Award: ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಎರಡು ಪಟ್ಟು ಏರಿಕೆ
ಬೆಂಗಳೂರು, ಅಕ್ಟೋಬರ್ 31: ಕರ್ನಾಟಕ 50ನೇ ವರ್ಷದ ಸಂಭ್ರಮಾಚದರಣೆಯಲ್ಲಿದೆ. ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 50 ಮಹಿಳಾ ಸಾಧಕಿಯರು ಹಾಗೂ 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದೆ. ಇದೀಗ ಅದರ ಮೊತ್ತವನ್ನು ಹೆಚ್ಚಿಸಿದೆ.
ನವೆಂಬರ್ 1ರಂದು ನಡೆಯಲಿರುವ ಕನ್ನಡೋತ್ಸವ ಸಂಭ್ರಮಾಚರಣೆಯಲ್ಲಿ ಈ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಿ ಸಾಧಕರನ್ನು ಗೌರವಿಸಲಾಗಿತ್ತು. ಈ ಪ್ರಶಸ್ತಿಯ ಮೊತ್ತವನ್ನು 50,000 ಎಂದು ಮೊದಲು ತಿಳಿಸಲಾಗಿತ್ತು. ಇದೊಂದು ಐತಿಹಾಸಿಕ ಸಂದರ್ಭ ವಾಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ ರೂ.1ಲಕ್ಷಗಳಿಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸದಿರು.

ಪ್ರಶಸ್ತಿ ಮೊತ್ತವನ್ನು ಹೆಚ್ಚಳಕ್ಕೆ ಕಾರಣವಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಚಿವರು ಇದೇ ವೇಳೆ ಅಭಿನಂದನೆ ತಿಳಿಸಿದರು.
ಶುಕ್ರವಾರ ನವೆಂಬರ್ 1ರಂದು ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿಯೇ ಈ ಸುವರ್ಣ ಮಹೋತ್ಸವ ಪ್ರಶಸ್ತಿಗಳನ್ನು ಸಹ ಪ್ರಧಾನ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಇನ್ನೂ ಇತ್ತೀಚೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಒಟ್ಟು 1 575 ಭೌತಿಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಯಿತು.
169 ಸಾಧಕರಿಗೆ ಪ್ರಶಸ್ತಿ ಪ್ರಧಾನ ಶುಕ್ರವಾರ
ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಹಾಗೂ ಸಾಮಾಜಿಕ ನ್ಯಾಯವನ್ನು ಕಾಪಾಡಿಕೊಳ್ಳಲಾಗಿದೆ. ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿದೆ. ಇದರಿಂದ ಕನ್ನಡಿಗರ ಹರ್ಷ ಹೆಚ್ಚಾಗಿದೆ.
ರಾಜ್ಯೋತ್ಸವ 69 ಪ್ರಶಸ್ತಿ ಹಾಗೂ ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ 100 ಸೇರಿ ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು ಏರಿಕೆ ಮಾಡಲಾಗಿದೆ. ವಿಶೇಷವೆಂದರೆ ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ.












Click it and Unblock the Notifications