Murudeshwar tragedy: ಮುರುಡೇಶ್ವರದಲ್ಲಿ ನೀರುಪಾಲಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪರಿಹಾರ ಘೋಷಣೆ

ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ತೆರಳಿದ್ದ ವಿದ್ಯಾರ್ಥಿಗಳು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಸಮುದ್ರಕ್ಕೆ ತೆರಳಿದ್ದ ವಿದ್ಯಾರ್ಥಿಗಳು ನೀರುಪಾಲಾಗಿ ಮೃತಪಟ್ಟಿರುವ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಈ ಘಟನೆ ಬಗ್ಗೆ ಬೇಸರ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ಸಿಎಂ ಹೇಳಿದ್ದಾರೆ.

Karnataka Government Announces 5 Lakh Compensation For Students Who Drowned In Murudeshwar

ಈ ದುರ್ಘಟನೆಯಲ್ಲಿ ಮೃತಪಟ್ಟ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಏನಿದು ಘಟನೆ?: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆಂದು ಕೋಲಾರದಿಂದ ವಿದ್ಯಾರ್ಥಿಗಳನ್ನು ಕರೆತರಲಾಗಿತ್ತು. ಈ ಪೈಕಿ ನಾಲ್ಕು ಮಂದಿ ವಿದ್ಯಾರ್ಥಿಗಳು ಸಮುದ್ರಕ್ಕೆ ಇಳಿದಿದ್ದು, ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸಮುದ್ರದಲ್ಲಿ ಮುಳುಗಿ ಕಣ್ಮರೆಯಾಗಿದ್ದ ವಿದ್ಯಾರ್ಥಿಗಳನ್ನು ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ದೀಕ್ಷಾ, ಲಾವಣ್ಯ, ಶ್ರಾವಂತಿ ಹಾಗೂ ವಂದನಾ ಎಂದು ಗುರುತಿಸಲಾಗಿದೆ. ಇವರೆಲ್ಲರ ಮೃತದೇಹ ಇಂದು ಮುರುಡೇಶ್ವರದ ಸಮುದ್ರದಲ್ಲಿ ಪತ್ತೆಯಾಗಿದೆ.

Karnataka Government Announces 5 Lakh Compensation For Students Who Drowned In Murudeshwar

ಕರಾವಳಿ ಕಾವಲು ಪೊಲೀಸ್ ಪಡೆ ಹಾಗೂ ಮೀನುಗಾರರ ಮೃತದೇಹದ ಪತ್ತೆ ಕಾರ್ಯಾಚರಣೆ ನಡೆದಿತ್ತು. ನಿನ್ನೆಯೇ ಒಬ್ಬರ ಮೃತದೇಹ ಸಿಕ್ಕಿತ್ತು. ಬಾಕಿ ವಿದ್ಯಾರ್ಥಿಗಳ ಕಾರ್ಯಾಚರಣೆ ವೇಳೆ ಇಂದು ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿದೆ. ಇನ್ನು ಘಟನೆ ಸಂಬಂಧ ಮಕ್ಕಳ ರಕ್ಷಣೆಗೆ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಆರೋಪದ ಹಿನ್ನೆಲೆ ಶಾಲೆಯ ಪ್ರಿನ್ಸಿಪಾಲ್‌ ಶಶಿಕಲಾ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ. ಶಾಲೆಯ ಅತಿಥಿ ಉಪನ್ಯಾಸಕರು ಹಾಗೂ ಸಿಬ್ಬಂದಿಯನ್ನೂ ಕೆಲಸದಿಂದ ವಜಾ ಮಾಡಲಾಗಿದೆ. ಎಲ್ಲರನ್ನೂ ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶಿಸಿದ್ದಾರೆ.

ಘಟನೆ ಸಂಭವಿಸಿದ್ದೇಗೆ?: ವಸತಿ ಶಾಲೆಯ 54 ವಿದ್ಯಾರ್ಥಿನಿಯರನ್ನು ಮುರುಡೇಶ್ವರ ಪ್ರವಾಸಕ್ಕೆ ಕರೆತರಲಾಗಿತ್ತು. ನಿನ್ನೆ ಸಂಜೆ ಸಮುದ್ರದ ಬಳಿ ಆಟವಾಡಲು ವಿದ್ಯಾರ್ಥಿಗಳು ಮುಂದಾಗಿದ್ದರು. ಅಲೆಗಳ ಅಬ್ಬರ ಹೆಚ್ಚಾಗಿದ್ದರೂ ಶಿಕ್ಷಕರು ಮಕ್ಕಳನ್ನ ಆಟವಾಡಲು ಬಿಟ್ಟಿದ್ದರು ಎನ್ನಲಾಗಿದೆ. ಅಲೆಗಳ ಅಬ್ಬರ ಹೆಚ್ಚಿದ್ದರೂ ಶಿಕ್ಷಕರು ಮುನ್ನೆಚ್ಚರಿಕೆ ಕೈಗೊಳ್ಳದೆ ಮಕ್ಕಳನ್ನು ಸಮುದ್ರದಲ್ಲಿ ಆಟ ಆಡಲು ಬಿಟ್ಟಿದ್ದಾರೆ. ಇದರಿಂದ ಅಲೆಗಳ ಹೊಡೆತಕ್ಕೆ ವಿದ್ಯಾರ್ಥಿನಿಯರು ಹಾಗೂ ಶಾಲಾ ಶಿಕ್ಷಕರೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಆದರೆ ಕೆಲ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಯಿತಾದರೂ, ನಾಲ್ಕು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಬೆನ್ನಲ್ಲೇ ಮುರುಡೇಶ್ವರ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+