Breaking; 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಮೇ16: ಬೆಂಗಳೂರು ನಗರದ ನೂತನ ಆಯುಕ್ತರಾಗಿ ಸಿ. ಹೆಚ್. ಪ್ರತಾಪ್ ರೆಡ್ಡಿ ನೇಮಕ ಮಾಡಿರುವ ರಾಜ್ಯ ಸರ್ಕಾರ ಸೋಮವಾರ 5 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.
ಸೋಮವಾರ ಸಂಜೆ ಕರ್ನಾಟಕ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ನೇಮಕಾತಿ ವಿಭಾಗದ ಡಿಜಿಪಿಯಾಗಿ, ಕೆಎಸ್‌ಆರ್‌ಪಿಯ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.

ಕ್ರೈಂ ಮತ್ತು ಟೆಕ್ನಿಕಲ್ ಸೆಲ್‌ನಲ್ಲಿ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಕೆಎಸ್ಆರ್‌ಪಿ ಎಡಿಜಿಪಿಯಾಗಿ, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಂ. ಎನ್. ಅನುಚೇತ್ ಸಿಐಡಿಯ ಎಸ್ಪಿಯಾಗಿ ವರ್ಗಾವಣೆಯಾಗಿದ್ದಾರೆ.
Recommended Video
ಪಂಜಾಬ್ ತಂಡಕ್ಕೆ ಲಕ್ಕಿ ಚಾರ್ಮ್ ಈತ !! | Oneindia Kannada












Click it and Unblock the Notifications