ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗೆ ಬ್ರೇಕ್: ಯಾವ ಹಬ್ಬಗಳ ಆಚರಣೆ ಸರ್ಕಾರ ಸೂಚನೆ

ಬೆಂಗಳೂರು, ಫೆಬ್ರವರಿ 15: ಕರ್ನಾಟಕದ ಎಲ್ಲ ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಸುತ್ತೋಲೆ ಹೊರಡಿಸಿದ್ದು, ಉಲ್ಲಂಘಿಸಿದಲ್ಲಿ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಹೌದು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ. ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುವಂತೆ ಆದೇಶಿಸಲಾಗಿದೆ.

Karnataka Government Bans Religious Festival Celebrations In Schools And Colleges

ವಸತಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕು. ರಾಷ್ಟ್ರೀಯ ಹಬ್ಬಗಳಲ್ಲದೇ ಇತರೆ ಧಾರ್ಮಿಕ ಹಬ್ಬಗಳಾದ ಯುಗಾದಿ, ರಂಜಾನ್, ಕ್ರಿಸ್‌ಮಸ್, ಈದ್ ಮಿಲಾದ್, ಸಂಕ್ರಾಂತಿ ಇತರೆ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿದೆ.

ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಸುತ್ತೋಲೆಯನ್ನು ಹೊರಡಿಸಿದೆ. ಕೇವಲ 10 ರಾಷ್ಟ್ರೀಯ ಹಬ್ಬಗಳ ಆಚರಣೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಧಾರ್ಮಿಕ ಹಬ್ಬಗಳನ್ನು ಆಚರಿಸಿದರೆ ಆಯಾ ಪ್ರಿನ್ಸಿಪಾಲರು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.

ಯಾವ ಹಬ್ಬಗಳ ಆಚರಣೆ ಸರ್ಕಾರ ಒಪ್ಪಿಗೆ

1) ಗಣರಾಜ್ಯೋತ್ಸವ
2) ಸ್ವಾತಂತ್ರ್ಯ ದಿನಾಚರಣೆ
3) ಗಾಂಧಿ ಜಯಂತಿ
4) ಕನ್ನಡ ರಾಜ್ಯೋತ್ಸವ
5) ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ
6) ವಾಲ್ಮೀಕಿ ಜಯಂತಿ
7) ಕನಕದಾಸ ಜಯಂತಿ
8) ಬಸವ ಜಯಂತಿ
9) ಸಂವಿಧಾನ ಜಯಂತಿ
10) ಯೋಗ ದಿನಾಚರಣೆ

ಸರ್ಕಾರದ ಸುತ್ತೋಲೆಯಲ್ಲೇನಿದೆ?

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕಾಗಿರುತ್ತದೆ. ಆದರೆ ಕೆಲವು ರಾಷ್ಟ್ರೀಯ ಹಬ್ಬಗಳಲ್ಲದೇ ಇತರೆ ಧಾರ್ಮಿಕ ಹಬ್ಬಗಳಾದ ಯುಗಾದಿ, ರಂಜಾನ್, ಕ್ರಿಸ್‌ಮಸ್, ಈದ್ ಮಿಲಾದ್, ಸಂಕ್ರಾಂತಿ ಇತರೆ ಹಬ್ಬಗಳನ್ನು ಆಚರಣೆ ಮಾಡುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಮಾನ್ಯ ಸಚಿವರು, ಸಮಾಜ ಕಲ್ಯಾಣ ಇಲಾಖೆ ಅವರು ಉಲ್ಲೇಖಿತ ಟಿಪ್ಪಣಿಯಲ್ಲಿ ಅನುಮೋದಿಸಿರುವಂತೆ ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಈ ಕೆಳಕಂಡ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+