BPL Card: ಇಂತಹ ಬಿಪಿಎಲ್ ಪಡಿತರ ಚೀಟಿದಾರರಿಗೆ ಮತ್ತೊಂದು ಬಿಗ್ ಶಾಕ್
BPL Card: ರಾಜ್ಯದಲ್ಲಿ ಪಡಿತರ ಚೀಟಿ ಕೂಡ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದರಲ್ಲಿ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್ ಕಾರ್ಡ್‌ಗೆ ಹಲವು ಸರ್ಕಾರಿ ಸೌಲಭ್ಯಗಳು ದೊರೆಯಲಿವೆ. ಆದ್ದರಿಂದ ಇದನ್ನು ಅರ್ಹರಲ್ಲದವರು ಕೂಡ ಪಡೆದುಕೊಂಡು ಇದೀಗ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹವರಿಗೆ ಕಾರ್ಡ್ ರದ್ದಿನ ಜೊತೆಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.
ಸಾಮಾನ್ಯವಾಗಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಅಂದರೆ ಅನರ್ಹರು ಕೂಡ ಪಡೆದುಕೊಂಡಿರುವುದು ಬೆಳಕಿಗೆ ಬಂದಿದೆ. ನಕಲಿ ಬಿಪಿಎಲ್ ಕಾರ್ಡ್‌ಗಳ ಪರಿಶೀಲನೆ ವೇಳೆ ಇಂತಹ ಕಾರ್ಡ್‌ಗಳನ್ನು ಪತ್ತೆಯಾಗಿವೆ. ಇನ್ನೂ ಕೂಡ ಇಂತಹವರು ಇದ್ದು, ಈ ಹಿನ್ನೆಲೆ ಪರಿಶೀಲನೆ ಕಾರ್ಯ ಮುಂದುವರೆಸಿದೆ.

ಅನರ್ಹರನ್ನು ಗುರುತಿಸಿ ಅಂತಹವರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುತ್ತಿದ್ದು, ಇದರಲ್ಲಿ ಕೆಲವರನ್ನು ಎಪಿಎಲ್‌ಗೆ ವರ್ಗಾಹಿಸುವ ಕಾರ್ಯ ನಡೆಯುತ್ತಿದೆ. ಮತ್ತೊಂದೆಡೆ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತಿದ್ದು, ಇಂತಹವರ ವಿರುದ್ಧ ದಂಡಾಸ್ತ್ರದ ಕ್ರಮಕ್ಕೆ ಮುಂದಾಗಿದೆ. ಅರ್ಹರಿಗೆ ಸಿಗಬೇಕಾದ ಸೌಲಭ್ಯ ಒದಗಿಸಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಈಗಾಗಲೇ 12,00,000ಕ್ಕೂ ಹೆಚ್ಚು ಶಂಕಾಸ್ಪದ ಕಾರ್ಡ್‌ಗಳು ಪತ್ತೆಯಾಗಿದ್ದು, ಇವುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿರುವ ಒಂದು ನ್ಯಾಯಬೆಲೆ ಅಂಗಡಿಯಲ್ಲಿ ನಡೆದ ಪರಿಶೀಲನೆ ವೇಳೆ, ಅನರ್ಹ ಫಲಾನುಭವಿಗಳ ಪಟ್ಟಿಯನ್ನು ಪ್ರದರ್ಶಿಸಲಾಗಿದೆ.
ಈ ಪಟ್ಟಿಯಲ್ಲಿ ಇರುವವರನ್ನು ಗುರುತಿಸಿ, ಅವರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ ಹಲವು ದಾಖಲೆಗಳನ್ನು ಪರಿಶೀಲಿಸಿ, ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಅನರ್ಹ ಎಂದು ಕಂಡುಬಂದರೆ ಕಾರ್ಡ್ ರದ್ದು ಮತ್ತು ದಂಡ ವಿಧಿಸಲಾಗುತ್ತದೆ. ಇದೇ ರೀತಿ ರಾಜ್ಯದ ಎಲ್ಲಾ ಕಡೆ ಅನರ್ಹ ಕಾರ್ಡ್‌ಗಳ ಪತ್ತೆ ಮತ್ತು ರದ್ದತಿ ಕಾರ್ಯ ಮುಂದುವರೆದಿದೆ.
ಕೇಂದ್ರ ಸರ್ಕಾರವೇ ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುವಂತೆ ಸೂಚನೆ ನೀಡಿದೆ. ಆದ್ದರಿಂದ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ 12,00,000ಕ್ಕೂ ಅಧಿಕ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಸಿದ್ಧತೆ ನಡೆಯುತ್ತಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 1.5 ಕೋಟಿಗೂ ಹೆಚ್ಚು ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗಿದೆ. ಈ ಪೈಕಿ 12 ಲಕ್ಷ ಬಿಪಿಎಲ್ ಕಾರ್ಡುಗಳು ಅನರ್ಹರ ಬಳಿಯಿವೆ ಎಂದು ತಿಳಿದುಬಂದಿದೆ. ಅದರಲ್ಲೂ ಬೆಂಗಳೂರು ಒಂದರಲ್ಲೇ 1 ಲಕ್ಷಕ್ಕೂ ಹೆಚ್ಚು ಕುಟುಂಬಗಳು ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡು ಪಡೆದಿರುವುದು ಬೆಳಕಿಗೆ ಬಂದಿದೆ. ಅದರಲ್ಲೂ ಹೊರ ರಾಜ್ಯದಿಂದ ಬಂದು ಇಲ್ಲಿ ಪಡಿತರ ಚೀಟಿ ಪಡೆದವರ ಸಂಖ್ಯೆ 57,864 ಎನ್ನುವ ಅಚ್ಚರಿ ಸಂಗತಿ ಹೊರಬಿದ್ದಿದೆ.
ಅನರ್ಹ ಬಿಪಿಎಲ್ ಕಾರ್ಡ್‌ಗಳ ವಿವರ
* ಮೃತಪಟ್ಟವರ ಹೆಸರನ್ನು ಪಡಿತರ ಚೀಟಿಯಿಂದದ ತೆಗೆಸದೇ ಇರುವವರು - 1,446
* ಬೇರೆ ರಾಜ್ಯದ ಪಡಿತರ ಚೀಟಿದಾರರು - 57,864
* 25 ಲಕ್ಷ ರೂಪಾಯಿ ಮೇಲಿನ ಜಿಎಸ್ಟಿ ವ್ಯವಹಾರ - 2,684
* 1.20 ಲಕ್ಷ ರೂಪಾಯಿಗಿಂತ ಹೆಚ್ಚಿನ ಆದಾಯ ಹೊಂದಿರುವವರು - 5,13,613
* ಕಂಪನಿಗಳಲ್ಲಿ ಡೈರೆಕ್ಟರ್ ಆಗಿರುವವರು - 19.690
* 7.5 ಹೆಕ್ಟೇರ್‌ಗೂ ಅಧಿಕ ಪ್ರಮಾಣದ ಜಮೀನು ಹೊಂದಿರುವವರು - 33,456
* ಇ-ಕೆವೈಸಿ ಮಾಡಿಸದೆ ಇರುವವರು - 6,16,196
* ಕಳೆದ ಕೆಲ ತಿಂಗಳುಗಳಿಂದ ಪಡೆಯತರ ಪಡೆಯದವರ ಸಂಖ್ಯೆ - 19,893
ಯಾರೆಲ್ಲಾ ಬಿಪಿಎಲ್ ಕಾರ್ಡ್‌ಗೆ ಅನರ್ಹರು?
* ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಗಿಂತ ಹೆಚ್ಚಿರುವವರು
* ವೈಟ್ ಬೋರ್ಡ್‌ನ ನಾಲ್ಕು ಚಕ್ರದ ವಾಹನ ಉಳ್ಳವರು
* ಆದಾಯ ತೆರಿಗೆ ಪಾವತಿಸುವವರು
* 3 ಹೆಕ್ಟೇರ್‌ಗೂ ಅಧಿಕ ಭೂಮಿ ಹೊಂದಿರುವವರು
* ನಗರ ಪ್ರದೇಶಗಳಲ್ಲಿ1,000 ಚದರ ಅಡಿ ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು
* ಸರ್ಕಾರಿ, ದೊಡ್ಡ ಕಂಪನಿಗಳಲ್ಲಿ ಉದ್ಯೋಗದಲ್ಲಿರುವವರು












Click it and Unblock the Notifications