ರಾಜ್ಯದಲ್ಲಿನ 1-12 ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ
Good News: ರಾಜ್ಯದಲ್ಲಿ ಶಿಕ್ಷಣ ಇಲಾಖೆಯೂ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಇದೀಗ ಸಚಿವ ಮಧು ಬಂಗಾರಪ್ಪ ಅವರು 1-12 ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶುಭಸುದ್ದಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರ 1 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಕೊಪ್ಪ ತಾಲ್ಲೂಕಿನ ಮೆಲ್ಪಾಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಹೊಸದಾಗಿ ನಿರ್ಮಾಣ ಮಾಡಲಾದ ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಈ ಮಹತ್ವದ ಘೋಷಣೆಯನ್ನು ಸಚಿವ ಬಂಗಾರಪ್ಪ ಅವರು ಮಾಡಿದರು. 10ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮೊಟ್ಟೆಗಳ ಪೂರೈಕೆಯನ್ನ ವಿಸ್ತರಣೆ ಮಾಡುವುರ ಜೊತೆಗೆ, ಶೂ ಮತ್ತು ಸಾಕ್ಸ್‌ಗಳ ಪೂರೈಕೆ ಹಾಗೂ ಉಚಿತ ನೋಟ್‌ಬುಕ್ ಹಾಗೂ ಪಠ್ಯಪುಸ್ತಕಗಳನ್ನು ಕೊಡಲಾಗುವುದು ಎಂದು ಹೇಳಿದರು.
ವಿದ್ಯಾರ್ಥಿಗಳ ಪೋಷಣೆಯನ್ನು ಸುಧಾರಣೆ ಮಾಡಲು ಹಾಲು ಮತ್ತು ರಾಗಿ ಜೊತೆಗೆ ಮೊಟ್ಟೆಗಳನ್ನು ಒದಗಿಸಲಾಗುತ್ತದೆ. ರಾಜ್ಯದಲ್ಲಿ ಸುಮಾರು 57,00,000 ವಿದ್ಯಾರ್ಥಿಗಳಿಗೆ ಪ್ರಸ್ತುತ ಮಧ್ಯಾಹ್ನದ ಊಟವನ್ನು ನೀಡಲಾಗುತ್ತಿದೆ ಎಂದು ಹೇಳಿದರು. ಇನ್ನೂ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಭರವಸೆಯನ್ನು ಸರ್ಕಾರ ಉಳಿಸಿಕೊಂಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ತಿಂಗಳೊಳಗೆ 13,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಉಳಿದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮತ್ತೊಂದು ಸುತ್ತಿನ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲಾಗುವುದು. ಈ ಶೈಕ್ಷಣಿಕ ವರ್ಷದಲ್ಲಿ 51,000 ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆ ಆರಂಭ ಆಗಿದೆ. 10ನೇ ತರಗತಿಯ ಪರೀಕ್ಷಾ ವ್ಯವಸ್ಥೆ ಬದಲಾವಣೆ ಆಗಿದೆ. ಪಿಯುಸಿಯ ಮೊದಲ ವರ್ಷಕ್ಕೆ ಪ್ರವೇಶಿಸಲು 1,16,000 ವಿದ್ಯಾರ್ಥಿಗಳು ಎರಡನೇ ಮತ್ತು ಮೂರನೇ ಪೂರಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದರು. 2025ರಲ್ಲಿ 625 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ 51ಕ್ಕೆ ಏರಿಕೆ ಆಗಿದೆ. ನಮ್ಮ ಸರ್ಕಾರವು 6,000 ಕರ್ನಾಟಕ ಸಾರ್ವಜನಿಕ ಶಾಲೆಗಳನ್ನು ಪ್ರಾರಂಭ ಮಾಡಲು ಯೋಚಿಸುತ್ತಿದೆ ಎಂದು ಹೇಳಿದರು.












Click it and Unblock the Notifications