ಮಂಡ್ಯ ಗಲಭೆ ಬೆನ್ನಲ್ಲೇ ಗುಪ್ತಚರ ಇಲಾಖೆಗೆ ಮೇಜರ್‌ ಸರ್ಜರಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ಗಲಭೆ ಬೆನ್ನಲ್ಲೇ ರಾಜ್ಯ ಸರ್ಕಾರವು ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಹಿರಿಯ ಪೊಲೀಸ್‌ ಅಧಿಕಾರಿ ಕೆ.ವಿ.ಶರತ್‌ ಚಂದ್ರ ಅವರನ್ನು ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಯಿಂದ ಕೆಳಗಿಳಿಸಿದೆ.

ಅಧಿಕಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಗುಪ್ತಚರ ಇಲಾಖೆಯ ನೂತನ ಎಡಿಜಿಪಿಯಾಗಿ‌ ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿಯೂ ನಿಂಬಾಳ್ಕರ್‌ ಮುಂದುವರಿಯಲಿದ್ದಾರೆ.

Karnataka Government Appointed New ADGP For Intelligence Department

ಶರತ್‌ ಚಂದ್ರ ಅವರನ್ನು ಪೊಲೀಸ್‌ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇದರ ಜೊತೆಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಮುಖ್ಯಸ್ಥರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇನ್ನು ಎಡಿಜಿಪಿ ಅಲೋಕ್‌ ಕುಮಾರ್‌ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.

ಈ ಹಿಂದೆಯೂ ಸಿದ್ದರಾಮಯ್ಯ ಅವರ ಅಧಿಕಾರವಧಿಯಲ್ಲಿ ಹೇಮಂತ್‌ ನಿಂಬಾಳ್ಕರ್‌ ಅವರು ಗುಪ್ತಚರ ಇಲಾಖೆಯಲ್ಲೇ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ರಾಜ್ಯದಲ್ಲಿ ದುರ್ಘಟನೆಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ನಿಂಬಾಳ್ಕರ್‌ ಅವರನ್ನೇ ಗುಪ್ತಚರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿಯು ಇದೀಗ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಸಿದೆ. ಅಲ್ಲದೆ ಈ ಗಲಭೆಯು ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದ್ದು, ಕಾಂಗ್ರೆಸ್‌-ಬಿಜೆಪಿ ನಡುವೆ ಕಿತ್ತಾಟಕ್ಕೂ ಕಾರಣವಾಗಿದೆ.

Karnataka Government Appointed New ADGP For Intelligence Department

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮೊನ್ನೆ (ಬುಧವಾರ) ರಾತ್ರಿ ಗಣೇಶ ಮೂರ್ತಿಯ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆದಿತ್ತು. ನಾಗಮಂಗಲದ ಮಂಡ್ಯ ಸರ್ಕಲ್‌ನಲ್ಲಿ ಗಣೇಶ ವಿಸರ್ಜನೆಯ ಅಂಗವಾಗಿ ಮೂರ್ತಿಯನ್ನು ಮೆರವಣಿಗೆಗೆ ತಂದಿದ್ದ ವೇಳೆ ಇಲ್ಲಿನ ದರ್ಗಾ ಬಳಿ ಏಕಾಏಕಿ ಕಲ್ಲು ತೂರಾಟ ನಡೆದಿತ್ತು.

ಮೆರವಣಿಗೆ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಕೆಲವರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಪೆಟ್ರೋಲ್‌ ಬಾಂಬ್‌ ಎಸೆದು ಸಿಕ್ಕ ಸಿಕ್ಕಲ್ಲಿ ಬೆಂಕಿ ಕೂಡ ಹಚ್ಚಿದ್ದರು. ಅಲ್ಲಿದ್ದ ಕೆಲ ವಾಹನಗಳಿಗೂ ಕೂಡ ಬೆಂಕಿ ಹಚ್ಚಿದ್ದು, ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದರು.

ಮತ್ತೊಂದೆಡೆ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳು ಬೆಚ್ಚಿಬೀಳಿಸುವ ಸಂಗತಿ ಹೊರಗಿಟ್ಟಿದ್ದರು. ಈ ಸ್ಫೋಟಕ್ಕೂ ಮುನ್ನ ಆರೋಪಿಗಳು ಬೆಂಗಳೂರಿನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ವಿಚಾರವನ್ನು ಮೊನ್ನೆಯಷ್ಟೇ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದರು.

ಹಾಗಾಗಿ, ರಾಜ್ಯದಲ್ಲಿ ಇಂತಹ ಘಟನೆಗಳು ನಡೆದಂತೆ ಕಟ್ಟೆಚ್ಚರ ವಹಿಸಬೇಕು ಎಂಬ ಕಾರಣಕ್ಕೆ ಅಧಿಕಾರಿಗಳ ದಿಢೀರ್‌ ವರ್ಗಾವಣೆ ಮಾಡಲಾಗಿದ್ದು, ಅದರಲ್ಲೂ ಗುಪ್ತಚರ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮೇಜರ್‌ ಸರ್ಜರಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+