ರಾಜ್ಯದ ಶಾಲಾ ಶಿಕ್ಷಕರಿಗೆ ಪಿಂಚಣಿ ಯೋಜನೆ ಕುರಿತು ಗುಡ್ ನ್ಯೂಸ್
ಬೆಂಗಳೂರು, ನವೆಂಬರ್ 20: ರಾಜ್ಯದಲ್ಲಿ ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು.. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲು ಈ ವರ್ಷದಲ್ಲಿ ನೇಮಕಗೊಂಡ ಶಿಕ್ಷಕರು ಅರ್ಹರು ಎಂದು ತಿಳಿಸಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಏಪ್ರಿಲ್ 1, 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಹಳೆಯ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಸಂಬಂಧ ಮಾಹಿತಿಯನ್ನು ಸಿದ್ಧಪಡಿಸಿ ಕಚೇರಿಗೆ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದುವಂದಿದೆ.

ಸದರಿ ಮಾಹಿತಿಯನ್ನಯ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಈ ಸಂಬಂಧ ದೃಡೀಕರಣ ಪತ್ರವನ್ನು ಸಲ್ಲಿಸಲು ಸೂಚಿಸಲಾಗಿದ್ದು, ಅದರಂತೆಯೇ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ದೃಢೀಕರಿಸಲಾಗಿದೆ ಎಂದು ತಿಳಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಲ್ಲಿ ಏಪ್ರಿಲ್ 1, 2006 ಪೂರ್ವದಲ್ಲಿ ಹೊರಡಿಸಲಾಗಿರುವ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿ ಅಥವಾ ತದನಂತರ ನೇಮಕಗೊಂಡ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಮಾರ್ಚ್ 10, 2025ರ ಪತ್ರದೊಂದಿಗೆ ಸಲ್ಲಿಕೆ ಮಾಡಲಾಗಿದೆ.
ಒಟ್ಟು 2,302 ಪ್ರಾಥಮಿಕ ಶಾಲಾ ಶಿಕ್ಷಕರ ಮಾಹಿತಿಯನ್ನು ಪರಿಶೀಲನೆ ಮಾಡಲಾಗಿದೆ. ಈ ಪ್ರಾಥಮಿಕ ಶಾಲಾ ಶಿಕ್ಷಕರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಅರ್ಹರಿರಾಗಿದ್ದಾರೆ ಎಂದು ಈ ಮೂಲಕ ದೃಡೀಕರಿಸಿದೆ ಎಂದು ತಿಳಿಸಲಾಗಿದ ಎಂದು ಉಲ್ಲೇಖ ಮಾಡಲಾಗಿದೆ.
ಪೂರ್ವ ಪ್ರಾಥಮಿಕ ತರಗತಿ ಬಗ್ಗೆ ಮಾಹಿತಿ: ಇನ್ನೂ ಮತ್ತೊಂದೆಡೆ ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 4,056 ಸರ್ಕಾರಿ ಶಾಲೆಗಳಲ್ಲಿ 2025-26 ಸಾಲಿನಿಂದಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಪ್ರಸ್ತುತ ರಾಜ್ಯದ 2,619 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ನಡೆಯುತ್ತಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ಈ ಪೈಕಿ 90,195 ಮಕ್ಕಳು ದಾಖಲಾಗಿದ್ದಾರೆ. ಈ ಯೋಜನೆಯನ್ನು 70 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟಾರೆ ಐದು ಸಾವಿರ ಶಾಲೆಗಳಿಗೆ ವಿಸ್ತರಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಅದರಂತೆಯೇ ಹೊಸದಾಗಿ ಈ ಸಾಲಿನಿಂದಲೇ ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications