ವಿದ್ಯಾರ್ಥಿ ಬಸ್ ಪಾಸ್ ಮರುಪಾವತಿ ಪ್ರಕ್ರಿಯೆ ಆರಂಭ: ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು KSRTCಯಿಂದ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿ ಮಹತ್ವದ ಆದೇಶ ಹೊರಡಿಸಿರುವುದು ಎಲ್ಲರಿಗೂ ತಿಳಿದೆಯಿದೆ. ಇದರ ಬೆನ್ನಲ್ಲೇ, 2026-27ನೇ ಶೈಕ್ಷಣಿಕ ಸಾಲಿಗೆ ಈಗಾಗಲೇ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಹಣವನ್ನು ಮರುಪಾವತಿ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದ್ದು, ಇದಕ್ಕಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಆನ್‌ಲೈನ್ ಮೂಲಕ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಬಸ್ ಪಾಸ್ ಮರುಪಾವತಿ ಪ್ರಕ್ರಿಯೆ

ಸರ್ಕಾರದ ಇ-ಆಡಳಿತ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ದಿನಾಂಕ: 29-05-2026 ರಿಂದಲೇ ವಿದ್ಯಾರ್ಥಿ ಬಸ್ ಪಾಸ್‌ಗಳ ವಿತರಣೆ ಆರಂಭವಾಗಿತ್ತು. ಸರ್ಕಾರವು ಸಂಪೂರ್ಣ ಉಚಿತ ಪಾಸ್ ಆದೇಶ ಹೊರಡಿಸುವ ಮುನ್ನವೇ ಅನೇಕ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಪೂರ್ಣ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದುಕೊಂಡಿದ್ದರು.

Karnataka Government

ಇದೀಗ ಸರ್ಕಾರವು ಉಚಿತ ಪಾಸ್ ವಿತರಿಸಲು ಅಧಿಕೃತ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ, ಈಗಾಗಲೇ ಹಣ ಪಾವತಿಸಿರುವ ವಿದ್ಯಾರ್ಥಿಗಳಿಗೆ ಆ ಮೊತ್ತವನ್ನು ಸುರಕ್ಷಿತವಾಗಿ, ಸುಲಭವಾಗಿ ಹಾಗೂ ಪಾರದರ್ಶಕವಾಗಿ ವಿದ್ಯಾರ್ಥಿ ಬಸ್ ಪಾಸ್ ಮರುಪಾವತಿ ಪ್ರಕ್ರಿಯೆ ಮೂಲಕ ಹಿಂದಿರುಗಿಸಲು ಕೆಎಸ್‌ಆರ್‌ಟಿಸಿ ಕ್ರಮ ಕೈಗೊಂಡಿದೆ.

ಈ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಗೊಂದಲವಾಗದಂತೆ ಎಚ್ಚರವಹಿಸಲಾಗಿದೆ.

ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ

ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳು ತಮ್ಮ ಹಣವನ್ನು ಮರಳಿ ಪಡೆಯಲು ಕೆಳಕಂಡ ಸರಳ ಹಂತಗಳನ್ನು ಕಡ್ಡಾಯವಾಗಿ ಅನುಸರಿಸಬೇಕಾಗಿದೆ:

1. ಸೇವಾಸಿಂಧು ಪೋರ್ಟಲ್ ಲಾಗಿನ್: 2026-27ನೇ ಸಾಲಿನಲ್ಲಿ ಶುಲ್ಕ ನೀಡಿ ಪಾಸ್ ಪಡೆದ ವಿದ್ಯಾರ್ಥಿಗಳು, ಹಣ ಮರುಪಾವತಿಗಾಗಿ ರಾಜ್ಯ ಸರ್ಕಾರದ 'ಸೇವಾಸಿಂಧು' ಪೋರ್ಟಲ್‌ನಲ್ಲಿ ನೀಡಲಾಗಿರುವ ವಿಶೇಷ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ತಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಯನ್ನು ದಾಖಲಿಸಿ, ಆ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು.

2. ಇ-ಕೆವೈಸಿ ಕಡ್ಡಾಯ: ಹಣ ಮರುಪಾವತಿ ಪ್ರಕ್ರಿಯೆ ನಿಖರವಾಗಿರಲು ಮತ್ತು ನೈಜ ಫಲಾನುಭವಿಗಳಿಗೆ ತಲುಪಲು ವಿದ್ಯಾರ್ಥಿಗಳು ತಮ್ಮ ಆಧಾರ್ ಆಧಾರಿತ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಅತ್ಯವಶ್ಯಕವಾಗಿದೆ.

3. ಬ್ಯಾಂಕ್ ಖಾತೆ ವಿವರ ಸಲ್ಲಿಕೆ: ತಂತ್ರಾಂಶದಲ್ಲಿ ವಿದ್ಯಾರ್ಥಿಗಳು ತಮ್ಮ ಸ್ವಂತ ಅಥವಾ ತಮ್ಮ ಪೋಷಕರ (ತಂದೆ/ತಾಯಿ) ಬ್ಯಾಂಕ್ ಖಾತೆಯ ನಿಖರವಾದ ವಿವರಗಳನ್ನು ತಪ್ಪಿಲ್ಲದೆ ನಮೂದಿಸಬೇಕು. ಸಂಪೂರ್ಣ ಮಾಹಿತಿ ಭರ್ತಿ ಮಾಡಿದ ಬಳಿಕ ಅರ್ಜಿಯನ್ನು ಅಂತಿಮವಾಗಿ ಸಲ್ಲಿಸಬೇಕು.

4. 7 ದಿನಗಳಲ್ಲಿ ಹಣ ಜಮಾ: ಆನ್‌ಲೈನ್ ಮೂಲಕ ಅರ್ಜಿಯನ್ನು ಯಶಸ್ವಿಯಾಗಿ ಸಲ್ಲಿಸಿದ ಕೇವಲ 7 ದಿನಗಳ ಒಳಗೆ ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಗೆ NEFT ಅಥವಾ RTGS ವ್ಯವಸ್ಥೆಯ ಮೂಲಕ ಪಾಸಿನ ಸಂಪೂರ್ಣ ಮೊತ್ತ ಮರುಪಾವತಿಯಾಗಲಿದೆ.

5. ಎಸ್‌ಎಂಎಸ್ ಮಾಹಿತಿ: ಬ್ಯಾಂಕ್ ಖಾತೆಗೆ ಹಣ ಯಶಸ್ವಿಯಾಗಿ ಜಮೆಯಾದ ತಕ್ಷಣ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಖಚಿತ ಮಾಹಿತಿ ರವಾನೆಯಾಗುತ್ತದೆ.

ವಿದ್ಯಾರ್ಥಿಗಳಿಗೆ ಪಾಸಿನ ಮೊತ್ತವು ನೇರವಾಗಿ ಬ್ಯಾಂಕ್ ಖಾತೆಗೆ ಆನ್‌ಲೈನ್ ಮೂಲಕವೇ ಜಮೆಯಾಗುವುದರಿಂದ, ಯಾವುದೇ ಸಾರಿಗೆ ನಿಗಮದ ಕಚೇರಿ, ಬಸ್ ನಿಲ್ದಾಣ ಅಥವಾ ಪಾಸ್ ಕೌಂಟರ್‌ಗಳಿಗೆ ಖುದ್ದಾಗಿ ಭೇಟಿ ನೀಡುವ ಅವಶ್ಯಕತೆ ಇರುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಅಥವಾ ಹತ್ತಿರದ ಸೈಬರ್ ಕೇಂದ್ರಗಳ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಿ ತಮ್ಮ ಹಣವನ್ನು ಹಿಂಪಡೆಯಬಹುದು.

ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆ ಹಿನ್ನೆಲೆ

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಹಾಗೂ ಅವರ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆಯು ರಾಜ್ಯದ ನಾಲ್ಕು ಪ್ರಮುಖ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವ್ಯಾಪ್ತಿಯಲ್ಲಿ ಅನ್ವಯವಾಗಲಿದೆ.

ಗ್ರಾಮೀಣ ಹಾಗೂ ನಗರ ಪ್ರದೇಶದ ಲಕ್ಷಾಂತರ ವಿದ್ಯಾರ್ಥಿಗಳು ಪ್ರತಿದಿನ ಶಿಕ್ಷಣ ಪಡೆಯಲು ಬಸ್‌ಗಳನ್ನು ಅವಲಂಬಿಸಿದ್ದು, ಈ ಉಚಿತ ಬಸ್ ಪಾಸ್ ಯೋಜನೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+