Medical Courses Fee: ಎಂಡಿ, ಎಂಎಸ್ ಕೋರ್ಸ್‌ಗಳ ಶುಲ್ಕ ಶೇ 10ರಷ್ಟು ಹೆಚ್ಚಳ, ಶುಲ್ಕದ ವಿವರ
ಬೆಂಗಳೂರು, ನವೆಂಬರ್ 19: ಕರ್ನಾಟಕ ಸರ್ಕಾರ 2024-25ನೇ ಸಾಲಿಗೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ (ಎಂಡಿ/ ಎಂಎಸ್) ಕೋರ್ಸಿನ ಸೀಟುಗಳಿಗೆ ಶುಲ್ಕ ನಿಗದಿ ಮಾಡಿ ಆದೇಶವನ್ನು ಹೊರಡಿಸಿದೆ. ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಖಾಸಗಿ ಕಾಲೇಜುಗಳ ಸಂಘಗಳೊಂದಿಗೆ ಪರಸ್ಪರ ಒಡಂಬಡಿಕೆ ಮಾಡಿಕೊಳ್ಳುವ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ನಡವಳಿಗಳ ಆಧಾರದ ಮೇಲೆ ಈ ಕುರಿತು ಆದೇಶವನ್ನು ಹೊರಡಿಸಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಆರ್. ಮಂಜುನಾಥ ಸರ್ಕಾರದ ಅಧೀನ ಕಾರ್ಯದರ್ಶಿ-3, ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ. 2024-25ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸು (ಎಂಡಿ/ ಎಂಎಸ್)ಗಳ ಸೀಟು ಹಂಚಿಕೆ & ಶುಲ್ಕ ನಿಗಧಿಗೆ ಸಂಬಂಧಿಸಿದಂತೆ ಸರ್ಕಾರವು ರಾಜ್ಯದ ಖಾಸಗಿ ಕಾಲೇಜುಗಳ ಸಂಘಗಳಾದ ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCF), ಕರ್ನಾಟಕ ಅಲ್ಪ ಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ (AMPCK) ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘ (KRLMPCA)ಗಳೊಂದಿಗೆ ಪರಸ್ಪರ ಒಪ್ಪಂದದ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದೆ.

2024-25ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಸಂಘಗಳೊಂದಿಗೆ ಪರಸ್ಪರ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ವೈದ್ಯಕೀಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಸಂಘಗಳು ಶುಲ್ಕ ಹೆಚ್ಚಳ ಹಾಗೂ ಇನ್ನಿತರೆ ಕೆಲವು ಬೇಡಿಕೆಗಳನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದೆ.
ರಾಜ್ಯದ ಖಾಸಗಿ ಕಾಲೇಜುಗಳ ಸಂಘಗಳು ಸಲ್ಲಿಸಿರುವ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು 2024-25ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲ್ಲಿಸಿರುವ ಪರಸ್ಪರ ಒಡಂಬಡಿಕೆಯಂತೆ ಸರ್ಕಾರಿ/ ಖಾಸಗಿ ಕೋಟಾದ ಸೀಟುಗಳಿಗೆ ಅನ್ವಯಿಸುವಂತೆ ಶೇ.10ರಷ್ಟು ಪ್ರವೇಶ ಶುಲ್ಕವನ್ನು ಹೆಚ್ಚಿಸಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಸೀಟುಗಳಿಗೆ ಶುಲ್ಕವನ್ನು ನಿಗದಿ ಮಾಡಿದೆ ಎಂದು ಹೇಳಿದೆ.
ಎಷ್ಟು ಶುಲ್ಕ ಪಾವತಿಸಬೇಕು?; 2024-25ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳಿಗೆ ಸಂಬಂಧಿಸಿದಂತೆ, ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳು, ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ, ಕರ್ನಾಟಕ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘದ ಅಡಿಯಲ್ಲಿ ಬರುವ ಎಲ್ಲಾ ಕಾಲೇಜುಗಳು ಹಾಗೂ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಖಾಸಗಿ ವಿಶ್ವವಿದ್ಯಾಲಯದಡಿ ಬರುವ ವೈದ್ಯಕೀಯ ಕಾಲೇಜುಗಳಲ್ಲಿ 2024-25ನೇ ಸಾಲಿಗೆ ಪ್ರವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸು (ಎಂಡಿ/ ಎಂಎಸ್)ಗಳಿಗೆ 2024-25ನೇ ಸಾಲಿಗೆ ಪ್ರವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಲಾಗಿದೆ.
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಎಂಡಿ/ ಎಂಎಸ್‌ಗಳ ಶುಲ್ಕ
* ಕ್ಲಿನಿಕಲ್ 1,10,000 ರೂ.ಗಳು
* ಪ್ಯಾರಾ ಕ್ಲಿನಿಕಲ್ 55,00 ರೂ.ಗಳು
* ಪ್ರೀ ಕ್ಲಿನಿಕಲ್ 27,500 ರೂ.ಗಳು
ರಾಜ್ಯದಲ್ಲಿನ KPCF, KRLMPCA & AMPCK ಸಂಘಗಳಡಿಯಲ್ಲಿ ಬರುವ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಸೀಟುಗಳಿಗೆ 2024- 25ನೇ ಸಾಲಿಗೆ ಪ್ರವೇಶ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಿ ನಿಗದಿಪಡಿಸಲಾದ ಶುಲ್ಕದ ವಿವರ
* ಸ್ನಾತಕೋತ್ತರ ವೈದ್ಯಕೀಯ (ಎಂ.ಡಿ/ ಎಂ.ಎಸ್) ಪದವಿ. ಖಾಸಗಿ ಕೋಟಾದಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ
* ಕ್ಲಿನಿಕಲ್ 13,72,994 ರೂ.ಗಳು.
* ಪ್ಯಾರಾ ಕ್ಲಿನಿಕಲ್ 3,43,253 ರೂ. ಗಳು.
* ಪ್ರೀ ಕ್ಲಿನಿಕಲ್ 1,72,668 ರೂ.ಗಳು.
ಸರ್ಕಾರಿ ಕೋಟಾದಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ
* ಕ್ಲಿನಿಕಲ್ 7,68,108 ರೂ.ಗಳು.
* ಪ್ಯಾರಾ ಕ್ಲಿನಿಕಲ್ 1,92,027 ರೂ. ಗಳು.
* ಪ್ರೀ ಕ್ಲಿನಿಕಲ್ 96,015 ರೂ.ಗಳು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications