾದವು ಪರಿಹಾರವಾಗುವ ಸಾಧ್ಯತೆ ಇದೆ. ಇಲ್ಲದಿದ್ದರೆ ಜಟಿಲವಾಗದೆ ಇರುವ ಸಾಧ್ಯತೆಯಂತೂ ಪಕ್ಕಾ ಎಂದು ಅಂದಾಜಿಸಲಾಗಿದೆ.













Click it and Unblock the Notifications