ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ಲಾಸ್ಟಿಕ್‌ ರಾಷ್ಟ್ರಧ್ವಜದ ಬಳಕೆ ನಿಷೇಧಿಸಿದ ಸರ್ಕಾರ

|
Google Oneindia Kannada News

ಬೆಂಗಳೂರು, ಜ. 19 : ಕರ್ನಾಟಕ ಸರ್ಕಾರ ಪ್ಲಾಸ್ಟಿಕ್‌ ರಾಷ್ಟ್ರಧ್ವಜದ ಬಳಕೆ ನಿಷೇಧಿಸಿ ಆದೇಶ ಹೊರಡಿಸಿದೆ. ಧ್ವಜವನ್ನು ಮಾರಾಟ ಮಾಡಿದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.

ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಈ ಆದೇಶವನ್ನು ಹೊರಡಿಸಿದೆ. ಭಾರತ ಧ್ವಜ ಸಂಹಿತೆ-2002ರ ನಿಯಮಗಳ ಅನ್ವಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರದ ಧ್ವಜವನ್ನು ಸಾರ್ವಜನಿಕವಾಗಿ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ.

plastic flags

ಸರ್ಕಾರದ ಆದೇಶದ ಅನ್ವಯ ಉಣ್ಣೆ, ಹತ್ತಿ, ರೇಷ್ಮೆ ಬಟ್ಟೆಗಳಿಂದ ತಯಾರಿಸಲಾದ ರಾಷ್ಟ್ರಧ್ವಜವನ್ನು ಮಾತ್ರ ಸಾರ್ವಜನಿಕರು ಬಳಸಬೇಕು ಎಂದು ಸ್ಪಷ್ಟಪಡಿಸಿದೆ. ರಾಷ್ಟ್ರಧ್ವಜದ ಗೌರವಕ್ಕೆ ಕುಂದು ಬರದಂತೆ ವಿದ್ಯಾರ್ಥಿಗಳು, ಸಾರ್ವಜನಿಕರು ಸಹಕರಿಸಬೇಕು ಎಂದು ಆದೇಶದಲ್ಲಿ ಮನವಿ ಮಾಡಲಾಗಿದೆ. [ಗಣರಾಜ್ಯೋತ್ಸವದಲ್ಲಿ ಚನ್ನಪಟ್ಟಣದ ಗೊಂಬೆಗಳ ಕಲರವ]

ನಿಷೇಧದ ನಡುವೆಯೂ ಪ್ಲಾಸ್ಟಿಕ್ ಧ್ವಜವನ್ನು ಅಂಗಡಿಗಳಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

ಗಣರಾಜ್ಯೋತ್ಸವ ಹತ್ತಿರವಾಗುತ್ತಿದ್ದು ರಸ್ತೆ ಬದಿಗಳಲ್ಲಿ ಮತ್ತು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಧ್ವಜವನ್ನು ಮಾರಾಟ ಮಾಡಲಾಗುತ್ತದೆ. ಇದನ್ನು ಅರಿತ ಸರ್ಕಾರ ಒಂದು ವಾರದ ಮೊದಲೇ ನಿಷೇಧದ ಆದೇಶವನ್ನು ಹೊರಡಿಸಿದೆ.

English summary
Karnataka government has banned the use of plastic flags during the Republic Day celebrations. The ban is in view of the National Flag Code of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X