ಕರ್ನಾಟಕದಿಂದ ತೆಲಂಗಾಣಕ್ಕೆ ನೀರು ಬಿಡಲು ಒಪ್ಪಿಗೆ!
ಕರ್ನಾಟಕ ಸರ್ಕಾರವು ನೆರೆಯ ತೆಲಂಗಾಣ ರಾಜ್ಯಕ್ಕೆ ನೀರು ಬಿಡುವುದಕ್ಕೆ ಮುಂದಾಗಿದೆ. ತೆಲಂಗಾಣದಿಂದ ಮನವಿ ಬಂದ ಬೆನ್ನಲ್ಲೇ ತೆಲಂಗಾಣಕ್ಕೆ ನೀರು ಬಿಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ತೆಲಂಗಾಣದ ನಾಯಕರು ಬುಧವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದರು. ನಾರಾಯಣಪುರ (ಬಸವಸಾಗರ)ಡ್ಯಾಂನಿಂದ ಪ್ರಿಯದರ್ಶಿನಿ ಜುರಾಲಾ ಯೋಜನೆಗೆ
ನೀರು ಬಿಡುವಂತೆ ಮನವಿ ಮಾಡಲಾಗಿದೆ. ಈ ಮನವಿಗೆ ರಾಜ್ಯ ಸರ್ಕಾರವು ಒಂದೇ ದಿನದಲ್ಲಿ ಒಪ್ಪಿಗೆ ಸೂಚಿಸಿದೆ. ತೆಲಂಗಾಣಕ್ಕೆ ಕರ್ನಾಟಕದಿಂದ ಎಷ್ಟು ನೀರು ಬಿಡಲಾಗುತ್ತಿದೆ. ಏನಿದು ಮನವಿ ಎನ್ನುವ ವಿವರ ಇಲ್ಲಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ತೆಲಂಗಾಣ ರಾಜ್ಯದ ಮನವಿಗೆ ಸ್ಪಂದಿಸಿದೆ. ನಾರಾಯಣಪುರ ಜಲಾಶಯದಿಂದ ಜುರಾಲಾ ಯೋಜನೆಗೆ 4 ಟಿಎಂಸಿ ನೀರು ಬಿಡುಗಡೆ ಮಾಡಲು ಕರ್ನಾಟಕ ಒಪ್ಪಿಗೆ ಸೂಚಿಸಿದೆ. ತೆಲಂಗಾಣದ ಮಹಬೂಬ್ ನಗರ ಜಿಲ್ಲೆಯ ಕಾಂಗ್ರೆಸ್ ನಾಯಕರು ಈ ಸಂಬಂಧ ಮನವಿ ಮಾಡಿದ್ದರು. ನಾರಾಯಣಪುರ ಜಲಾಶಯದಿಂದ ಜುರಾಲಾ ಯೋಜನೆಗೆ 5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕರ್ನಾಟಕ ಈ ಮನವಿಗೆ ಸ್ಪಂದಿಸಿದೆ. ಆದರೆ 5 ಟಿಎಂಸಿ ನೀರು ಬಿಡುವ ಬದಲಾಗಿ 4 ಟಿಎಂಸಿ ನೀರು ಬಿಡುವುದಕ್ಕೆ ಸಮ್ಮತಿ ಸೂಚಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಈ ಸಂಬಂಧ ಚರ್ಚೆ ಮಾಡಲಾಗಿದೆ. ತೆಲಂಗಾಣದ ಜುರಾಲಾಕ್ಕೆ 5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಕರ್ನಾಟಕ ಸರ್ಕಾರವು 4 ಟಿಎಂಸಿ ನೀರು ಬಿಡುಗಡೆ ಮಾಡುವುದಕ್ಕೆ ಒಪ್ಪಿಕೊಂಡಿದೆ.
ಡಿ.ಕೆ ಶಿವಕುಮಾರ್ ಟ್ವೀಟ್: ತೆಲಂಗಾಣದ ಸಚಿವರು, ಶಾಸಕರು ಹಾಗೂ ನಾಯಕರು ಭೇಟಿ ಮಾಡಿ ಚರ್ಚೆ ಮಾಡಿದ ವಿಷಯವನ್ನು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಕುಡಿಯುವ ಹಾಗೂ ಕೃಷಿ ಅಗತ್ಯತೆಗಳನ್ನು ಪೂರೈಸಲು ನಾರಾಯಣಪುರ ಜಲಾಶಯದಿಂದ ಪ್ರಿಯದರ್ಶಿನಿ ಜುರಾಲಾ ಯೋಜನೆಗೆ 5 TMC ನೀರು ಹರಿಸುವಂತೆ ತೆಲಂಗಾಣದ ನಾಯಕರು ಮನವಿ ಮಾಡಿದ್ದಾರೆ. ಈ ವೇಳೆ ಸಚಿವರಾದ ಎನ್.ಎಸ್. ಭೋಸರಾಜು ಅವರು ಇದ್ದರು ಎಂದು ಅವರು ಟ್ವೀಟ್ ಮಾಡಿದ್ದಾರೆ.

ತೆಲಂಗಾಣದ ಸಚಿವರು ಹಾಗೂ ಶಾಸಕರು ಸೇರಿದಂತೆ ತೆಲಂಗಾಣ ನಾಯಕರ ನಿಯೋಗವು ಬುಧವಾರ ಕರ್ನಾಟಕ ಸರ್ಕಾರದೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಲು ಬೆಂಗಳೂರಿಗೆ ಭೇಟಿ ನೀಡಿದ್ದರು. ನಿಯೋಗದಲ್ಲಿ ತೆಲಂಗಾಣ ಸಚಿವರಾದ ಶ್ರೀಧರ್ ಬಾಬು ಹಾಗೂ ಜೂಪಲ್ಲಿ ಕೃಷ್ಣ ರಾವ್, ಶಾಸಕರಾದ ಕೃಷ್ಣ ಮೋಹನ್ ರೆಡ್ಡಿ, ಜಿ. ಮಧುಸೂಧನ್ ರೆಡ್ಡಿ, ವಕಾಟಿ ಶ್ರೀಹರಿ ಹಾಗೂ ಎಐಸಿಸಿ ಕಾರ್ಯದರ್ಶಿ ಸಂಪತ್ ಕುಮಾರ್ ಇದ್ದರು.
ಉಭಯ ರಾಜ್ಯಗಳಲ್ಲಿ ಕಾಂಗ್ರೆಸ್: ಇನ್ನು ಕರ್ನಾಟಕ ಹಾಗೂ ತೆಲಂಗಾಣ ಉಭಯ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇದ್ದು. ಈ ಎರಡೂ ರಾಜ್ಯಗಳ ನಡುವೆ ಸಂಬಂಧ ಉತ್ತಮವಾಗಿದೆ. ಇದೀಗ ಕರ್ನಾಟಕದಿಂದ ತೆಲಂಗಾಣಕ್ಕೆ ನೀರು ಬಿಡುವುದಕ್ಕೆ ಒಪ್ಪಿಗೆ ಸೂಚಿಸಲಾಗಿದೆ.












Click it and Unblock the Notifications