Government Recruitment 2026: ರಾಜ್ಯದಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ: ಡಿ ಕೆ ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಇಲಾಖೆಗಳಲ್ಲಿರುವ ಸುಮಾರು 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಇದರಿಂದ ಹೆಚ್ಚಿನ ಅವಕಾಶಗಳು ದೊರೆಯುವ ನಿರೀಕ್ಷೆಯಿದೆ.

ಈ ಕುರಿತು ಮಾತನಾಡಿದ ಡಿ ಕೆ ಶಿವಕುಮಾರ್‌ ಅವರು, ಯುವಕರಿಗೆ ಉದ್ಯೋಗ ನೀಡುತ್ತಿಲ್ಲ. ನೇಮಕಾತಿಯಲ್ಲಿ ಪಾರದರ್ಶಕತೆ ತರಬೇಕಿದೆ. ರಾಜ್ಯದಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಮುಂದಾಗಿದ್ದೇವೆ. ಯುವ ಜನಾಂಗ ರಾಜ್ಯಕ್ಕೆ ಶಕ್ತಿ ತುಂಬಲಿದೆ. ಹೀಗಾಗಿ ನಾವು ಯುವಕರಿಗೆ ಮಾತ್ರ ನೀಡಬೇಕು. ಯುವ ಕರ್ನಾಟಕದ ಮೂಲಕ ಭಾರತ ನಿರ್ಮಾಣ ಮಾಡಬೇಕು ಎಂದರು.

karnataka Government 72 000 Government Jobs to Be Filled Across Karnataka DK Shivakumar

ಜ್ಞಾನವೇ ಪ್ರಗತಿಯ ಮೂಲ ಯುವ ಕರ್ನಾಟಕ ನವ ಭಾರತ. ನಂಬಿಕೆ ದೊಡ್ಡ ಶಕ್ತಿ. ಈ ಪಕ್ಷದಲ್ಲಿ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಯಾರು ಇರ್ತಾರೆ ಎಂಬುದು ಮುಖ್ಯವಲ್ಲ, ನಮ್ಮ ಹೆಗಲ ಮೇಲೆ ರಾಷ್ಟ್ರಧ್ವಜ ಉಳಿಸಿಕೊಳ್ಳುವುದು ಮುಖ್ಯ. ನಾವು ಕಾರ್ಯಕರ್ತರನ್ನು ಗ್ಯಾರಂಟಿ ಸಮಿತಿಯನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾಡಿದ್ದೆವು. ಈಗ ಪಂಚಾಯ್ತಿ ಮಟ್ಟದಲ್ಲಿ ಆರು ಜನರ ಸಮಿತಿ ಮಾಡಲು ತೀರ್ಮಾನಿಸಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು.

ಕಮಲ ಕೆರೆಯಲ್ಲಿದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆಂದ. ಈ ಕೈ ಅಧಿಕಾರದಲ್ಲಿದ್ದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ, 1.21 ಕೋಟಿ ಮಹಿಳೆಯರಿಗೆ ಮಾಸಿಕ 2 ಸಾವಿರ, 1.61 ಮನೆಗಳಿಗೆ 200 ಯೂನಿಟ್ ವಿದ್ಯುತ್ ಉಚಿತ, 4 ಕೋಟಿಗೂ ಹೆಚ್ಚು ಜನರಿಗೆ 10 ಕೆಜಿ ಅಕ್ಕಿ ನೀಡುತ್ತಿದ್ದೇವೆ. ರಾಜ್ಯದ ಮಹಿಳೆಯರಿಗೆ ರಾಜ್ಯದಲ್ಲಿ ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ. ನಮ್ಮ ಕಾರ್ಯಕ್ರಮ ಇಂದು ದೇಶದ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಎಂದಿಗೂ ಜಗ್ಗಲ್ಲ, ಬಗ್ಗಲ್ಲ, ಕುಗ್ಗಲ್ಲ. ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ದೇಶದಿಂದ ಕಾಂಗ್ರೆಸ್ ಪಕ್, ಕಾಂಗ್ರೆಸ್ ಕುಟುಂಬವನ್ನು ಹೊರಗೆಹಾಕಬೇಕು ಎಂಬ ದೊಡ್ಡ ಷಡ್ಯಂತ್ರ ನಡೆಯಿತು. ನಮ್ಮ ಇಂಡಿಯಾ ಒಕ್ಕೂಟ 25 ಸೀಟುಗಳ ಅಂತರದಲ್ಲಿ ಅಧಿಕಾರದಿಂದ ವಂಚಿತವಾಯಿತು. ಯಾವುದೇ ಪಕ್ಷಕ್ಕೆ ಅಥವಾ ವ್ಯಕ್ತಿಗೆ ಅಧಿಕಾರ ಶಾಶ್ವತವಲ್ಲ. ಆದರೆ ನಮ್ಮ ಬದ್ಧತೆಯನ್ನು ನಾನು ಮುಂದುವರಿಸುತ್ತಿದ್ದೇವೆ. ಇಂದು ದೇಶಕ್ಕೆ ದೊಡ್ಡ ಸಮಸ್ಯೆ ಎದುರಾಗಿದೆ.

ಈ ದೇಶದ ಸಮಗ್ರತೆ, ಐಕ್ಯತೆ, ಶಾಂತಿಗಾಗಿ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡಿದರು. ನಮ್ಮ ರಾಜ್ಯದಲ್ಲೂ ಚಾಮರಾಜನಗರದಿಂದ ರಾಯಚೂರುವರೆಗೆ ಪಾದಯಾತ್ರೆ ನಡೆಯಿತು. ಈ ಯಾತ್ರೆ ಸಾಗಿದ ಎಲ್ಲಾ ಕಡೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ 136 ಸೀಟು ಗೆಲ್ಲಲು ಸಾಧ್ಯವಾಯಿತು ಎಂದರು. ನಮ್ಮ ಗುರಿ 2028 ಹಾಗೂ 2029 ಆಗಿದೆ. ಕಾಂಗ್ರೆಸ್ ಮುಕ್ತ ಮಾಡಲು ಕೆಲವು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಹೀಗಾಗಿ ಕಾಂಗ್ರೆಸ್ ಮುಕ್ತ ಮಾಡಲು ಸಾಧ್ಯವಿಲ್ಲ. ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ, ಕೇರಳ, ತೆಲಂಗಾಣದಲ್ಲಿ ಸಾಧ್ಯವಾಯಿತಾ? ಇಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+