ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2011ರ ಕೆಪಿಎಸ್‌ಸಿ ನೇಮಕಾತಿಗೆ ಸಚಿವ ಸಂಪುಟ ಸಮ್ಮತಿ

2011ರಲ್ಲಿ ಕೆಪಿಎಸ್ ಸಿ ನೇಮಕಾತಿಯಲ್ಲಿ ಅಕ್ರಮ ನಡೆದ ಕಾರಣ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ರದ್ದುಗೊಳಿಸಿದ್ದ ಸರ್ಕಾರ ಇದೀಗ ಈ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ.

By Ramesh
|
Google Oneindia Kannada News

ಬೆಂಗಳೂರು, ಮಾರ್ಚ್. 01 : ಕೊನೆಗೂ 2011ರ ಬ್ಯಾಚ್ 362 ಮಂದಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಬುಧವಾರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬುಧವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಕಾನೂನು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಟಿಬಿ ಜಯಚಂದ್ರ ಸದ್ದಿಗೋಷ್ಠಿ ನಡೆಸಿ, ಕೆಎಟಿ ಆದೇಶದ ಬಗ್ಗೆ ಕಾನೂನು ತಜ್ಞರ ಜತೆ ಮಾತುಕತೆ ನಡೆಸಿದ್ದೇವೆ.

ಆಡಳಿತದ ದೃಷ್ಟಿಯಿಂದ ರಾಜ್ಯ ಸರ್ಕಾರ ಆದೇಶವನ್ನು ಪ್ರಶ್ನಿಸದೇ ಇರಲು ನಿರ್ಧರಿಸಿದೆ. ಹೀಗಾಗಿ ಎಲ್ಲಾ 362 ಗೆಜೆಟೆಡ್ ಪ್ರೊಬೇಷನರಿ ಅಭ್ಯರ್ಥಿಗಳ ನೇಮಕಾತಿಗೆ ಒಪ್ಪಿಗೆ ನೀಡಿದ್ದೇವೆ ಎಂದು ತಿಳಿಸಿದರು.

Karnataka Governmen finally clears KPSC recruitment of 362 gazetted probationers 2011 batch

ಸಿಐಡಿ ತನಿಖೆಯಲ್ಲಿ ಯಾವ ಆರೋಪಗಳು ಸಾಬೀತಾಗಿರಲಿಲ್ಲ. ಕೇವಲ ಫೋನ್ ಕಾಲ್ ಮಾಡಿರುವುದು ಸಾಕ್ಷಿ ಆಗುವುದಿಲ್ಲ. ಹೀಗಾಗಿ ಕೆಎಟಿ ಆದೇಶವನ್ನು ಪಾಲಿಸುತ್ತಿದ್ದೇವೆ ಅಷ್ಟೇ ಅಲ್ಲದೇ ಮತ್ತೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲು ಎಲ್ಲರಿಗೂ ಸ್ವಾಂತಂತ್ರ್ಯ ಇದೆ ಎಂದು ಹೇಳಿದರು.

ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ಆದೇಶವನ್ನು ಪ್ರಶ್ನಿಸದಿರಲು ಸರ್ಕಾರ ನಿರ್ಧಾರಿಸಿದ್ದರಿಂದ ನಾಲ್ಕು ವರ್ಷಗಳ ಕಾನೂನು ಸಮರ ಅಂತ್ಯವಾದಂತಾಗಿದೆ.

ಏನಿದು ಪ್ರಕರಣ? 2011ರಲ್ಲಿ ಕೆಪಿಎಸ್ ಸಿ ನೇಮಕಾತಿಯಲ್ಲಿ ಅಕ್ರಮ ನಡೆದ ಕಾರಣ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಹೊರಡಿಸಿದ್ದ ಅಧಿಸೂಚನೆಯನ್ನು ಸರ್ಕಾರ ರದ್ದುಗೊಳಿಸಿತ್ತು.

ಸರ್ಕಾರದ ಆದೇಶದ ವಿರುದ್ಧ ಕೆಲ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು. ಕೆಎಟಿ ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು.

English summary
Karnataka cabinet today decided not to appeal against the Karnataka Administrative Tribunal order quashing the state government's order annulling selection of 362 gazetted probationers by the Karnataka Public Service Commission in 2011.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X