Certificates: ಕರ್ನಾಟಕದ ಜನರಿಗೆ ಗುಡ್‌ನ್ಯೂಸ್: ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಜಾತಿ, ನಿವಾಸಿ ಪ್ರಮಾಣಪತ್ರ!

Certificates: ಕರ್ನಾಟಕ ಸರ್ಕಾರವು ಜಾತಿ, ನಿವಾಸಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಮಹತ್ವದ ಗುಡ್‌ನ್ಯೂಸ್ ಕೊಟ್ಟಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜಾತಿ, ನಿವಾಸಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಗುಡ್‌ನ್ಯೂಸ್ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಅದರ ಸಂಪೂರ್ಣ ವಿವರ ಇಲ್ಲಿದೆ. ಇನ್ಮುಂದೆ ಕಚೇರಿ ಅಲೆದಾಟ ತಪ್ಪಲಿದ್ದು ಜಾತಿ, ನಿವಾಸಿ ಪ್ರಮಾಣಪತ್ರ ಮನೆ ಬಾಗಿಲಿಗೆ ಬರಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರವು ತಿಳಿಸಿದೆ.

ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಜಾತಿ ಪ್ರಮಾಣ ಪತ್ರಗಳನ್ನು ಉಚಿತವಾಗಿ ವಿತರಿಸುವ ಕಂದಾಯ ಇಲಾಖೆಯ ವಿಶೇಷ ಅಭಿಯಾನ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ಸೇವೆಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು.

Certificates

ರಾಜ್ಯಾದ್ಯಂತ ಒಟ್ಟು 4.85 ಕೋಟಿ ಡಿಜಿಟಲ್ ಜಾತಿ ಪ್ರಮಾಣ ಪತ್ರಗಳನ್ನು ಗ್ರಾಮವಾರು ವಿಂಗಡಿಸಿ ಪಿಡಿಎಫ್ ರೂಪದಲ್ಲಿ ಜಿಲ್ಲಾಧಿಕಾರಿಗಳಿಗೆ ಒದಗಿಸಲಾಗಿದ್ದು, ಇವುಗಳನ್ನು ಮುದ್ರಿಸಿ ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಮನೆ ಮನೆಗೆ ತೆರಳಿ ಉಚಿತವಾಗಿ ನೀಡುವ ಈ ವಿಶೇಷ ಅಭಿಯಾನದ ಜೊತೆಗೆ, ಸಾರ್ವಜನಿಕರು ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಲು ವಿಶೇಷ ವೆಬ್‌ಸೈಟ್‌ (https://nadakacheri.karnataka.gov.in/AJSKCertificates) ಹಾಗೂ ಪ್ರತಿ ಹೋಬಳಿ ಮಟ್ಟದಲ್ಲಿ ಉಚಿತ ಮುದ್ರಣದ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಈಗಾಗಲೇ ಸುಮಾರು 85 ಲಕ್ಷ ಜಾತಿ ಪ್ರಮಾಣ ಪತ್ರಗಳನ್ನು ಮೊಬೈಲ್ ಸಂಖ್ಯೆಗಳೊಂದಿಗೆ ಲಿಂಕ್ ಮಾಡಲಾಗಿದ್ದು, ವಾಟ್ಸ್ಆಪ್ ಅಥವಾ ಎಸ್‌ಎಂಎಸ್ ಮೂಲಕ ನೇರ ಲಿಂಕ್ ಕಳುಹಿಸಿ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ, ರಾಜ್ಯದಾದ್ಯಂತ ಏಕರೂಪದ, ಪಾರದರ್ಶಕ ಮತ್ತು ಕಾನೂನುಬದ್ಧವಾದ ಚೌಕಟ್ಟಿನಡಿಯಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಿಸುವ ಮಹತ್ವದ ಸೇವೆಗೂ ಆದ್ಯತೆಯ ಮೇರೆಗೆ ಚಾಲನೆ ನೀಡಲಾಗಿದೆ. ನಾಗರಿಕರು ಈ ಪ್ರಮಾಣ ಪತ್ರವನ್ನು ಪಡೆಯಲು ಹತ್ತಿರದ ನಾಡಕಚೇರಿ, ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರಗಳು ಅಥವಾ ಅಧಿಕೃತ ಜಾಲತಾಣದ (https://ajsk.karnataka.gov.in/nk5_online/Login/Login_Public) ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

ಇದರಿಂದ ಕರ್ನಾಟಕದಲ್ಲಿ ಜಾತಿ ಹಾಗೂ ನಿವಾಸಿ ಪ್ರಮಾಣಪತ್ರಕ್ಕೆ ಸಂಕಷ್ಟ ಅನುಭವಿಸುತ್ತಿದ್ದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ. ಈಚೆಗೆ ಕರ್ನಾಟಕದಲ್ಲಿ ಇತ್ತೀಚೆಗೆ ಜಾತಿ, ನಿವಾಸಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಹಲವರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ಕ್ರಮ ತೆಗೆದುಕೊಂಡಿದೆ. ಇದರಿಂದ ಕರ್ನಾಟಕದಲ್ಲಿ ಜಾತಿ, ನಿವಾಸಿ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸುವವರಿಗೆ ತುಂಬಾ ಸುಲಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+